ರಾಷ್ಟ್ರಪತಿ ಚುನಾವಣೆ: ಕೈಗವಸು ಧರಿಸಿದ ಬುಡಕಟ್ಟು ಜನಾಂಗದವರೊಂದಿಗೆ ಮಮತಾ ನೃತ್ಯ
ಕೋಲ್ಕತ್ತಾ ಜೂನ್ 22: ಭಾರತೀಯ ಜನತಾ ಪಕ್ಷ (ಬಿಜೆಪಿ) ಬುಧವಾರ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೈಗವಸುಗಳನ್ನು ಧರಿಸಿದ ಬುಡಕಟ್ಟು ಜನಾಂಗದವರ ಜೊತೆ ನೃತ್ಯ ಮಾಡುವ ವಿಡಿಯೊಂದನ್ನು ಹಂಚಿಕೊಂಡಿದೆ. ಈ ಮೂಲಕ ದೀದಿ ವಿರುದ್ಧ ವಾಗ್ದಾಳಿ ಮಾಡಿದೆ.
ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಬುಡಕಟ್ಟು ಸಮುದಾಯಕ್ಕೆ ಸೇರಿದ ಜಾರ್ಖಂಡ್‌ನ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಅವರನ್ನು ಘೋಷಿಸಿದೆ. ಮಂಗಳವಾರ ಸಂಜೆ ನಡೆದ ಬಿಜೆಪಿ ಸಂಸದೀಯ ಸಭೆಯಲ್ಲಿ ಮುರ್ಮು ಅವರ ಆಯ್ಕೆಯನ್ನು ಅಂತಿಮಗೊಳಿಸಲಾಯಿತು. ಒಡಿಶಾ ಮೂಲದ 64 ವರ್ಷದ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಹುದ್ದೆ ಅಲಂಕರಿಸಿದಲ್ಲಿ, ಈ ಹುದ್ದೆಗೇರಿದ ದೇಶದ ಮೊದಲ ಬುಡಕಟ್ಟು ಮಹಿಳೆ ಎನಿಸಿಕೊಳ್ಳಲಿದ್ದಾರೆ.
ಬಿಜೆಪಿ ನಾಯಕ ಅಮಿತ್ ಮಾಳವಿಯಾ ಟ್ವೀಟ್‌ನಲ್ಲಿ, ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಕಚೇರಿಗೆ ನಾಮನಿರ್ದೇಶನ ಮಾಡಿರುವುದು ಅವರ ಸ್ಪೂರ್ತಿದಾಯಕ ಪ್ರಯಾಣದ ಮನ್ನಣೆ ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ. ಇದರೊಂದಿಗೆ ಇತ್ತೀಚೆಗೆ ಅಲಿಪುರ್‌ದವಾರ್‌ನಲ್ಲಿ ನಡೆದ ಸಮುದಾಯದ ಕಾರ್ಯಕ್ರಮವೊಂದರಲ್ಲಿ ಮಮತಾ ಬ್ಯಾನರ್ಜಿ ಕೈಗವಸುಗಳನ್ನು ಧರಿಸಲು ಒತ್ತಾಯಿಸಿ ಬುಡಕಟ್ಟು ಸಮುದಾಯದೊಂದಿಗೆ ನೃತ್ಯ ಮಾಡಿದ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಇದಕ್ಕೆ 'ಬುಡಕಟ್ಟು ಸಮಾಜಕ್ಕೆ ಎಂತಹ ಅಪಹಾಸ್ಯ ಮಾಡಲಾಗಿದೆ' ಎಂದು ಅವರು ಬರೆದಿದ್ದಾರೆ.
