Narendra Modi: ವಾರಣಾಸಿಯಲ್ಲಿ ಮತದಾನ: ಇದೇ ದಿನ ಮೋದಿ ಈ ಸ್ಥಳದಲ್ಲಿ ಧ್ಯಾನ
ಭಾರತದಲ್ಲಿ ಆರು ಹಂತದ ಚುನಾವಣೆಗಳು ಮುಗಿದಿದೆ. ಇನ್ನು ಕೇವಲ ಒಂದು ಹಂತದ ಚುನಾವಣಾ ಮತದಾನ ಮಾತ್ರ ಬಾಕಿ ಇದೆ. ಜೂನ್ 1 ರಂದು ಕೊನೆಯ ಹಂತದ ಚುನಾವಣೆ ನಡೆಯಲಿದೆ. ಇದಾದ ಬಳಿಕ ಜೂನ್ 4 ರಂದು ಚುನಾವಣಾ ಫಲಿತಾಂಶ ಹೊರ ಬೀಳಲಿದೆ.
ಪ್ರಸಕ್ತ ಸಾಲಿನ ಅಂತಿಮ ಹಂತದ ಮತದಾನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ತಮಿಳುನಾಡು ಪ್ರವಾಸ ಕೈಗೊಳ್ಳಲಿದ್ದಾರೆ. ಈ ವೇಳೆ ಅವರು ವಿವೇಕಾನಂದ್ ರಾಕ್ ಸ್ಮಾರಕದ ಮೇಲೆ ಕುಳಿತು ಧ್ಯಾನ ಮಾಡಲಿದ್ದಾರೆ. ಈ ಪ್ರವಾಸವು ಮೇ 30 ರಿಂದ ಜೂನ್ 1 ರವರೆಗೆ ಇರುತ್ತದೆ. ಎರಡು ದಿನಗಳ ಕಾಲ ಪ್ರಧಾನಿ ಮೋದಿ ರಾಕ್ ಸ್ಮಾರಕದಲ್ಲಿ ಧ್ಯಾನ ಮಾಡಲಿದ್ದಾರೆ. ಸ್ವಾಮಿ ವಿವೇಕಾನಂದರು ಧ್ಯಾನ ಮಾಡಿದ ಸ್ಥಳದಲ್ಲಿಯೇ ಈ ಮಂಟಪವನ್ನು ನಿರ್ಮಿಸಲಾಗಿದೆ.

ನರೇಂದ್ರ ಮೋದಿ ಅಧಿಕೃತ ಕಾರ್ಯಕ್ರಮದ ಪ್ರಕಾರ, ಅವರು ಕನ್ಯಾಕುಮಾರಿ ಪ್ರವಾಸಕ್ಕೂ ಮೊದಲು ಮೇ 30 ರಂದು ಬೆಳಿಗ್ಗೆ 11 ಗಂಟೆಗೆ ಹೋಶಿಯಾರ್‌ಪುರದಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದಾದ ಬಳಿಕ ತಮಿಳುನಾಡಿಗೆ ತೆರಳಿ ಅಲ್ಲಿ ರಾತ್ರಿ ವಿಶ್ರಾಂತಿ ಪಡೆಯಲಿದ್ದಾರೆ.
ಏಳನೇ ಹಂಥದ ಮತದನಾ
ಜೂನ್ ಒಂದು ರಂದು ಭಾರತದಲ್ಲಿ ಕೊನೆಯ ಹಂತದ ಚುನಾವಣೆಗಳು ನಡೆಯಲಿವೆ. ಈ ವೇಳೆ ಎಂಟು ರಾಜ್ಯಗಳ 54 ಲೋಕಸಭಾ ಕ್ಷೇತ್ರಗಳಿಗೆ ಜನರು ತಮ್ಮ ಅಭ್ಯರ್ಥಿಯನ್ನು ಆಯ್ಕೆ ಮಾಡಲಿದ್ದಾರೆ. ವಿಶೇಷವೆಂದರೆ ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದಲ್ಲೂ ಅಂದೇ ಮತದಾನ ನಡೆಯಲಿದೆ. ತಮ್ಮ ಕ್ಷೇತ್ರದಲ್ಲಿ ಮತದಾನ ನಡೆಯುತ್ತಿದ್ದಾಗ ಮೋದಿ ಕನ್ಯಾಕುಮರಿಯಲ್ಲಿ ಧ್ಯಾನ ಮಾಡುತ್ತಿರುತ್ತಾರೆ. ಈ ಭೇಟಿಯ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಕನ್ಯಾಕುಮಾರಿಗೆ ತೆರಳುವ ಮೂಲಕ ರಾಷ್ಟ್ರೀಯ ಏಕತೆಯ ಸಂಕೇತ ನೀಡುತ್ತಿದ್ದಾರೆ.
ಕೇದಾರನಾಥದಲ್ಲಿ ಧ್ಯಾನ
2019ರ ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನದ ವೇಳೆ ಪ್ರಧಾನಿ ಮೋದಿ ಕೇದಾರನಾಥಕ್ಕೆ ತೆರಳಿದ್ದರು. ಆ ಸಮಯದಲ್ಲಿ ಅವರು ರುದ್ರ ಗುಹೆಯಲ್ಲಿ ಧ್ಯಾನ ಮಾಡಿದ್ದರು. 2014 ರಲ್ಲಿ ಅವರು ಶಿವಾಜಿಯ ಪ್ರತಾಪಗಢಕ್ಕೆ ಭೇಟಿ ನೀಡಿದ್ದರು. ಲೋಕಸಭೆ ಚುನಾವಣೆಯ ಕೊನೆಯ ಹಂತದ ಮತದಾನ ಜೂನ್ 1 ರಂದು ನಡೆಯಲಿದೆ.

