ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 18ರಂದು ರಾಷ್ಟ್ರಪತಿ ಆಯ್ಕೆಗೆ ಚುನಾವಣೆ

|
Google Oneindia Kannada News

ನವದೆಹಲಿ, ಜೂನ್ 9: ಜುಲೈ 18ರಂದು ನೂತನ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ದಿನಾಂಕ ಘೋಷಿಸಿದರು.

ಜುಲೈ 18ರಂದು ರಾಷ್ಟ್ರಪತಿ ಆಯ್ಕೆಗೆ ಚುನಾವಣೆ ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅಧಿಕಾರಾವಧಿ ಅಂತ್ಯವಾಗುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಹೊಸ ರಾಷ್ಟ್ರಪತಿ ಆಯ್ಕೆಗೆ ದಿನಾಂಕ ನಿಗದಿ ಮಾಡಿದೆ.

ಈ ಬಾರಿ ಸಂಸದರ ಮತದ ಮೌಲ್ಯ 700 ಆಗಿದೆ. ಬಂಧನದಲ್ಲಿರುವ ಜನಪ್ರತಿನಿಧಿಗಳಿಗೂ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಜೈಲಿನಲ್ಲಿರುವವರು ಪೆರೋಲ್‌ಗೆ ಅರ್ಜಿ ಸಲ್ಲಿಸಬೇಕು ಮತ್ತು ಪೆರೋಲ್ ಪಡೆದರೆ ಅವರು ಮತ ಚಲಾಯಿಸಬಹುದು ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

Presidential Election 2022 on July 18th, Election Commission Announces Schedule

ಜುಲೈ 24ರಂದು ರಾಮನಾಥ್‌ ಕೋವಿಂದ್‌ ಅಧಿಕಾರಾವಧಿ ಅಂತ್ಯಗೊಳ್ಳಲಿದೆ. ಸಾಮಾನ್ಯವಾಗಿ ಅಧಿಕಾರಾವಧಿಗಿಂತ ಮುನ್ನವೇ ಚುನಾವಣೆ ನಡೆಯುತ್ತದೆ ಮತ್ತು ಮುಂದಿನ ರಾಷ್ಟ್ರಪತಿಗಳನ್ನು ಹಾಲಿ ರಾಷ್ಟ್ರಪತಿ ಸ್ವಾಗತಿಸಿ ನಂತರ ನಿರ್ಗಮಿಸುತ್ತಾರೆ. 2017ರ ಜುಲೈ 17ರಂದು ರಾಮನಾಥ್‌ ಕೋವಿಂದ್‌ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದರು.

ಲೋಕಸಭೆಯಲ್ಲಿ 543 ಮತ್ತು ರಾಜ್ಯಸಭೆಯಲ್ಲಿ 233 ಸಂಸದರು ಸೇರಿ ಒಟ್ಟಾರೆ 776 ಸಂಸದರಿರುತ್ತಾರೆ. 4,809 ಶಾಸಕರು ಮತ ಚಲಾವಣೆ ಮಾಡುವ ಮೂಲಕ ರಾಷ್ಟ್ರಪತಿಯನ್ನು ಆಯ್ಕೆ ಮಾಡುತ್ತಾರೆ.

ರಾಷ್ಟ್ರಪತಿ ಚುನಾವಣೆಯಲ್ಲಿ 4,809 ಮತದಾರರು ಮತ ಚಲಾಯಿಸಲಿದ್ದಾರೆ. ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸಲು ಅವಕಾಶವಿಲ್ಲ ಎಂದು ರಾಜೀವ್ ಕುಮಾರ್ ತಿಳಿಸಿದ್ದಾರೆ.

ಎಲ್ಲಾ ಸಂಸದರು ಮತ್ತು ಶಾಸಕರ ಮತಗಳಲ್ಲಿ ಎನ್‌ಡಿಎ ಶೇಕಡಾ 48.9 ರಷ್ಟು ಮತಗಳನ್ನು ಹೊಂದಿದೆ. ಮೂಲಗಳ ಪ್ರಕಾರ, ಕೇಂದ್ರ ಸರ್ಕಾರವು ತನ್ನ ಮಿತ್ರಪಕ್ಷಗಳು ಮತ್ತು ಬೆಂಬಲಿತ ಪಕ್ಷಗಳ ಜೊತೆ ಸಮನ್ವಯ ಸಾಧಿಸಿದೆ, ಇದರಿಂದಾಗಿ ಮುಂದಿನ ಅಧ್ಯಕ್ಷರನ್ನು ನಿರ್ಧರಿಸಲು ಬಿಜೆಪಿಗೆ ಸುಲಭವಾಗಲಿದೆ.

