ಕಾಂಗ್ರೆಸ್ ಪಕ್ಷಕ್ಕೆ ಬಡವರ ಮತ ಮಾತ್ರ ಬೇಕು
ಶಾಂದೋಲ್ (ಮಧ್ಯಪ್ರದೇಶ), ನ. 20 : ಪ್ರತಿ ಚುನಾವಣೆ ವೇಳೆಯಲ್ಲಿಯೂ ಕಾಂಗ್ರೆಸ್ ನಾಯಕರು ದಿನಕ್ಕೆ 50 ಬಾರಿ ಬಡತನ ಕುರಿತಾಗಿ ಭಾಷಣ ಬಿಗಿಯುತ್ತಾರೆ, ಆದರೆ, ಯಾವ ಅಭಿವೃದ್ದಿ ಯೋಜನೆಗಳನ್ನು ಬಡವರಿಗಾಗಿ ಜಾರಿಗೆ ತರುವುದಿಲ್ಲ ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
ನ.25 ರಂದು ವಿಧಾನಸಭೆ ಚುನಾವಣೆಯ ನಡೆಯಲಿರುವ ಮಧ್ಯಪ್ರದೇಶದಲ್ಲಿ ಬುಧವಾರ ನರೇಂದ್ರ ಮೋದಿ ಚುನಾವಣಾ ಪ್ರಚಾರ ನಡೆಸಿದರು. ಶಾಂದೋಲ್ ನಲ್ಲಿ ಸಮಾವೇಶ ಉದ್ದೇಶಿಸಿ ಮಾತನಾಡಿದ ಅವರು, ಕೇವಲ ಬಡತನದ ಬಗ್ಗೆ ಮಾತನಾಡುವ ಕಾಂಗ್ರೆಸ್ ಸಂದಸದರನ್ನು ತರಾಟೆಗೆ ತೆಗೆದುಕೊಂಡರು. ಭಾರತದ ಜನರು ಕಾಂಗ್ರೆಸ್ ಪಕ್ಷದ ವಿರುದ್ಧ ಕೆರಳಿದ್ದಾರೆ. ಆದ್ದರಿಂದ ಮುಂದಿನ ಚುನಾವಣೆಯಗಳಲ್ಲಿ ಅವರು ಪಕ್ಷಕ್ಕೆ ಸರಿಯಾದ ಪಾಠ ಕಲಿಸುತ್ತಾರೆ ಎಂದು ಮೋದಿ ಹೇಳಿದರು.

60 ವರ್ಷಗಳ ಕಾಲ ಅಧಿಕಾರ ನಡೆಸಿದ ಕಾಂಗ್ರೆಸ್ ಮಕ್ಕಳು ಮತ್ತು ಮಹಿಳೆಯ ಅಭಿವೃದ್ಧಿಗಾಗಿ ಯಾವೊಂದು ಯೋಜನೆಗಳನ್ನು ಪ್ರಕಟಿಸಿಲ್ಲ. ಆದ್ದರಿಂದ, ಜನರು ಕಾಂಗ್ರೆಸ್ ವಿರುದ್ಧ ಜನರು ಸಿಡಿದೆದ್ದಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ಬಡತನದ ಬಗ್ಗೆ ಭಾಷಣ ಮಾಡಲು ಮಾತ್ರ ಬರುತ್ತದೆ. ಬಡತನ ಮುಂದಿಟ್ಟುಕೊಂಡು ಕಾಂಗ್ರೆಸ್ ಮತ ಕೇಳುತ್ತದೆ ಎಂದು ಮೋದಿ ಆರೋಪಿಸಿದರು.
ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಉತ್ತಮ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ಬುಡಕಟ್ಟು ಜನಾಂಗದ ಅಭಿವೃದ್ಧಿಗಾಗಿ ಬಿಜೆಪಿ ಶ್ರಮಿಸುತ್ತಿದೆ. ಕೇಂದ್ರದಲ್ಲಿ ಬುಡಕಟ್ಟು ಜನಾಂಗದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಅನ್ನು ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮಂಡಿಸಿದ್ದರು. ಆದರೆ, ಯುಪಿಎ ಸರ್ಕಾರ ಬುಡಕಟ್ಟು ಜನರ ಅಭಿವೃದ್ಧಿಗಾಗಿ ಏನು ಮಾಡಿದೆ ಎಂದು ಮೋದಿ ಪ್ರಶ್ನಿಸಿದರು.











Click it and Unblock the Notifications