#WATCH West Bengal CM Mamata Banerjee dances with folk artists at a mass wedding ceremony in Alipurduar
— ANI (@ANI) June 8, 2022
(Source: CMO) pic.twitter.com/gg7NQDWRmP

ಸಮರ್ಥ ಆಡಳಿತಗಾರರು
ಪಕ್ಷದ ಸಂಸದೀಯ ಮಂಡಳಿಯ ಸಭೆಯ ನಂತರ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು 64 ವರ್ಷದ ಜಾರ್ಖಂಡ್ ಮಾಜಿ ಗವರ್ನರ್ ದ್ರೌಪದಿ ಮುರ್ಮು ಅವರ ಉಮೇದುವಾರಿಕೆಯನ್ನು ಘೋಷಿಸಿದರು.
ಮುರ್ಮು ಅವರು ಒಡಿಶಾದಲ್ಲಿ ಬಿಜೆಪಿ ಬೆಂಬಲದಿಂದ ಬಿಜೆಡಿ ಸರಕಾರ ರಚಿಸಿದ್ದ ವೇಳೆ ಸಿಎಂ ನವೀನ್ ಪಟ್ನಾಯಕ್ ಸಂಪುಟದಲ್ಲಿ ಸಚಿವರಾಗಿದ್ದರು. ಕಾರ್ಪೊರೇಟರ್ ಆಗಿ ರಾಜಕೀಯ ಜೀವನಕ್ಕೆ ಕಾಲಿರಿಸಿದ ಮುರ್ಮು ಅವರು ಎರಡು ಬಾರಿ ಶಾಸಕರಾಗಿದ್ದಾರೆ. ಜಾರ್ಖಂಡ್ ರಾಜ್ಯಪಾಲರಾಗಿದ್ದ ಅವರು 2013ರಲ್ಲಿ ಬಿಜೆಪಿಯ ಎಸ್‌ಟಿ ಮೋರ್ಚಾದ ರಾಷ್ಟ್ರೀಯ ಕಾರ್ಯಕಾರಿ ಸದಸ್ಯೆಯಾಗಿದ್ದರು.

ಜಾರ್ಖಂಡ್‌ನ ಮೊದಲ ಮಹಿಳಾ ರಾಜ್ಯಪಾಲೆ
ಬಿಜೆಪಿಯ ಸಿದ್ಧಾಂತಗಳಿಗೆ ಸರಿಯಾಗಿ ಒಗ್ಗುವ ಮಹಿಳೆ ಎನಿಸಿಕೊಂಡಿರುವ ದ್ರೌಪದಿ, ಪ್ರಸಿದ್ಧ ಬುಡಕಟ್ಟು ನಾಯಕಿ ಮಾತ್ರವಲ್ಲದೆ ಸಮರ್ಥ ಆಡಳಿತಗಾರರೂ ಆಗಿದ್ದಾರೆ, ಇದನ್ನು ಅವರು ಜಾರ್ಖಂಡ್‌ನ ರಾಜ್ಯಪಾಲರಾಗಿ ಅಧಿಕಾರಾವಧಿಯಲ್ಲಿ ಸಾಬೀತುಪಡಿಸಿದ್ದಾರೆ. ಜಾರ್ಖಂಡ್ ರಾಜ್ಯದ ಮೊದಲ ಮಹಿಳಾ ರಾಜ್ಯಪಾಲೆ ಎನಿಸಿಕೊಂಡಿದ್ದರು.
ರಾಜಕೀಯ ವಿಶ್ಲೇಷಕರ ಪಕ್ರಾರ, ದ್ರೌಪದಿ ಮುರ್ಮುಗೆ ನವೀನ್ ಪಟ್ನಾಯಕ್ ನೇತೃತ್ವದ ಬಿಜೆಡಿಯ ಬೆಂಬಲವೂ ಇದೆ. ಒಡಿಶಾದಲ್ಲಿ ಬಿಜೆಡಿ ಹಾಗೂ ಬಿಜೆಪಿ ಸಹಯೋಗದಲ್ಲಿ ಸಮ್ಮಿಶ್ರ ಸರ್ಕಾರ ರಚನೆಯಾಗಿದ್ದ ಸಮಯದಲ್ಲಿ ಸಚಿವರಾಗಿ ಸೇವೆ ಸಲ್ಲಿಸಿದ್ದ ದ್ರೌಪದಿ ಮುರ್ಮು, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರೊಂದಿಗೆ ಉತ್ತಮ ಸ್ನೇಹವನ್ನೂ ಹೊಂದಿದ್ದಾರೆ. ಇದರಿಂದಾಗಿ ಮುಂದಿನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಆಯ್ಕೆಯಾಗುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಪ್ರಧಾನಿ ನಡೆದುಕೊಮಡಿದ್ದು ಹೇಗೆ..?
