ಪ್ರಜ್ವಲ್ ರೇವಣ್ಣ ಕೇಸ್: ಮುಂಬೈನಲ್ಲಿ ಪ್ರಧಾನಿ ಮೋದಿಗೆ ಕಪ್ಪು ಭಾವುಟ ಪ್ರದರ್ಶನಕ್ಕೆ ಸಜ್ಜು: ಅಲ್ಕಾ ಲಾಂಬಾ
ಮುಂಬೈ, ಮೇ 13: ಕರ್ನಾಟಕದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜರ್ಮನಿಯಿಂದ ದೇಶಕ್ಕೆ ಮರಳಿ ಕರೆ ತರಲು ಎಲ್ಲ ಪ್ರಯತ್ನ ಮಾಡಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.
ಸೋಮವಾರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಾಂಬಾ ಅವರು ಪ್ರಧಾನಿ ನರೇಂದ್ರ ಮೋದಿಯವರು ಪ್ರಜ್ವಲ್ ರೇವಣ್ಣರನ್ನು ವಾಪಸ್ ಕರೆತಂದು ಕರ್ನಾಟಕ ಸರ್ಕಾರಕ್ಕೆ ಒಪ್ಪಿಸಬೇಕು. ಈ ಪ್ರಕರಣ ಸಂಬಂಧ ಪ್ರಧಾನಿ ಮತ್ತು ಬಿಜೆಪಿ ನಾಯಕರ ಮೌನ ವಹಿಸಿರುವುದು ಆರೋಪಿಗಳಿಗೆ ಬೆಂಬಲ ನೀಡಿದಂತಾಗಿದೆ ಎಂದು ಅವರು ಆರೋಪಿಸಿದರು.

ಮೋದಿ ರೋಡ್ ಶೋ ವೇಳೆ ಕಾಂಗ್ರೆಸ್ ಆಂದೋಲನ
ಮುಂಬೈನಲ್ಲಿ ಪ್ರಧಾನಿ ಮೋದಿಯವರ ಚುನಾವಣಾ ಬೃಹತ್ ರ‍್ಯಾಲಿ ನಡೆಯಲಿದೆ. ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ 15 ಮತ್ತು 17 ರಂದು ಮುಂಬೈನ ಪ್ರಧಾನಿ ಮೋದಿಯವರ ರೋಡ್ ಶೋ ವೇಳೆ ಕಾಂಗ್ರೆಸ್‌ನಿಂದ ಕಪ್ಪು ಬಾವುಟವನ್ನು ಪ್ರದರ್ಶಿಸಲಾಗುವುದು ಎಂದರು.
ಕಿರುಕುಳ, ಅತ್ಯಾಚಾರ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣರನ್ನು ಮರಳಿ ಭಾರತಕ್ಕೆ ಕರೆತರುವ ಸಂಬಂಧ ಜರ್ಮನಿ ದೇಶದ ಜೊತೆಗೆ ಮಾತಕತೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಹಾಸನ ಪೈನ್‌ಡ್ರೈವ್ ವಿಚಾರ, ಲೈಂಗಿಕ ಕಿರುಕುಳದ ಆರೋಪ ಹೊರಬಿಳುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಜರ್ಮನಿಗೆ ಕಾಲ್ಕಿತ್ತಿದ್ದರು.
ಪ್ರಧಾನಿಗೆ ಘೇರಾವ್ ಹಾಕುತ್ತೇವೆ: ಲಾಂಬಾ
ಪ್ರಧಾನಿ ರೋಡ್ ಶೋ ವೇಳೆ ಅಂದು ನಮ್ಮನ್ನು ಬಂಧಿಸಿದರೂ ಸಹಿತ ನಾವು ಅಂಜದೇ, ಅಳುಕರೆ ಕಪ್ಪು ಬಾವುಟ ತೋರಿಸುತ್ತೇವೆ. ನಿಮಗೆ ಘೇರಾವ್ ಹಾಕುತ್ತೇವೆ. ಪ್ರಧಾನಿಯವರ ಮುಂಬೈ ಕಾರ್ಯಕ್ರಮ ವೇಳೆ ಕಾಂಗ್ರೆಸ್ ಪಕ್ಷದಿಂದ ಆಂದೋಲನ ನಡೆಸಲು ಯೋಜನೆಗಳನ್ನು ರೂಪಿಸುತ್ತಿದ್ದೇವೆ ಎಂದು ಹೇಳಿದರು.

ಪ್ರಜ್ವಲ್ ವಿರುದ್ಧ ಮೂರು FIR
ಲೋಕಸಭಾ ಚುನಾವಣೆ ಪ್ರಯುಕ್ತ ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಮಾಡಿಕೊಂಡಿವೆ. ಪ್ರಜ್ವಲ್ ರೇವಣ್ಣ ಬಗ್ಗೆ ಮೊದಲೇ ಮಾಹಿತಿ ಇದ್ದರೂ ಹಾಸನ ಲೋಕಸಭಾ ಕ್ಷೇತ್ರದ ಟಿಕೇಟ್ ನೀಡಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ಹಾಸನದ ಮೈತ್ರಿ ಅಭ್ಯರ್ಥಿ ರೇವಣ್ಣ ಮತ್ತು ಅವರ ತಂದೆ ಹೆಚ್‌ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿದ್ದಾರೆ. ಈ ಕುರಿತು ಅವರ ವಿರುದ್ಧ ಹಾಸನ, ಮೈಸೂರು ಮತ್ತು ಬೆಂಗಳೂರಿನಲ್ಲಿ ಮೂರು FIR ದಾಖಲಾಗಿವೆ.
ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಅವರ ಮನವಿ ಮೇರೆಗೆ ಪ್ರಜ್ವಲ್ ಪ್ರಕರಣವನ್ನು ಎಸ್‌ಐಟಿಗೆ ವಹಿಸಿದೆ. ಈ ಪ್ರಕರಣ ಸಿಬಿಐಗೆ ವಹಿಸುವಂತೆ ಬಿಜೆಪಿ ಆಗ್ರಹಿಸುತ್ತಿದೆ.
ಪ್ರಜ್ವಲ್ ರೇವಣ್ಣ ಪ್ರಕರಣ ಸಂಬಂಧ ಸಹಾಯ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿರುವುದಾಗಿ ಸ್ವತಃ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದರು. ಇದಾದ ನಂತರ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು ರಾಜ್ಯ ಕಾಂಗ್ರೆಸ್ ಪ್ರಕರಣದ ವಿಚಾರವಾಗಿ ಕೇಂದ್ರದ ಸಹಾಯ ಕೇಳಿಲ್ಲ ಎಂದು ಹೇಳಿದ್ದರು.












Click it and Unblock the Notifications