ಕಾಂಗ್ರೆಸ್ ಸಂವಹನ ಉಸ್ತುವಾರಿ ಕಾರ್ಯದರ್ಶಿಯಾಗಿ ಪ್ರಣವ್ ಝಾ

Posted By:
Subscribe to Oneindia Kannada

ನವದೆಹಲಿ, ನವೆಂಬರ್ 15: ಅಖಿಲ ಭಾರತ ಕಾಂಗ್ರೆಸ್‌ ಸಮಿತಿಯ (ಎಐಸಿಸಿ) ಸಂವಹನ ವಿಭಾಗದ ಉಸ್ತುವಾರಿ ಕಾರ್ಯದರ್ಶಿಯಾಗಿ ಪ್ರಣವ್ ಝಾ ಅವರನ್ನು ನೇಮಕ ಮಾಡಲಾಗಿದೆ.

ಎಐಸಿಸಿ ಸಂವಹನ ಕಾರ್ಯದರ್ಶಿಯಾಗಿ ಪ್ರಣವ್ ಝಾ ಅವರ ನೇಮಕಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರು ಸಮ್ಮತಿ ಸೂಚಿಸಿದ್ದಾರೆ. ಝಾ ಅವರು ಮೊದಲು ಪಕ್ಷದ ವಕ್ತಾರ ರಣದೀಪ್ ಸುರ್ಜೆವಾಲಾ ನೇತೃತ್ವದ ಸಂವಹನ ವಿಭಾಗದಲ್ಲಿ ಮಾಧ್ಯಮ ಸಂಯೋಜಕರಾಗಿದ್ದರು.

Pranav Jha appointed as Congress secretary in-charge of communication

ಕಾಂಗ್ರೆಸ್ ವಕ್ತಾರ ಪ್ರಿಯಾಂಕಾ ಚತುರ್ವೇದಿ ಕೂಡ ಪಕ್ಷದ ಸಂವಹನ ಇಲಾಖೆಯ ಸಂಚಾಲಕರಾಗಿದ್ದಾರೆ. ಅಷ್ಟೇ ಅಲ್ಲದೇ ರಾಷ್ಟ್ರೀಯ ಅಖಿಲ ಭಾರತ ಕಾಂಗ್ರೆಸ್ ಅಸಂಘಟಿತ ವರ್ಕರ್ಸ್ (ಎಐಯುಡಬ್ಲ್ಯೂಸಿ) ತಂಡವನ್ನು ಮತ್ತು ಎಐಯುಡಬ್ಲ್ಯೂಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ನೇಮಕ ಮಾಡಲು ರಾಹುಲ್ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ.

ಪಕ್ಷದ ಸಂವಹನ ಕಾರ್ಯತಂತ್ರ ರೂಪಿಸಿ ಅನುಷ್ಠಾನಗೊಳಿಸಲು ಅಗತ್ಯ ಸಲಹೆ ಸೂಚನೆಗಳನ್ನು ನೀಡುವುದಕ್ಕಾಗಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸಂವಹನ ಕಾರ್ಯತಂತ್ರ ಸಮಿತಿಯನ್ನು ರಚಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Pranav Jha was on Wednesday appointed as the AICC secretary in-charge of communication. The decision was approved by Congress vice-president Rahul Gandhi.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