Rashmi Gautam: ಹಸಿದ ಮಹಿಳೆ ಬಾಯಿಗೆ ಅನ್ನ ಹಾಕಿ, ನಿಮ್ಮ 'ಶಿಶ್ನ' ಅಲ್ಲ: ಪ್ರಜ್ವಲ್ ರೇವಣ್ಣ ಕುರಿತ ಖ್ಯಾತ ನಟಿ ಪೋಸ್ಟ್ ವೈರಲ್
ಬೆಂಗಳೂರು, ಮೇ 02: ಹಾಸನ ಸಂಸದ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಅಶ್ಲೀಲ ವಿಡಿಯೋಗಳು ಇರುವ ಪೆನ್‌ಡ್ರೈವ್ ಪ್ರಕರಣ ಕರ್ನಾಟಕ ಮಾತ್ರವಲ್ಲದೇ, ವಿದೇಶಗಳಲ್ಲಿ ಸಹ ಸುದ್ದಿಯಾಗಿದೆ. ಪ್ರಕರಣಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಈ ಕುರಿತು ತೆಲುಗು ನಟಿ ರಶ್ಮಿ ಗೌತಮ್ (Rashmi Gutam) ಪೋಸ್ಟ್ ವೊಂದು ಭಾರೀ ಸಂಚಲನ ಸೃಷ್ಟಿಸಿದೆ.
ಪ್ರಜ್ವಲ್ ರೇವಣ್ಣ ಪ್ರಕರಣ ವಿರುದ್ಧ ರಾಜಕೀಯ ಪಕ್ಷಗಳು, ನಾಯಕರು ಜೊತೆಗೆ ಮಹಿಳಾ ಸಮುದಾಯ, ಕೆಲವು ನಟಿಯರು ಮುಕ್ತವಾಗಿ ತಮ್ಮ ಅಭಿಪ್ರಾಯ ಹಂಚಿಕೊಳ್ಳುವ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಇದೇ ವಿಚಾರವಾಗಿ, ತೆಲುಗು ಜನಪ್ರಿಯ ರಿಯಾಲಿಟಿ ಶೋನ ನಿರೂಪಕಿ ಆಗಿರುವ ನಟಿ ರಶ್ಮಿ ಗೌತಮ್ ಅವರು ವ್ಯಭಿಚಾರ ಮತ್ತು ಮಹಿಳೆ ಕುರಿತಾದ ಇನ್‌ಸ್ಟಾಗ್ರಾಮ್‌ನಲ್ಲಿ ಪೊಸ್ಟ್/ಸ್ಟೋರಿ ವೈರಲ್ ಆಗಿದೆ. ಅವರು ತಮ್ಮ ಇನ್‌ಸ್ಟಾದಲ್ಲಿ, ಪ್ರಸಿದ್ಧ ಲೇಖಕಿ 'ರಚೆಲ್ ಮೊರಾನ್' (Rachel Moran) ಅವರ ಕೋಟ್ ಹಾಕಿದ್ದರು. ಪ್ರಜ್ವಲ್ ರೇವಣ್ಣ ಪ್ರಕರಣ ಬಹಿರಂಗವಾದ ಬೆನ್ನಲ್ಲೆ ನಟಿಯ ಈ ಸ್ಟೋರಿ ಭಾರಿ ಸುದ್ದಿಯಾಗಿದೆ.
ನಟಿ ಹಂಚಿಕೊಂಡ ಕೋಟ್‌ನಲ್ಲಿ ಏನಿದೆ?
ನಟಿ ರಶ್ಮಿ ಗೌತಮ್ ಅವರು, ''ಮಹಿಳೆಯರು ಬಡತನದಲ್ಲಿರುವಾಗ ಮತ್ತು ಹಸಿದು ಬಳಲುತ್ತಿರುವವರ ಬಾಯಿಗೆ ಬಾಯಿಗೆ ಅನ್ನ ಹಾಕಬೇಕೆ ಹೊರತು ನಿಮ್ಮ ಶಿಶ್ನ ಅಲ್ಲ'' ಎಂಬ ಲೇಖಕಿ ಕೋಟ್ ಹಂಚಿಕೊಂಡಿದ್ದರು. ಈ ಮೂಲಕ ಮಹಿಳಾ ದೌರ್ಜನ್ಯವನ್ನು ಅವರು ಖಂಡಿಸಿದ್ದಾರೆ.
