ಮಧ್ಯಪ್ರದೇಶ ಚುನಾವಣೆ 2023; ಅಧಿಕಾರಕ್ಕಾಗಿ ತೀವ್ರ ಪೈಪೋಟಿ!
ಭೋಪಾಲ್, ನವೆಂಬರ್ 30: ಮಧ್ಯಪ್ರದೇಶ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಅಧಿಕಾರಕ್ಕೆ ಭಾರೀ ಪೈಪೋಟಿ ನಡೆಯಲಿದೆ ಎಂದು ಚುನಾವಣೋತ್ತರ ಸಮೀಕ್ಷೆ ಅಂದಾಜಿಸಿದೆ. ಚುನಾವಣಾ ಪೂರ್ವ ಸಮೀಕ್ಷೆಗಳು ಬಿಜೆಪಿ ಅಧಿಕಾರ ಕಳೆದುಕೊಳ್ಳಲಿವೆ ಎಂದು ಅಂದಾಜಿಸಿತ್ತು. ಆದರೆ ಚುನಾವಣೋತ್ತರ ಸಮೀಕ್ಷೆಯಲ್ಲಿ ಲೆಕ್ಕಾಚಾರಗಳು ಬದಲಾದಂತೆ ಕಾಣುತ್ತಿವೆ.
230 ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 17ರ ಶುಕ್ರವಾರ ಒಂದೇ ಹಂತದಲ್ಲಿ ಮತದಾನ ನಡೆದಿತ್ತು. ಗುರುವಾರ ವಿವಿಧ ಸಂಸ್ಥೆಗಳು ನಡೆಸಿದ ಚುನಾವಣೋತ್ತರ ಸಮೀಕ್ಷೆಗಳ ಫಲಿತಾಂಶ ಪ್ರಕಟವಾಗಿವೆ. ಡಿಸೆಂಬರ್ 3ರ ಭಾನುವಾರ ಮತ ಎಣಿಕೆ ನಡೆಯಲಿದೆ.

POLL START ಮಧ್ಯಪ್ರದೇಶ ರಾಜ್ಯದ ಚುನಾವಣೆ ಕುರಿತು ನಡೆಸಿದ ಚುನಾವಣೋತ್ತರ ಸಮೀಕ್ಷೆ ರಾಜ್ಯದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಹಣಾಹಣಿ ಇದೆ ಎಂದು ಅಂದಾಜಿಸಿವೆ. ಆದರೆ ಕಾಂಗ್ರೆಸ್‌ಗೆ ಸರಳ ಬಹುಮತ ನೀಡಿದೆ.
2024ರ ಲೋಕಸಭೆ ಚುನಾವಣೆಗೂ ಮೊದಲು ನಡೆಯುತ್ತಿರುವ 5 ರಾಜ್ಯಗಳ ಚುನಾವಣಾ ಫಲಿತಾಂಶ ದೇಶಾದ್ಯಂತ ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ 5 ರಾಜ್ಯಗಳ ಪೈಕಿ ಎಷ್ಟು ರಾಜ್ಯದಲ್ಲಿ ಜಯಗಳಿಸಲಿದೆ ಎಂದು ರಾಜಕೀಯ ತಜ್ಞರು ಲೆಕ್ಕಾಚಾರ ಹಾಕುತ್ತಿದ್ದಾರೆ.
POLL START ನಡೆಸಿದ ಚುನಾವಣೋತ್ತರ ಸಮೀಕ್ಷೆಯ ಪ್ರಕಾರ ಬಿಜೆಪಿ 106-116, ಕಾಂಗ್ರೆಸ್ 111-121, ಇತರರು 8 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ. 2018ರ ಚುನಾವಣೆಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದ ಕಾಂಗ್ರೆಸ್ ಎಸ್ಪಿ, ಬಿಎಸ್‌ಪಿ ಜೊತೆ ಸೇರಿ ಸರ್ಕಾರ ರಚನೆ ಮಾಡಿತ್ತು.
ಆದರೆ 2020ರಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಂಡು ಮುಖ್ಯಮಂತ್ರಿ ಕಮಲ್ ನಾಥ್ ರಾಜೀನಾಮೆ ನೀಡಿದ್ದರು. ಆಗ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿತ್ತು. ಶಿವರಾಜ್ ಸಿಂಗ್ ಚೌವ್ಹಾಣ್ ಮುಖ್ಯಮಂತ್ರಿಯಾಗಿದ್ದರು. ಈ ಬಾರಿ ಬಿಜೆಪಿ ಅಧಿಕಾರ ಕಳೆದುಕೊಳ್ಳಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳಿದ್ದವು.
ಮಧ್ಯಪ್ರದೇಶ ರಾಜ್ಯದ ಒಟ್ಟು ವಿಧಾನಸಭಾ ಕ್ಷೇತ್ರಗಳು 230. ರಾಜ್ಯದಲ್ಲಿ ಸರ್ಕಾರ ರಚನೆ ಮಾಡಲು ಬೇಕಾದ ಮ್ಯಾಜಿಕ್ ನಂಬರ್ 116. MATRIZ ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿ 118-130, ಕಾಂಗ್ರೆಸ್ 97-107 ಮತ್ತು ಇತರರು 2 ಸ್ಥಾನಗಳಲ್ಲಿ ಜಯಗಳಿಸಲಿದ್ದಾರೆ.












Click it and Unblock the Notifications