ರಾಜಸ್ಥಾನದಲ್ಲಿ ಅರಳಲಿದೆ ಕಮಲ; ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಬಿಜೆಪಿ ಉಸ್ತುವಾರಿ ಹೊಣೆ
ನವದೆಹಲಿ,ಜುಲೈ 08: 2024 ರ ಲೋಕಸಭೆ ಚುನಾವಣೆಗೂ ಮುನ್ನ ನಡೆಯಲಿರುವ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಬಿಜೆಪಿ ಹೈಕಮಾಂಡ್ ಸಜ್ಜಾಗಿದ್ದು, ಬಿಜೆಪಿ ಉಸ್ತುವಾರಿಗಳನ್ನು ನೇಮಿಸಿದೆ.
ರಾಜಸ್ಥಾನದಲ್ಲಿ ಅರಳಲಿದೆ ಕಮಲ
— Pralhad Joshi (@JoshiPralhad) July 7, 2023
ಬರಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಚುನಾವಣಾ ಪ್ರಭಾರಿಯ ಜವಾಬ್ದಾರಿಯನ್ನು ನನಗೆ ವಹಿಸಿರುವ ಪ್ರಧಾನಮಂತ್ರಿ ಶ್ರೀ @narendramodi ಅವರಿಗೆ ಹಾಗೂ @BJP4India ದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @JPNadda ಅವರಿಗೆ ಧನ್ಯವಾದಗಳನ್ನು ತಿಳಿಸಲು ಬಯಸುತ್ತೇನೆ.
ಕರ್ನಾಟಕ ವಿಧಾನಸಭಾ ಚುನಾವಣೆಯ ಬಳಿಕ ಎಚ್ಚೆತ್ತುಕೊಂಡ ಬಿಜೆಪಿ ಹೈಕಮಾಂಡ್ ಈಗಿನಿಂದಲೇ ತಯಾರಿಯನ್ನ ನಡೆಸಿದ್ದಾರೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ನಡೆದ ಪ್ರಮುಖರ ಸಭೆಯಲ್ಲಿ ಚುನಾವಣೆ ನಿಗದಿಯಾಗಿರುವ ರಾಜಸ್ತಾನ, ಮಧ್ಯಪ್ರದೇಶ, ತೆಲಂಗಾಣ ಹಾಗೂ ಛತ್ತೀಸಗಡ ರಾಜ್ಯಗಳ ಉಸ್ತುವಾರಿಯನ್ನು ನೇಮಿಸಲಾಗಿದೆ.

ಇನ್ನೂ ಕಳೆದ ಬಾರಿ ಉತ್ತರಾಖಂಡದ ಜವಾಬ್ದಾರಿ ಹೊತ್ತಿದ್ದ ಪ್ರಲ್ಹಾದ ಜೋಶಿಯವರು ಪಕ್ಷವನ್ನು ಗೆಲುವಿನ ಯಶಸ್ವಿಗೆ ಕಾರಣರಾಗಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಮತ್ತೊಮ್ಮೆ ಕರ್ನಾಟಕದವರಾದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ರಾಜಸ್ಥಾನದ ಉಸ್ತುವಾರಿಯನ್ನ ವಹಿಸಲಾಗಿದೆ.
ಈ ಕುರಿತು ಟ್ವೀಟರ್ ಮೂಲಕ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು, ಬರಲಿರುವ ರಾಜಸ್ಥಾನ ವಿಧಾನಸಭೆ ಚುನಾವಣೆಗೆ ಚುನಾವಣಾ ಪ್ರಭಾರಿಯ ಜವಾಬ್ದಾರಿಯನ್ನು ನನಗೆ ವಹಿಸಿರುವ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆ ಪಿ ನಡ್ಡಾ ಅವರಿಗೆ ಧನ್ಯವಾದ ಎಂದು ತಿಳಿಸಿದ್ದು, ರಾಜಸ್ಥಾನದಲ್ಲಿ ಅರಳಲಿದೆ ಕಮಲ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಲೋಕಸಭಾ ಚುನಾವಣೆಗೂ ಮೊದಲೇ ನಾಲ್ಕು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಯ ಅಖಾಡ ಸಿದ್ದವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ತನ್ನ ನಾಲ್ವರು ಪ್ರಮುಖ ನಾಯಕರನ್ನು ಉಸ್ತುವಾರಿಯನ್ನಾಗಿ ನೇಮಕ ಮಾಡಿದೆ. ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಮತ್ತು ಭೂಪೇಂದ್ರ ಯಾದವ್ ಅವರನ್ನು ಕ್ರಮವಾಗಿ ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಿಗೆ ಉಸ್ತುವಾರಿಯನ್ನಾಗಿ ನೇಮಿಸಲಾಗಿದೆ ಎಂದು ಬಿಜೆಪಿ ಅಧಿಕೃತ ಹೇಳಿಕೆಯನ್ನು ಪ್ರಕಟಿಸಿದೆ.












Click it and Unblock the Notifications