ಮಹಿಳೆಯರ ಮೇಲಿನ ಪುರಷ ದೌರ್ಜನ್ಯ ಕುರಿತು ಅವರು ಪ್ರತಿಕ್ರಿಯಿಸಿದ್ದಾರೆ. ಪುರುಷರು ಒಳ್ಳೆಯವರಾದರೂ ಲೋಕದಲ್ಲಿ ವ್ಯಭಿಚಾರ ಎಂಬುದು ಇರಲ್ಲ ಎಂದು ಹೇಳಿದ್ದಾರೆ. ಲೇಖಕಿ ಈ ಪೋಸ್ಟ್ ಸದ್ಯ ಪ್ರಜ್ವಲ್ ರೇವಣ್ಣಗೆ ಸಂಬಂಧಿಸಿದ ಪೆನ್‌ಡ್ರೈವ್ ಪ್ರಕರಣಕ್ಕೆ ಹೋಲಿಕೆ ಆಗುತ್ತಿದೆ. ಈ ಕಾರಣಕ್ಕೆ ರಶ್ಮಿ ಗೌತಮ್ ಅವರ ಪೋಸ್ಟ್ ಹೆಚ್ಚು ಸದ್ದು ಮಾಡುತ್ತಿದೆ.

ಪ್ರಜ್ವಲ್ ರೇವಣ್ಣ ಮನವಿ
ರಾಜ್ಯ ಸರ್ಕಾರ ಪ್ರಕರಣ ಸಂಬಂಧ ಎಸ್‌ಐಟಿ ರಚಿಸಿದೆ. ಅಧಿಕಾರಿಗಳು ನೋಟಿಸ್ ಜಾರಿ ಮಾಡುತ್ತಿದ್ದಂತೆ ವಿದೇಶದಲ್ಲಿದ್ದುಕೊಂಡೇ ಪ್ರತಿಕ್ರಿಯಿಸಿರುವ ಪ್ರಜ್ವಲ್ ರೇವಣ್ಣ, ಎಸ್‌ಐಟಿ ಮುಂದೆ ಹಾಜರಾಗಳು ಏಳು ದಿನಗಳ ಕಾಲಾವಕಾಶ ಕೇಳಿದ್ದಾರೆ. ಈ ಕುರಿತು ತಮ್ಮ ವಕೀಲರು ಮೂಲಕ ಅವರು ಸಿಐಡಿ ಬೆಂಗಳೂರಿಗೆ ಮನವಿ ಮಾಡಿಕೊಂಡಿರುವುದಾಗಿ ಬುಧವಾರ ಪೋಸ್ಟ್ ಮಾಡಿ ಮನವಿ ಮಾಡಿದ್ದಾರೆ.
ಸದ್ಯ ಬೆನ್ನಲ್ಲೆ ಸಂಸದ ಪ್ರಜ್ವಲ್ ರೇವಣ್ಣಗೂ ಹಾಗೂ ಮಾಜಿ ಸಚಿವ ಎಚ್‌ಡಿ ರೇವಣ್ಣಗೂ ಎಸ್‌ಐಟಿ ಲುಕ್ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಸದ್ಯ ಪ್ರಜ್ವಲ್ ವಿದೇಶದಲ್ಲಿದ್ದು, ಅಧಿಕಾರಿಗಳ ಮುಂದೆ ಹಾಜರಾಗಲು ಕಾಲಾವಕಾಶಕ್ಕೆ ಕೋರಿದ್ದಾರೆ. ತ್ತೆ ನೋಟಿಸ್ ಜಾರಿ ಮಾಡುವ ಸಾಧ್ಯತೆಗಳು ಇವೆ.
-
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
Viral Video: ಲಂಡನ್ ರಸ್ತೆಯಲ್ಲಿ ರಾರಾಜಿಸಿದ ಭಾರತದ ಆಟೋ ರಿಕ್ಷಾ: ವಿಡಿಯೋ ನೋಡಿ ದೆಹಲಿ ಎಂದ ನೆಟ್ಟಿಗರು -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ












Click it and Unblock the Notifications