ಕರ್ನಾಟಕ ಗೆಲುವಿನ ಬೆನ್ನಲ್ಲೇ ಕಾಂಗ್ರೆಸ್‌ಗೆ ಎಚ್ಚರಿಕೆ ನೀಡಿದ ಚುನಾವಣಾ ಚಾಣಕ್ಯ ಪ್ರಶಾಂತ್ ಕಿಶೋರ್
2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಗೆ ಸಿಲುಕಿದ ಬಿಜೆಪಿ 66 ಸ್ಥಾನಗಳಲ್ಲಿ ಗೆಲ್ಲುವ ಮೂಲಕ ತೀರಾ ಕಳಪೆ ಸಾಧನೆ ಮಾಡಿದರೆ, 135 ಸ್ಥಾನಗಳಲ್ಲಿ ಗೆಲ್ಲುವುದರೊಂದಿಗೆ ಭಾರೀ ಬಹುಮತ ಗಳಿಸಿರುವ ಕಾಂಗ್ರೆಸ್ ಶೀಘ್ರದಲ್ಲೇ ಸರ್ಕಾರ ರಚನೆ ಮಾಡಲಿದೆ.
ಕರ್ನಾಟಕ ವಿಧಾನಸಭೆ ಚುನಾವಣೆ ಗೆದ್ದ ಖುಷಿಯಲ್ಲಿರುವ ಕಾಂಗ್ರೆಸ್‌ಗೆ ರಾಜಕೀಯ ತಂತ್ರಗಾರ ಹಾಗೂ ಚುನಾವಣಾ ಚಾಣಕ್ಯ ಎಂದೇ ಕರೆಯಿಸಿಕೊಳ್ಳುವ ಪ್ರಶಾಂತ್ ಕಿಶೋರ್ ಎಚ್ಚರಿಕೆ ನೀಡಿದ್ದಾರೆ.

ಬಿಹಾರದಲ್ಲಿ ಜನ್ ಸೂರಜ್ ಯಾತ್ರೆ ನಡೆಸುತ್ತಿರುವ ಪ್ರಶಾಂತ್ ಕಿಶೋರ್ ಮಾತನಾಡಿ, ಕರ್ನಾಟಕದ ಫಲಿತಾಂಶ ಮುಂಬರುವ ಲೋಕಸಭೆ ಚುನಾವಣೆಯ ದಿಕ್ಸೂಚಿ ಎನ್ನುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ, ಕರ್ನಾಟಕ ವಿಧಾನಸಭೆ ಗೆದ್ದ ಖುಷಿಯಲ್ಲಿ ಬೀಗಬೇಡಿ ಎಂದಿದ್ದಾರೆ.
ದೇಶದ ರಾಜಕೀಯ ಸ್ಥಿತಿಗತಿಗಳ ಬಗ್ಗೆ ಮಾತನಾಡಿದ ಪ್ರಶಾಂತ್ ಕಿಶೋರ್, "ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗೆ ಅಭಿನಂದಿಸುತ್ತೇನೆ. ಆದರೆ, ಇದನ್ನು ಲೋಕಸಭೆ ಚುನಾವಣೆಗೆ ದಿಕ್ಸೂಚಿ ಎಂದು ಪರಿಗಣಿಸಬಾರದು. ಗೆದ್ದ ಖುಷಿಯಲ್ಲಿ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಮೈಮರೆಯಬಾರದು," ಎಂದು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

