'ಬಿಹಾರದಿಂದ ಆರಂಭ': ಕುತೂಹಲ ಕೆರಳಿಸಿದ ಚುನಾವಣಾ ಚಾಣಕ್ಯನ ಟ್ವೀಟ್
ನವದೆಹಲಿ, ಮೇ 2: ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷದ ಆಹ್ವಾನವನ್ನು ತಿರಸ್ಕಾರ ಮಾಡಿದ ಬೆನ್ನಲ್ಲೇ ಹೊಸ ಪಕ್ಷವನ್ನು ರಚನೆ ಮಾಡಲಿದ್ದಾರೆ ಎಂಬ ಊಹಾಪೋಹಗಳು ಕೇಳಿ ಬಂದಿದೆ. ಈ ನಡುವೆ ಕುತೂಹಲಕೆರಳಿಸುವ ಟ್ವೀಟ್ ಅನ್ನು ಪ್ರಶಾಂತ್ ಕಿಶೋರ್ ಮಾಡಿದ್ದಾರೆ.
My quest to be a meaningful participant in democracy & help shape pro-people policy led to a 10yr rollercoaster ride!
— Prashant Kishor (@PrashantKishor) May 2, 2022
As I turn the page, time to go to the Real Masters, THE PEOPLE,to better understand the issues & the path to “जन सुराज”-Peoples Good Governance
शुरुआत #बिहार से
ನೇರವಾಗಿ ಜನರ ಕಡೆಗೆ ತೆರಳಲು ನಿರ್ಧಾರ ಮಾಡಿರುವುದಾಗಿ ತಮ್ಮ ಟ್ವೀಟ್ ಮೂಲಕ ತಿಳಿಸಿರುವ ಪ್ರಶಾಂತ್ ಕಿಶೋರ್, ಹೊಸ ಪಕ್ಷ ಸ್ಥಾಪನೆ ಮಾಡುವ ಸುಳಿವು ನೀಡಿದ್ದಾರೆ. ಇದರ ಆರಂಭ ಬಿಹಾರದಿಂದ ಎಂದು ಕೂಡಾ ಟ್ವೀಟ್‌ನಲ್ಲಿ ಉಲ್ಲೇಖ ಮಾಡಿದ್ದಾರೆ.
ಈ ಹಿಂದೆ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ನಾಯಕರುಗಳಾದ ಸೋನಿಯಾ, ರಾಹುಲ್, ಪ್ರಿಯಾಂಕ ಗಾಂಧಿಯನ್ನು ಹಲವಾರು ಭಾರೀ ಭೇಟಿಯಾಗಿದ್ದರು. ಈ ನಡುವೆ ಪ್ರಶಾಂತ್ ಕಿಶೋರ್ ಕಾಂಗ್ರೆಸ್‌ಗೆ ಸೇರ್ಪಡೆ ಆಗಲಿದ್ದಾರೆ ಎಂದು ಸುದ್ದಿಯಾಗಿದ್ದವು. ಆದರೆ ಕಾಂಗ್ರೆಸ್‌ನ ಆಹ್ವಾನ ತಿರಸ್ಕಾರ ಮಾಡಿದ್ದ ಪ್ರಶಾಂತ್ ಕಿಶೋರ್ ಈಗ ತನ್ನದೇ ಆದ ಹೊಸ ಪಕ್ಷದ ರಚನೆಗೆ ಮುಂದಾಗಿರುವಂತೆ ಕಂಡು ಬಂದಿದೆ.

ಪ್ರಶಾಂತ್ ಕಿಶೋರ್ ಟ್ವೀಟ್ ಏನು ಹೇಳುತ್ತದೆ?
ಈ ಬಗ್ಗೆ ಪ್ರಶಾಂತ್ ಕಿಶೋರ್ ಟ್ವೀಟ್ ಮಾಡಿದ್ದಾರೆ. "ನಾನು ಪ್ರಜಾಪ್ರಭುತ್ವದಲ್ಲಿ ಅರ್ಥಪೂರ್ಣ ಪಾಲ್ಗೊಳ್ಳಲು ಮಾಡಿದ ಕಾರ್ಯ ಹಾಗೂ ಜನಪರ ನೀತಿಯನ್ನು ರೂಪಿಸಲು ಸಹಾಯ ಮಾಡುವ ನನ್ನ ಕಾರ್ಯವು ಹತ್ತು ವರ್ಷಗಳ ರೋಲರ್‌ಕೋಸ್ಟರ್ ರೈಡ್‌ನಂತಿತ್ತು. ನಾನು ನನ್ನ ಪಯಣದ ಪುಟವನ್ನು ತಿರುವುತ್ತಿದ್ದಂತೆ, ನಿಜವಾದ ಒಡೆಯರಾದ ಜನರ ಬಳಿಕ ತೆರಳಲು, ಜನರ ಸಮಸ್ಯೆಗಳನ್ನು ಸರಿಯಾದ ರೀತಿಯಲ್ಲಿ ತಿಳಿಯಲು ಹಾಗೂ ಜನ ಸ್ವರಾಜ್-ಉತ್ತಮ ಜನಾಡಳಿತದ ದಾರಿಯಲ್ಲಿ ನಡೆಯಲು ಇದು ಉತ್ತಮ ಕಾಲ ಎಂದು ತೋರುತ್ತದೆ. ಅದರ ಆರಂಭ ಬಿಹಾರದಿಂದ," ಎಂದು ಚುನಾವಣಾ ರಣತಂತ್ರಗಾರ ಪ್ರಶಾಂತ್ ಕಿಶೋರ್ ಟ್ವೀಟ್ ಮಾಡಿದ್ದಾರೆ.