2017 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಸುಮಾರು ಶೇ.50 ರಷ್ಟು ಮತಗಳು ಎನ್‌ಡಿಎ ಪರವಾಗಿ ಇದ್ದವು. ಒಟ್ಟು 4,880 ಮತದಾರರಲ್ಲಿ 4,109 ಶಾಸಕರು ಮತ್ತು 771 ಸಂಸದರು ಮತ ಚಲಾಯಿಸಿದ್ದರು. ಅಧ್ಯಕ್ಷರ ಚುನಾವಣೆಯಲ್ಲಿ ಸಾಮಾನ್ಯ ಜನರಿಗೆ ಭಾಗವಹಿಸಲು ಅವಕಾಶವಿಲ್ಲ. ಚುನಾಯಿತ ಜನಪ್ರತಿನಿಧಿಗಳು ಮತ ಚಲಾಯಿಸಿದ್ದರು.

ಚುನಾವಣೆ ಲೆಕ್ಕಾಚಾರ ಹೀಗಿದೆ

ರಾಷ್ಟ್ರಪತಿ ಚುನಾವಣೆಯಲ್ಲಿ ಸಂಸದರ ಮತಗಳ ಮೌಲ್ಯದ ಲೆಕ್ಕಾಚಾರವೆ ಬೇರೆ. ಮೊದಲನೆಯದಾಗಿ, ಎಲ್ಲಾ ರಾಜ್ಯಗಳ ವಿಧಾನಸಭೆಗಳ ಶಾಸಕರ ಮತಗಳ ಮೌಲ್ಯವನ್ನು ಸೇರಿಸಲಾಗುತ್ತದೆ. ಈ ಸಾಮೂಹಿಕ ಮೌಲ್ಯವನ್ನು ರಾಜ್ಯಸಭೆ ಮತ್ತು ಲೋಕಸಭೆಯ ಒಟ್ಟು ಸದಸ್ಯರ ಒಟ್ಟು ಸಂಖ್ಯೆಯಿಂದ ಭಾಗಿಸಲಾಗುತ್ತದೆ. ಈ ರೀತಿಯಲ್ಲಿ ಪಡೆದ ಸಂಖ್ಯೆಯು ಸಂಸದರ ಮತದ ಮೌಲ್ಯವಾಗಿರುತ್ತದೆ.

776 ಸಂಸದರು ಮತ್ತು 4,809 ಶಾಸಕರು ರಚಿಸಿದ ಚುನಾವಣಾ ಕಾಲೇಜಿನಿಂದ ಭಾರತದ ರಾಷ್ಟ್ರಪತಿಯನ್ನು ಆಯ್ಕೆ ಮಾಡಲಾಗುತ್ತದೆ. ಚುನಾವಣಾ ಕಾಲೇಜಿನ ಒಟ್ಟು ಸಾಮರ್ಥ್ಯ 10,98,903 ಮತಗಳು. ಇದರಲ್ಲಿ ಅರ್ಧಕ್ಕಿಂತ ಹೆಚ್ಚಿನ ಮತ ಪಡೆದ ಅಭ್ಯರ್ಥಿಯನ್ನು ಭಾರತದ ರಾಷ್ಟ್ರಪತಿಯನ್ನಾಗಿ ಆಯ್ಕೆ ಮಾಡಲಾಗುತ್ತದೆ.

(ಒನ್ಇಂಡಿಯಾ ಸುದ್ದಿ)

Recommended Video

300 ಅಡಿ ಆಳದ ಬೋರ್ವೆಲ್ ಗೆ ಬಿದ್ದಿದ್ದ 18 ತಿಂಗಳ ಮಗುವಿನ ರಕ್ಷಿಸಿದ ಭಾರತೀಯ ಸೇನೆ | OneIndia Kannada

English summary
President Election 2022 : The Election Commission of India Press meet to announce the schedule for the election for the next President of India. Know election date, schedule and highlights.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X