Premium Petrol Price: ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ದರ ಏರಿಕೆ

Petrol Price: ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದಾಗಿ ಜಾಗತಿಕ ಇಂಧನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರ ನೇರ ಪರಿಣಾಮವಾಗಿ ಭಾರತದಲ್ಲಿ ಪ್ರೀಮಿಯಂ ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 2.35 ರೂಪಾಯಿವರೆಗೆ ಏರಿಕೆ ಮಾಡಲಾಗಿದೆ. ಈ ಪರಿಷ್ಕೃತ ದರಗಳು ಇಂದಿನಿಂದ ಮಾರ್ಚ್ 20, 2026ರಿಂದ ಜಾರಿಗೆ ಬಂದಿವೆ ಎಂದು ತಿಳಿದುಬಂದಿದೆ.

ಮೂಲಗಳ ಪ್ರಕಾರ, ಭಾರತದ ಪ್ರಮುಖ ತೈಲ ಕಂಪನಿಗಳು ತಮ್ಮ ಪ್ರೀಮಿಯಂ ಪೆಟ್ರೋಲ್ ದರವನ್ನು ಏರಿಕೆ ಮಾಡಿವೆ. ಭಾರತೀಯ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL), ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಮತ್ತು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಕಂಪನಿಗಳು ತಮ್ಮ ಪ್ರೀಮಿಯಂ ಇಂಧನಗಳ ಬೆಲೆಯನ್ನು ಪ್ರತಿ ಲೀಟರ್‌ಗೆ 2.09ರಿಂದ 2.35 ರೂಪಾಯಿವರೆಗೆ ಹೆಚ್ಚಿಸಿವೆ.

Premium Petrol Prices Hiked in India Amid Middle East Tensions No Change in Regular Fuel Rates

ಪ್ರೀಮಿಯಂ ಪೆಟ್ರೋಲ್ ದರ ಏರಿಕೆ

ಪ್ರಸ್ತುತ ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ದರಗಳಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಬೆಲೆ ಏರಿಕೆಯು ಕೇವಲ ಪ್ರೀಮಿಯಂ ಇಂಧನಗಳಿಗೆ (Speed, Power, XP95) ಮಾತ್ರ ಸೀಮಿತವಾಗಿದ್ದು, ಸಾಮಾನ್ಯ ವಾಹನ ಸವಾರರಿಗೆ ಸದ್ಯಕ್ಕೆ ಯಾವುದೇ ಹೊಸ ಹೊರೆ ಉಂಟಾಗಿಲ್ಲ ಎಂದು ತಿಳಿದುಬಂದಿದೆ.

ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಅವರು ಈ ಬಗ್ಗೆ ಮಾತನಾಡಿದ್ದು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಈಗ ನಿಯಂತ್ರಣ ಮುಕ್ತವಾಗಿದ್ದ, ಅವುಗಳನ್ನು ಸರ್ಕಾರ ನಿರ್ಧರಿಸುವುದಿಲ್ಲ. ಅಂತಾರಾಷ್ಟ್ರೀಯ ಮಾರುಕಟ್ಟೆಯ ಸ್ಥಿತಿಗತಿಗಳನ್ನು ಆಧರಿಸಿ ತೈಲ ಮಾರುಕಟ್ಟೆ ಕಂಪನಿಗಳೇ ಇಂಧನ ದರಗಳನ್ನು ನಿರ್ಧರಿಸುತ್ತವೆ ಎಂದು ಅವರು ತಿಳಿಸಿದ್ದಾರೆ.

'ಸಾಮಾನ್ಯ ಪೆಟ್ರೋಲ್ ದರ ಏರಿಕೆಯಾಗಿಲ್ಲ'

"ಸಾಮಾನ್ಯ ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆ ಇಲ್ಲ, ಕೇವಲ ಪ್ರೀಮಿಯಂ ವಿಭಾಗದ ಇಂಧನ ದರ ಮಾತ್ರ ಏರಿಕೆಯಾಗಿದೆ. ಒಟ್ಟು ಪೆಟ್ರೋಲ್ ಬಳಕೆಯಲ್ಲಿ ಈ ಪ್ರೀಮಿಯಂ ವರ್ಗದ ಪಾಲು ಕೇವಲ ಶೇಕಡ 2ರಿಂದ 4 ರಷ್ಟು ಮಾತ್ರ ಇದೆ." ಎಂದು ಹೇಳಿದರು. ಇನ್ನು ಮುಂದಿನ ದಿನಗಳಲ್ಲಿ ಸಾಮಾನ್ಯ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಏರಿಕೆಯಾಗಲಿವೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯಕ್ಕೆ ಅಂತಹ ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿದ್ದಾರೆ.