ಇದನ್ನು ಹೋಲಿಸಿರುವ ಬಿಜೆಪಿ ನಾಯಕ ಅಮಿತ್ ಮಾಳವಿಯಾ ಟ್ವೀಟ್‌ನಲ್ಲಿ ಸಿಎಂ ಮಮತಾ ಬ್ಯಾನರ್ಜಿ ಬುಡಕಟ್ಟು ಸಮುದಾಯದೊಂದಿಗೆ ನಡೆದುಕೊಂಡ ಬಗೆ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ದ್ರೌಪದಿ ಮುರ್ಮು ಅವರಿಗೆ ರಾಷ್ಟ್ರಪತಿ ಹುದ್ದೆ ನೀಡಿದ್ದರ ಬಗ್ಗೆ ಹೋಲಿಕೆ ಮಾಡಿದ್ದಾರೆ.

ಬುಡಕಟ್ಟು ಜನಾಂಗದ ಮಹಿಳೆಗೆ ರಾಷ್ಟ್ರಪತಿ ಹುದ್ದೆ ನೀಡಿದ ಮೋದಿ
ಆಡಳಿತಾರೂಢ ಬಿಜು ಜನತಾ ದಳ (ಬಿಜೆಡಿ) ಜೊತೆ ಅಲಿಪುರ್ದೌರ್ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ವಿವಾಹದ ಸಂದರ್ಭದಲ್ಲಿ ಆದಿವಾಸಿ ಸಂಗೀತದಲ್ಲಿ ಬುಡಕಟ್ಟು ಮಹಿಳೆಯರೊಂದಿಗೆ ಕೈ-ಕೈ ಹಿಡಿದು ನರ್ತಿಸಿದ್ದರು. ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಸುವೆಂದು ಅಧಿಕಾರಿ ಸೇರಿದಂತೆ ಹಲವರು ಆದಿವಾಸಿಗಳನ್ನು ಕೈಗವಸುಗಳನ್ನು ಧರಿಸುವಂತೆ ಒತ್ತಾಯಿಸಿದ್ದಾರೆ ಎಂದು ಆರೋಪಿಸಿದ್ದಾರೆ. "ಸಿಎಂ ಮಮತಾ ಅವರು ಆದಿವಾಸಿಗಳ ಕೈಗಳನ್ನು ಹಿಡಿದುಕೊಳ್ಳುವಾಗ ಕೈಗವಸುಗಳನ್ನು ಧರಿಸಲು ಒತ್ತಾಯಿಸುತ್ತಾರೆ. ಆದರೆ ಗೌರವಾನ್ವಿತ ಪ್ರಧಾನಿ ನರೇಂದ್ರಮೋದಿ ಅವರು ಭಾರತದ ಅತ್ಯುನ್ನತ ಸಾಂವಿಧಾನಿಕ ಹುದ್ದೆಯನ್ನು ಬುಡಕಟ್ಟು ಜನಾಂಗದವರಿಗೆ ಹಸ್ತಾಂತರಿಸಲು ಬಯಸುತ್ತಾರೆ. ಆದರೆ ಸಿಎಂ ಕೈ ಹಿಡಿದವರು ಮಾತ್ರ ಹೇಗೆ ಗ್ಲೌಸ್ ಹಾಕಿಕೊಂಡಿದ್ದಾರೆ ನೋಡಿ'' ಎಂದು ಟ್ವೀಟ್ ಮಾಡಿದ್ದಾರೆ.












Click it and Unblock the Notifications