ಭಾರತಮಾತೆಯ ದರ್ಶನ
ಸ್ವಾಮಿ ವಿವೇಕಾನಂದರು ಭಾರತಮಾತೆಯ ದರ್ಶನ ಪಡೆದ ಸ್ಥಳ ಕನ್ಯಾಕುಮಾರಿ. ಈ ಬಂಡೆಯು ಸ್ವಾಮಿ ವಿವೇಕಾನಂದರ ಜೀವನದ ಮೇಲೆ ದೊಡ್ಡ ಪ್ರಭಾವ ಬೀರಿದೆ. ಆದರೆ, ಗೌತಮ ಬುದ್ಧನ ಜೀವನದಲ್ಲಿ ಸಾರನಾಥಕ್ಕೆ ವಿಶೇಷವಾದ ಸ್ಥಾನವಿದೆ ಎಂಬ ನಂಬಿಕೆ. ಸ್ವಾಮಿ ವಿವೇಕಾನಂದರು ದೇಶಾದ್ಯಂತ ಸಂಚರಿಸಿ ಇಲ್ಲಿಗೆ ತಲುಪಿ ಮೂರು ದಿನಗಳ ಕಾಲ ತಪಸ್ಸು ಮಾಡಿ ಅಭಿವೃದ್ಧಿ ಹೊಂದಿದ ಭಾರತದ ಕನಸು ಕಂಡರು.
ಅದೇ ಸ್ಥಳದಲ್ಲಿ ಧ್ಯಾನ ಮಾಡುವುದರಿಂದ ಅಭಿವೃದ್ಧಿ ಹೊಂದಿದ ಭಾರತದ ಬಗ್ಗೆ ಸ್ವಾಮೀಜಿ ಅವರ ದೃಷ್ಟಿಗೆ ಜೀವ ತುಂಬಲು ಪ್ರಧಾನಿ ನರೇಂದ್ರ ಮೋದಿ ಅವರ ಬದ್ಧತೆಯನ್ನು ಪ್ರತಿಬಿಂಬಿಸುತ್ತದೆ. ಕನ್ಯಾಕುಮಾರಿ ಭಾರತದ ದಕ್ಷಿಣದ ತುದಿ. ಇದಲ್ಲದೆ, ಇದು ಭಾರತದ ಪೂರ್ವ ಮತ್ತು ಪಶ್ಚಿಮ ಕರಾವಳಿಗಳು ಸಂಧಿಸುವ ಸ್ಥಳವಾಗಿದೆ. ಇದು ಹಿಂದೂ ಮಹಾಸಾಗರ, ಬಂಗಾಳ ಕೊಲ್ಲಿ ಮತ್ತು ಅರೇಬಿಯನ್ ಸಮುದ್ರದ ಸಂಗಮದ ಕೇಂದ್ರ ಬಿಂದುವಾಗಿದೆ.












Click it and Unblock the Notifications