ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಿಎಸ್ಟಿ: ವ್ಯಾಪಾರಿಗಳಿಗೆ ಕೇಂದ್ರದಿಂದ ತೆರಿಗೆ ರಿಯಾಯಿತಿ ಸಾಧ್ಯತೆ

By Sachhidananda Acharya
|
Google Oneindia Kannada News

ನವದೆಹಲಿ, ನವೆಂಬರ್ 5: ಜಿಎಸ್ಟಿ ಜಾರಿಯಿಂದ ತೊಂದರೆಗೊಳಗಾಗಿರುವ ವ್ಯಾಪಾರಿಗಳು ಮತ್ತು ಸಣ್ಣ ಉದ್ಯಮಿಗಳಿಗೆ ಮುಂದಿನ ವಾರ ಕೇಂದ್ರ ಸರಕಾರ ಸಹಾಯ ಹಸ್ತ ಚಾಚುವ ಸಾಧ್ಯತೆ ಇದೆ. ಜಿಎಸ್ಟಿ ಜಾರಿಯಿಂದ ತಾವು ಹೆಚ್ಚು ತೆರಿಗೆ ಪಾವತಿಸಬೇಕಾಗಿದೆ ಮತ್ತು ಆಡಳಿತ ವೆಚ್ಚ ಹೆಚ್ಚಾಗುತ್ತಿದೆ ಎಂದು ಈ ವರ್ಗದವರು ಅಸಮಧಾನ ವ್ಯಕ್ತಪಡಿಸಿದ್ದರು.

ನವೆಂಬರ್ 9 ಅಥವಾ 10ರಂದು ಜಿಎಸ್ಟಿ ಕೌನ್ಸಿಲ್ ಸಭೆ ನಡೆಯಲಿದ್ದು ವ್ಯಾಪಾರಿಗಳಿಗೆ ಸಹಾಯ ಮಾಡಲು ಮತ್ತು ದೇಶದ ಆರ್ಥಿಕತೆಯನ್ನು ಗಟ್ಟಿಗೊಳಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ನರೇಂದ್ರ ಮೋದಿ ಹೇಳಿದ್ದಾರೆ.

Possibility of Tax Relief to Traders Affected By GST

ಕಳೆದ ತಿಂಗಳು ಸಚಿವರ ಸಮಿತಿಯು ಸಣ್ಣ ಉದ್ಯಮಿಗಳು ಮತ್ತು ವ್ಯಾಪಾರಿಗಳ ತೆರಿಗೆ ಕಡಿತಗೊಳಿಸುವಂತೆ ಜಿಎಸ್ಟಿ ಮಂಡಳಿಗೆ ಶಿಫಾರಸ್ಸು ಮಾಡಿತ್ತು. ಕಂಪೆನಿಗಳು ತೆರಿಗೆ ಪಾವತಿಸಬೇಕಾದ ಗರಿಷ್ಠ ಮಿತಿಯನ್ನೂ ಏರಿಸುವಂತೆ ಸಮಿತಿ ಶಿಫಾರಸ್ಸು ಮಾಡಿತ್ತು.

ಈ ಹಿನ್ನಲೆಯಲ್ಲಿ ವ್ಯಾಪಾರಿಗಳು ಮತ್ತು ಉದ್ಯಮಿಗಳ ನೆರವಿಗೆ ಕೇಂದ್ರ ಸರಕಾರ ಧಾವಿಸುವ ಸಾಧ್ಯತೆ ಇದೆ.

English summary
Union government may announce measures next week to help traders and small businesses who say goods and services tax (GST) has increased their tax and administrative burden.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X