Breaking; ಪ್ರಶಾಂತ್ ಕಿಶೋರ್‌ ಸೇರ್ಪಡೆ, ಸೋನಿಯಾ ಕೈ ಸೇರಿದ ವರದಿ

ನವದೆಹಲಿ, ಏಪ್ರಿಲ್ 25; ಚುನಾವಣಾ ತಂತ್ರಗಾರ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ ಎಂಬ ವಿಚಾರದ ಕುರಿತು ಚರ್ಚೆ ನಡೆಯುತ್ತಿದೆ. ಪಕ್ಷ ರಚನೆ ಮಾಡಿದ್ದ ಸಮಿತಿ ಈ ಕುರಿತು ವರದಿ ಸಿದ್ಧಪಡಿಸಿದೆ.

ಸೋಮವಾರ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿಗೆ ಸಮಿತಿ ಈ ಕುರಿತು ವರದಿಯನ್ನು ನೀಡಿದೆ. 10 ಜನಪಥ್ ನಿವಾಸದಲ್ಲಿ ಸೋನಿಯಾ ಭೇಟಿ ಮಾಡಿದ ಪಕ್ಷದ ನಾಯಕರು ವರದಿ ಹಸ್ತಾಂತರ ಮಾಡಿದರು.

ಈ ವರದಿ ಬಗ್ಗೆ ಇಂದು ಸಂಜೆ ಸೋನಿಯಾ ಗಾಂಧಿ ಸಭೆ ನಡೆಸಲಿದ್ದಾರೆ. ಕೆ. ಸಿ. ವೇಣುಗೋಪಾಲ್, ದ್ವಿಗ್ವಿಜಯ್ ಸಿಂಗ್, ಅಂಬಿಕಾ ಸೋನಿ, ರಣದೀಪ್ ಸುರ್ಜೇವಾಲಾ, ಜೈರಾಮ್‌ ರಮೇಶ್ ಮತ್ತು ಪ್ರಿಯಾಂಕಾ ವಾದ್ರಾ ಸಮಿತಿಯಲ್ಲಿದ್ದಾರೆ.

Prashant Kishor Congress Join Committee Submits Report To Sonia Gandhi

ಪ್ರಶಾಂತ್ ಕಿಶೋರ್ ಕಾಂಗ್ರೆಸ್ ಸೇರುವ ವಿಚಾರದಲ್ಲಿ ಪಕ್ಷದಲ್ಲಿ ಚರ್ಚೆಗಳು ನಡೆಯುತ್ತಿವೆ. 2024ರ ಲೋಕಸಭೆ ಚುನಾವಣೆಗೆ ತಯಾರಿ ಆರಂಭಿಸಿರುವ ಕಾಂಗ್ರೆಸ್ ಪಕ್ಷ ಸಂಘಟನೆಯಲ್ಲಿ ಹಲವಾರು ಬದಲಾವಣೆಗಳನ್ನು ಮಾಡುತ್ತಿದೆ. ಪಕ್ಷದ ಹಿರಿಯ ನಾಯಕರ ಜೊತೆ ಸಭೆ ನಡೆಸಿದ್ದ ಪ್ರತಾಂತ್ ಕಿಶೋರ್ ಆಗಬೇಕಾದ ಬದಲಾವಣೆ ಬಗ್ಗೆ ವಿವರಣೆ ನೀಡಿದ್ದರು.

ಪ್ರಶಾಂತ್ ಕಿಶೋರ್ ಪಕ್ಷ ಸೇರುವ ಕುರಿತು ಹಲವಾರು ನಾಯಕರು ಈಗಾಗಲೇ ಹೇಳಿಕೆಗಳನ್ನು ನೀಡಿದ್ದಾರೆ. ಪಕ್ಷದಲ್ಲಿ ಯಾವುದೇ ವಿರೋಧವಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಆಳ್ವಿಕೆ ಇರುವ ರಾಜ್ಯಗಳ ಮುಖ್ಯಮಂತ್ರಿಗಳು ಸಹ ಈ ಪ್ರಸ್ತಾವನೆಗೆ ಒಪ್ಪಿಗೆ ಕೊಟ್ಟಿದ್ದಾರೆ.

ಪಕ್ಷ ಪ್ರಶಾಂತ್ ಕಿಶೋರ್ ಪಕ್ಷ ಸೇರ್ಪಡೆ ಸಾಧಕ-ಬಾಧಕಗಳ ಕುರಿತು ವರದಿ ನೀಡಲು ಸಮಿತಿ ರಚನೆ ಮಾಡಿತ್ತು. ಈ ಸಮಿತಿ ಸೋಮವಾರ ಸೋನಿಯಾ ಗಾಂಧಿಗೆ ವರದಿ ನೀಡಿದೆ. ಸಂಜೆ ಸಮಿತಿಯ ಜೊತೆ ಸೋನಿಯಾ ಗಾಂಧಿ ಸಭೆ ನಡೆಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+