ಇಂಧನ ಮಾರುಕಟ್ಟೆಗೆ ದೊಡ್ಡ ಹೊಡೆತ

ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯು ಮಧ್ಯಪ್ರಾಚ್ಯದಲ್ಲಿ ಭಾರಿ ದೊಡ್ಡ ಮಟ್ಟದಲ್ಲಿ ಬೆಂಕಿ ಜ್ವಾಲೆಯಂತೆ ಯುದ್ಧದ ಕಿಚ್ಚನ್ನು ಹುಟ್ಟುಹಾಕಿದೆ. ಇದರ ಪರಿಣಾಮವಾಗಿ ಇಡೀ ಗಲ್ಫ್ ಪ್ರದೇಶದಲ್ಲಿ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ಮುಂದುವರೆದಿದ್ದು, ಇದರಿಂದ ಜಾಗತಿಕ ಇಂಧನ ಮಾರುಕಟ್ಟೆಗೆ ದೊಡ್ಡ ಹೊಡೆತ ಬಿದ್ದಿದೆ.

ಅಮೆರಿಕ-ಇಸ್ರೇಲ್ ದಾಳಿಯ ನಂತರ, ಇಡೀ ಗಲ್ಫ್ ವಲಯದಲ್ಲಿ ಪರಸ್ಪರ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳು ತೀವ್ರಗೊಂಡಿವೆ. ವಿಶ್ವದ ಅತ್ಯಂತ ಪ್ರಮುಖ ತೈಲ ಮಾರ್ಗವಾದ ಹಾರ್ಮುಜ್ ಜಲಸಂಧಿಯು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ವಿಶ್ವದ ಒಟ್ಟು ತೈಲ ಮತ್ತು ದ್ರವೀಕೃತ ನೈಸರ್ಗಿಕ ಅನಿಲದ ಪೂರೈಕೆಯ ಐದನೇ ಒಂದು ಭಾಗ ಈ ಮಾರ್ಗದ ಮೂಲಕವೇ ಸಾಗುತ್ತದೆ. ಈಗ ಈ ಮಾರ್ಗ ಬಂದ್ ಆಗಿರುವುದರಿಂದ ಜಾಗತಿಕವಾಗಿ ಇಂಧನ ಅಭಾವ ಸೃಷ್ಟಿಯಾಗಿದೆ.

ತೈಲ ಬೆಲೆ ಏರಿಕೆಗೆ ಕಾರಣವೇನು?

ಇರಾನ್‌ನ 'ಸೌತ್ ಪಾರ್ಸ್' ಅನಿಲ ಕ್ಷೇತ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಗೆ ಪ್ರತೀಕಾರವಾಗಿ, ಇರಾನ್ ವಿಶ್ವದ ಅತಿದೊಡ್ಡ ಎಲ್‌ಎನ್‌ಜಿ ಕೇಂದ್ರವಾದ ಖತಾರ್‌ನ 'ರಾಸ್ ಲಫಾನ್' ಮೇಲೆ ದಾಳಿ ನಡೆಸಿದೆ. ಇರಾನ್ ದಾಳಿಯ ಬೆನ್ನಲ್ಲೇ ಅಂತಾರಾಷ್ಟ್ರೀಯ ಬೆಂಚ್‌ಮಾರ್ಕ್ ಆಗಿರುವ 'ಬ್ರೆಂಟ್ ಕ್ರೂಡ್' ತೈಲ ಬೆಲೆ ಶೇಕ 10ರಷ್ಟು ಏರಿಕೆಯಾಗಿದೆ. ಯುರೋಪಿಯನ್ ಅನಿಲ ದರವು ಶೇಕಡ 35ರಷ್ಟು ಭಾರಿ ಜಿಗಿತ ಕಂಡಿದೆ. ಇರಾನ್ ತನ್ನ ದಾಳಿಯನ್ನು ಮುಂದುವರಿಸಿದರೆ ಅಮೆರಿಕದಿಂದ "ಬೃಹತ್ ಹೊಡೆತ" ಎದುರಿಸಬೇಕಾಗುತ್ತದೆ ಎಂದು ಡೊನಾಲ್ಡ್ ಟ್ರಂಪ್ ಕಠಿಣ ಎಚ್ಚರಿಕೆ ನೀಡಿದ್ದಾರೆ. ಇಡೀ ಗಲ್ಫ್ ಪ್ರದೇಶದ ಇಂಧನ ಮೂಲಸೌಕರ್ಯಗಳನ್ನು ನಾಶಪಡಿಸುವುದಾಗಿ ಇರಾನ್ ಬೆದರಿಕೆ ಹಾಕಿರುವುದು ಜಾಗತಿಕ ಇಂಧನ ಭದ್ರತೆಗೆ ದೊಡ್ಡ ಕಂಟಕವಾಗಿ ಪರಿಣಮಿಸಿದೆ ಎನ್ನಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+