Breaking: ದೆಹಲಿಯಲ್ಲಿ ಪ್ರಬಲ ಭೂಕಂಪ: ನಿವಾಸಿಗಳಲ್ಲಿ ಆತಂಕ!
ದೆಹಲಿ ನವೆಂಬರ್ 6: ವಾಯುಮಾಲಿನ್ಯದಿಂದ ತತ್ತರಿಸಿದ ರಾಷ್ಟ್ರರಾಜಧಾನಿ ದೆಹಲಿ ಜನರಿಗೆ ಬಿಗ್ ಶಾಕ್ ಎದುರಾಗಿದೆ. ದೆಹಲಿಯಲ್ಲಿ ಮತ್ತೆ ಪ್ರಬಲ ಭೂಕಂಪ ಸಂಭವಿಸಿದ್ದು, ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ.
ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಸೋಮವಾರ (ನವೆಂಬರ್ 6) ಪ್ರಬಲ ಭೂಕಂಪನ ಸಂಭವಿಸಿದೆ. ಆಶ್ಚರ್ಯಕರವಾಗಿ ಈ ಘಟನೆಯು ಕೇವಲ ಮೂರು ದಿನಗಳ ಅಂತರದಲ್ಲಿ ನಡೆದಿದೆ. ಇದು ಕೆಲ ದಿನಗಳ ನಡುವೆ ನಡೆದ ಎರಡನೇ ಭೂಕಂಪವಾಗಿದೆ.

ಇಂದು ಸಂಜೆ 4.18ಕ್ಕೆ ಭೂಮಿ ಕಂಪಿಸಿದ್ದು ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನೇಪಾಳದಲ್ಲಿ ಭೂಕಂಪ ಈಗಾಗಲೇ ಸಂಚಲನ ಮೂಡಿಸಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರನೇ ಬಾರಿ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 5.6 ತೀವ್ರತೆ ದಾಖಲಾಗಿದೆ. ಅಲ್ಲಿ ಭೂಕಂಪವಾಗುತ್ತಿದ್ದಂತೆ ರಾಷ್ಟ್ರ ರಾಜಧಾನಿಯಲ್ಲಿ ಭೂಮಿ ಕಂಪಿಸಿದೆ. ಕಳೆದ ಮೂರು ದಿನಗಳಲ್ಲಿ ಎರಡನೇ ಬಾರಿ ಭೂಕಂಪ ಸಂಭವಿಸಿರುವುದು ಜನತೆಯ ಆತಂಕಕ್ಕೆ ಕಾರಣವಾಗಿದೆ.
ಸೋಮವಾರ ಪಶ್ಚಿಮ ನೇಪಾಳದಲ್ಲಿ 5.6 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದ ಕೆಲವು ಭಾಗಗಳಲ್ಲಿಯೂ ಬಲವಾದ ಕಂಪನಗಳು ಸಂಭವಿಸಿವೆ. ಉತ್ತರಪ್ರದೇಶ ಆಯೋಧ್ಯೆಯಿಂದ ಉತ್ತರಕ್ಕೆ ಭೂಕಂಪನದ ಕೇಂದ್ರಬಿಂದುವಿತ್ತು.
ನೇಪಾಳದಲ್ಲಿ ನಾಲ್ಕು ದಿನಗಳ ಅವಧಿಯಲ್ಲಿ ಮೂರು ಬಾರಿ ಭೂಕಂಪ ಸಂಭವಿಸಿದೆ. ಇತ್ತೀಚೆಗೆ ಸಂಭವಿಸಿದ ಭೂಕಂಪದಲ್ಲಿ 157 ಮಂದಿ ಪ್ರಾಣ ಕಳೆದುಕೊಂಡಿದ್ದರು. ನೂರಾರು ಮನೆಗಳು ನಾಶವಾಗಿವೆ. 2015ರಲ್ಲೂ ನೇಪಾಳದಲ್ಲಿ ಭೀಕರ ಭೂಕಂಪ ಸಂಭವಿಸಿತ್ತು. ಆಗ ರಿಕ್ಷರ್ ಮಾಪಕದಲ್ಲಿ 7.8 ತೀವ್ರತೆ ದಾಖಲಾಗಿತ್ತು. ಈ ವೇಳೆ ಒಂಬತ್ತು ಸಾವಿರ ಜನ ಪ್ರಾಣ ಕಳೆದುಕೊಂಡಿದ್ದರು. ಇಪ್ಪತ್ತೆರಡು ಸಾವಿರಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.












Click it and Unblock the Notifications