ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 17ಕ್ಕೆ ರಾಷ್ಟ್ರಪತಿ ಚುನಾವಣೆ, 20 ರಂದು ಮತ ಎಣಿಕೆ

By Sachhidananda Acharya
|
Google Oneindia Kannada News

ನವದೆಹಲಿ, ಜೂನ್ 7: ಬಹುನಿರೀಕ್ಷಿತ ರಾಷ್ಟ್ರಪತಿ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಜುಲೈ 17ರಂದು ಮುಂದಿನ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.

ಇನ್ನು ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಜುಲೈ 20ರಂದು ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ನಸೀಮ್ ಝೈದಿ ಹೇಳಿದ್ದಾರೆ. ಜೂನ್ 28 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಜುಲೈ 1 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.

President Election On July 17, Counting On July 20

ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, "ಜುಲೈ 24ಕ್ಕೆ ಹಾಲಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವಧಿ ಅಂತ್ಯವಾಗಲಿದೆ. ಈ ಹಿನ್ನಲೆಯಲ್ಲಿ ಜುಲೈ 17ರಂದು ಚುನಾವಣೆ ನಡೆಯಲಿದೆ," ಎಂದು ಹೇಳಿದ್ದಾರೆ.

ಏತನ್ಮಧ್ಯೆ ರಾಷ್ಟ್ರಪತಿ ಚುನಾವಣೆಗೆ ವಿಪಕ್ಷ ಮತ್ತು ಆಡಳಿತ ಪಕ್ಷದ ಅಭ್ಯರ್ಥಿಗಳು ಇನ್ನೂ ಅಂತಿಮವಾಗಿಲ್ಲ. ಬಿಜೆಪಿಯಿಂದ ದ್ರೌಪದಿ ಮುರ್ಮು, ಸುಷ್ಮಾ ಸ್ವರಾಜ್, ಸುಮಿತ್ರಾ ಮಹಾಜನ್ ಹೆಸರು ರೇಸ್ ನಲ್ಲಿದೆ. ವಿಪಕ್ಷಗಳಿಂದ ಮಹಾತ್ಮಾ ಗಾಂಧೀಜಿ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿ, ಮೀರಾ ಕುಮಾರ್ ಹೆಸರು ಕೇಳಿ ಬರುತ್ತಿದೆ.

English summary
The election for the next President of India will be held on July 17, and votes will be counted three days later on July 20. President Pranab Mukherjee's term ends on July 24 said chief election commissioner Naseem Zaidi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X