ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಮೆದುಳಿನ ಶಸ್ತ್ರಚಿಕಿತ್ಸೆ

|
Google Oneindia Kannada News

ನವದೆಹಲಿ, ಆಗಸ್ಟ್ 10 : ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಮೆದುಳಿನ ಶಸ್ತ್ರ ಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ. ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ್ದು ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮೆದುಳಿನಲ್ಲಿ ಉಂಟಾಗಿದ್ದ ಗೆಡ್ಡೆಯನ್ನು ತೆಗೆಯಲು ಸೋಮವಾರ ರಾತ್ರಿ ಸೇನಾ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದೆ, ವೆಂಟಿಲೇಟರ್‌ ವ್ಯವಸ್ಥೆಯಲ್ಲಿ ಅವರು ಇದ್ದಾರೆ ಎಂಬ ಮಾಹಿತಿ ಸಿಕ್ಕಿದೆ.

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೊನಾ ಸೋಂಕು ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೊನಾ ಸೋಂಕು

Pranab Mukherjee undergoes successful brain surgery

ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇನಾ ಆಸ್ಪತ್ರೆಗೆ ಸೋಮವಾರ ರಾತ್ರಿ ಭೇಟಿ ನೀಡಿ ಪ್ರಣಬ್ ಮುಖರ್ಜಿ (84) ಆರೋಗ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಇಂದು ಬೆಳಗ್ಗೆ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಕೊರೊನಾ ಗೆಲ್ಲಬಹುದು, ಆತಂಕ ಬೇಡ; ಯಡಿಯೂರಪ್ಪ ಟ್ವೀಟ್ ಕೊರೊನಾ ಗೆಲ್ಲಬಹುದು, ಆತಂಕ ಬೇಡ; ಯಡಿಯೂರಪ್ಪ ಟ್ವೀಟ್

ಸೇನಾ ಆಸ್ಪತ್ರೆಯ ತಜ್ಞ ವೈದ್ಯರ ತಂಡ ಪ್ರಣಬ್ ಮುಖರ್ಜಿ ಅವರ ಆರೋಗ್ಯದ ಮೇಲೆ ನಿಗಾ ಇಟ್ಟಿದೆ. ಪ್ರಣಬ್ ಮುಖರ್ಜಿ ಅವರಿಗೆ ಕೋವಿಡ್ ಸೋಂಕು ತಗುಲಿರುವುದು ಸೋಮವಾರ ಬೆಳಗ್ಗೆ ಖಚಿತವಾಗಿತ್ತು. ಆಸ್ಪತ್ರೆಗೆ ದಾಖಲಾದ ಮೇಲೆ ಅವರ ಮೆದುಳಿನಲ್ಲಿನ ಗೆಡ್ಡೆ ತೆಗೆಯಲು ಶಸ್ತ್ರ ಚಿಕಿತ್ಸೆ ಮಾಡಲಾಗಿದೆ.

English summary
Former President Pranab Mukherjee undergoes successful brain surgery for removal of clot. Pranab Mukherjee is on ventilator support at Army's R & R hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X