ಪ್ರಣಬ್ ಮುಖರ್ಜಿ ನಿಧನ; 7 ದಿನದ ರಾಷ್ಟ್ರೀಯ ಶೋಕಾಚರಣೆ
ನವದೆಹಲಿ, ಆಗಸ್ಟ್ 31: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೋಮವಾರ ಸಂಜೆ ವಿಧಿವಶರಾದರು. ಕೇಂದ್ರ ಸರ್ಕಾರ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ ಮಾಡಿದೆ.
Recommended Video
ಆಗಸ್ಟ್ 1ರಂದು ಕೋವಿಡ್ ಸೋಂಕು ತಗುಲಿದ ಬಳಿಕ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ (84) ಅವರನ್ನು ದೆಹಲಿಯ ಸೇನಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ಅವರಿಗೆ ಮೆದುಳಿನ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು.
ಕಳೆದ ವಾರದಿಂದ ಪ್ರಣಬ್ ಮುಖರ್ಜಿ ಅವರು ಕೋಮಾ ಸ್ಥಿತಿಗೆ ತಲುಪಿದ್ದರು. ಸೋಮವಾರ ಸಂಜೆ ಪ್ರಣಬ್ ಮುಖರ್ಜಿ ನಿಧನ ಹೊಂದಿದರು ಎಂದು ಪುತ್ರ ಟ್ವಿಟರ್ ಮೂಲಕ ಘೋಷಣೆ ಮಾಡಿದರು.

ಪ್ರಣಬ್ ಮುಖರ್ಜಿ ನಿಧನಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ವಿವಿಧ ಕೇಂದ್ರ ಸಚಿವರು, ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.
ಮಾಜಿ ರಾಷ್ಟ್ರಪತಿಗಳ ನಿಧನದಿಂದಾಗಿ ಕೇಂದ್ರ ಸರ್ಕಾರ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ ಮಾಡಿದೆ. ಏಳು ದಿನಗಳ ಕಾಲ ಯಾವುದೇ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ಸರ್ಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧಮಟ್ಟದಲ್ಲಿ ಹಾರಿಸಬೇಕು.












Click it and Unblock the Notifications