"2013ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದ್ದರೂ, 2014ರ ಲೋಕಸಭಾ ಚುನಾವಣೆಯಲ್ಲಿ ದೇಶಾದ್ಯಂತ ಕಡಿಮೆ ಸ್ಥಾನ ಗಳಿಸಿತು. ಅಲ್ಲದೇ, 2019ರಲ್ಲಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ರಾಜ್ಯಗಳಲ್ಲಿ ಬಿಜೆಪಿ ಸೋಲಿಸಿ ಕಾಂಗ್ರೆಸ್ ಗೆದ್ದರೂ, ಕೆಲವೇ ತಿಂಗಳುಗಳಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ಮತ್ತೆ ನೆಲಕಚ್ಚಿತು ಎಂಬುದನ್ನು ಮರೆಯಬಾರದು," ಎಂದು ಪ್ರಶಾಂತ್ ಕಿಶೋರ್ ನೆನಪಿಸಿದ್ದಾರೆ.
"2012ರಲ್ಲಿ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬಂದಿತ್ತು. ಬಳಿಕ ಎರಡು ನಂತರ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಉತ್ತರಪ್ರದೇಶದ 80 ಸ್ಥಾನಗಳಲ್ಲಿ 73 ಸ್ಥಾನ ಬಾಚಿಕೊಂಡಿತು," ಎಂದು ತಿಳಿಸಿದರು.
ಪ್ರಶಾಂತ್ ಕಿಶೋರ್ ಅವರು 2012ರ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಅಂದಿನ ಮುಖ್ಯಮಂತ್ರಿಯಾಗಿದ್ದ ನರೇಂದ್ರ ಮೋದಿ ಅವರ ಪ್ರಚಾರ ಕಾರ್ಯಕ್ರಮದ ಪ್ರಮುಖ ತಂತ್ರಗಾರರಾಗಿ ಕೆಲಸ ಮಾಡಿದ ನಂತರ ಪ್ರಸಿದ್ಧಿಯಾಗಿದ್ದರು. ಆ ಬಳಿಕ 2014ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಪ್ರಮುಖ ಚುನಾವಣಾ ತಂತ್ರಗಾರನಾಗಿದ್ದರು.
ಈ ವೇಳೆ ಬಿಜೆಪಿ ಯಶಸ್ವಿ ಪ್ರಯತ್ನದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಪ್ರಶಾಂತ್ ಕಿಶೋರ್ ಅವರಿಗೆ ಬೇಡಿಕೆ ಹೆಚ್ಚಾಯಿತು. ಬಿಜೆಪಿ ವಾರ್ ರೂಂನಿಂದ ಹೊರಬಂದ ಅವರು, ನಂತರ ಬಿಹಾರದಲ್ಲಿ ನಿತೀಶ್ ಕುಮಾರ್, ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್, ತಮಿಳುನಾಡಿನಲ್ಲಿ ಎಂಕೆ ಸ್ಟಾಲಿನ್, ಆಂಧ್ರಪ್ರದೇಶದಲ್ಲಿ ಜಗನ್‌ಮೋಹನ್ ರೆಡ್ಡಿ, ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಪರ ಚುನಾವಣಾ ತಂತ್ರಗಾರಿಕೆ ರೂಪಿಸಿದ್ದರು.
2021ರಲ್ಲಿ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಬಳಿಕ ಪ್ರಶಾಂತ್ ಕಿಶೋರ್ ಅವರು ಚುನಾವಣಾ ತಂತ್ರಗಾರಿಕೆಗೆ ವಿಧಾಯ ಹೇಳಿದ್ದರು. ಆ ಬಳಿಕ ದೇಶಾದ್ಯಂತ ನೆಲಕಚ್ಚಿದ್ದ ಕಾಂಗ್ರೆಸ್ ಪಕ್ಷಕ್ಕೆ ಮರುಜೀವ ನೀಡಲು ಪ್ರಯತ್ನಪಟ್ಟರು. ಆದರೆ, ಪಕ್ಷದಲ್ಲಿ ಅವರ ಮಾತಿಗೆ ಮನ್ನಣೆ ಸಿಗದ ಕಾರಣ, ಬಿಹಾರದಲ್ಲಿ ಜನ್ ಸೂರಜ್ ಯಾತ್ರೆ ಆರಂಭಿಸಿದ್ದಾರೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ












Click it and Unblock the Notifications