ಪ್ರಶಾಂತ್ ಕಿಶೋರ್‌ರ ಈ ಟ್ವೀಟ್‌ನಲ್ಲಿ ಸಾಕಷ್ಟು ಅಸ್ಪಷ್ಟತೆಯು ಕೂಡಾ ಇದೆ. ಪ್ರಶಾಂತ್ ಹೊಸದಾದ ರಾಜಕೀಯ ಪಕ್ಷವನ್ನು ಸ್ಥಾಪನೆ ಮಾಡುತ್ತಾರೋ ಅಥವಾ ವಿರೋಧ ಪಕ್ಷವನ್ನು ಸೇರ್ಪಡೆ ಆಗಲಿದ್ದಾರೋ ಎಂಬುವುದು ಸ್ಪಷ್ಟವಾಗಿಲ್ಲ. 2021 ರ ಚುನಾವಣೆಯ ನಂತರ ಪ್ರಶಾಂತ್ ಕಿಶೋರ್ ರಾಜಕೀಯವನ್ನು ತೊರೆಯಲು ಬಯಸಿರುವುದಾಗಿ ಹೇಳಿದ್ದರು. ಆದರೆ ಮುಂದಿನ ರಾಜಕೀಯ ನಡೆಯನ್ನು ತೆಗೆದುಕೊಳ್ಳುತ್ತಿರುವಂತೆ ಕಂಡು ಬಂದಿದೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಪ್ರಶಾಂತ್ ಕಿಶೋರ್ ಸೇರ್ಪಡೆ ಆಗುವುದಿಲ್ಲ ಎಂಬುವುದು ಸ್ಪಷ್ಟವಾಗಿದೆ.
-
Upendra: ನಟ ಉಪೇಂದ್ರ ಅವರ "ಪ್ರಜಾಕೀಯ" ಪಕ್ಷದ ವೆಬ್ಸೈಟ್ ಲೋಕಾರ್ಪಣೆ, ಟಿಕೆಟ್ ಆಕಾಂಕ್ಷಿಗಳಿಗೆ ಹೊಸ ರೂಲ್ಸ್ -
Vijay: ಪ್ರಚಾರದ ವೇಳೆ ಹೂವಿನ ಚೆಂಡು ಎಸೆದ ಅಭಿಮಾನಿ; ಸೈಕಲ್ನಿಂದ ಇಳಿದು ಗಾಡಿ ಹತ್ತಿದ ದಳಪತಿ ವಿಜಯ್, ವಿಡಿಯೋ ವೈರಲ್ -
Bihar: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ, ನೂತನ ಸಿಎಂ ಆಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಆಯ್ಕೆ -
ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: 1 ಲಕ್ಷ ಬಾಂಡ್ಗೆ ಆಗ್ರಹಿಸಿದ ಪೊಲೀಸರ ವಿರುದ್ಧ ಯತ್ನಾಳ್ ಗರಂ -
Abdul Jabbar: ಕಾಂಗ್ರೆಸ್ ಪಕ್ಷದಿಂದ ಅಬ್ದುಲ್ ಜಬ್ಬಾರ್ ಅಮಾನತು: ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಕ್ರಮ -
ಕಾಂಗ್ರೆಸ್ ಆಡಳಿತ ವೈಫಲ್ಯಕ್ಕೆ ಎ-ಖಾತೆ ಕೈಗನ್ನಡಿ? ಸರ್ಕಾರದ ವಿರುದ್ದ ಆರ್. ಅಶೋಕ್ ವಾಗ್ದಾಳಿ -
“ಕಾಂಗ್ರೆಸ್ ಸಂವಿಧಾನವನ್ನು ಸ್ವಾರ್ಥಕ್ಕೆ ಬಳಸಿದೆ”: ಬಸವರಾಜ ಬೊಮ್ಮಾಯಿ ಹೇಳಿಕೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ.












Click it and Unblock the Notifications