ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೂತನ ಸಿಜೆಐ ಆಗಿ ಇಂದು ರಂಜನ್ ಗೊಗೊಯ್ ಅಧಿಕಾರ ಸ್ವೀಕಾರ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 13: ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೊಯ್ ಅವರನ್ನು ನೇಮಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಆದೇಶ ಹೊರಡಿಸಿದ್ದಾರೆ.

ಅಕ್ಟೋಬರ್ 02ರ ಗಾಂಧಿ ಜಯಂತಿ ದಿನದಂದು ಸಿಜೆಐ ದೀಪಕ್ ಮಿಶ್ರಾ ಅವರ ಅಧಿಕಾರ ಅವಧಿ ಮುಕ್ತಾಯವಾಗಿದೆ. ರಂಜನ್ ಅವರು ನೂತನ ಸಿಜೆಐ ಆಗಿ ಇಂದು(ಅಕ್ಟೋಬರ್ 03) ಅಧಿಕಾರ ಸ್ವೀಕರಿಸಲಿದ್ದು, ಅವರು 2019 ರ ನವೆಂಬರ್ ವರೆಗೂ ಈ ಹುದ್ದೆಯನ್ನು ನಿರ್ವಹಿಸಲಿದ್ದಾರೆ.

 President Kovind appoints Justice Ranjan Gogoi as next CJI

ನ್ಯಾ.ರಂಜನ್ ಗೊಗೊಯ್ ಅವರನ್ನು ಸುಪ್ರೀಂ ಕೋರ್ಟಿನ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸುವಂತೆ ಹಾಲಿ ಸಿಜೆಐ ದೀಪಕ್ ಮಿಶ್ರಾ ಕೇಂದ್ರ ಸರ್ಕಾರಕ್ಕೆಈ ಮೊದಲು ಪತ್ರ ಬರೆದಿದ್ದರು..

ಅಕ್ಟೋಬರ್ 2 ರಂದು ದೀಪಕ್ ಮಿಶ್ರಾ ಅವರ ಅಧಿಕಾರಾವಧಿ ಗೊಂಡಿದ್ದು, ರಂಜನ್ ಗೋಗಯ್ ಅವರನ್ನು ತಮ್ಮ ಉತ್ತರಾಧಿಕಾರಿಯನ್ನಾಗಿ ಆರಿಸುವಂತೆ ಮಿಶ್ರಾ ಸರ್ಕಾರಕ್ಕೆ ಶಿಫಾರಸ್ಸು ಮಾಡಿದ್ದಾರೆ.

"ಸಿಜೆಐ ಪದಚ್ಯತಿಗೆ ನಕಾರ: ಕಾಂಗ್ರೆಸ್ ಕೊಳಕು ರಾಜಕೀಯಕ್ಕೆ ಉತ್ತರ!"

ಈ ವರೆಗೆ ನಡೆದುಕೊಂಡು ಬಂದಿರುವ ಸಂಪ್ರದಾಯದ ಪ್ರಕಾರ, ನಿವೃತ್ತರಾಗಲಿರುವ ಮುಖ್ಯ ನ್ಯಾಯಮೂರ್ತಿ ತಮ್ಮ ಉತ್ತರಾಧಿಕಾರಿ ಹೆಸರನ್ನು ಸೂಚಿಸುತ್ತಾರೆ. ನ್ಯಾಯಾಂಗದ ಇತಿಹಾಸದಲ್ಲಿ ಎರಡು ಬಾರಿ ಮಾತ್ರ ಈ ಕಟ್ಟಳೆ ಮುರಿಯಲಾಗಿದೆ. ಆ ಎರಡು ಬಾರಿಯೂ ಪ್ರಧಾನಿಯಾಗಿದ್ದವರು ಇಂದಿರಾ ಗಾಂಧಿ.

ಜ.12 ರಂದು ನವದೆಹಲಿಯಲ್ಲಿ ಸುಪ್ರೀಂ ಕೋರ್ಟಿನ ಹಿರಿಯ ನ್ಯಾಯಮೂರ್ತಿಗಳಾದ ನ್ಯಾ. ಕುರಿಯನ್ ಜೋಸೆಫ್, ನ್ಯಾ. ಜೆ ಚಲಮೇಶ್ವರ, ನ್ಯಾ. ರಂಜನ್ ಗೊಗೊಯ್ ಮತ್ತು ನ್ಯಾ. ಮದನ್ ಲೋಕೂರ್ ಸುದ್ದಿಗೋಷ್ಠಿ ಕರೆದಿದ್ದರು. ಈ ಸುದ್ದಿ ಗೋಷ್ಟಿಯಲ್ಲಿ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಲವು ಹುಳುಕುಗಳಿವೆ ಎಂದು ಜರೆದಿದ್ದರು. ಮಾತ್ರವಲ್ಲ, ಇತ್ತೀಚೆಗೆ ದೀಪಕ್ ಮಿಶ್ರಾ ಅವರಿಗೆ ಈ ಕುರಿತು ಬರೆದ ಪತ್ರಕ್ಕೆ ಅವರು ಸರಿಯಾಗಿ ಪ್ರತಿಕ್ರಿಯೆ ನೀಡಿಲ್ಲ ಎಂದೂ ದೂರಿದ್ದರು. ಯಾವ ಸೂಚನೆಯನ್ನೂ ನೀಡದೆ, ಶಿಷ್ಟಾಚಾರವನ್ನೆಲ್ಲ ಉಲ್ಲಂಘಿಸಿದ ನ್ಯಾಯಮೂರ್ತಿಗಳ ನಡೆಗೆ ನ್ಯಾಯಾಂಗ ವಲಯದಲ್ಲಿ ತೀವ್ರ ಅಸಮಾಧಾನ ಸೃಷ್ಟಿಯಾಗಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
President Ram Nath Kovind has appointed Justice Ranjan Gogoi as the next Chief Justice of India. He will assume office on 3rd October, 2018, after the retirement of the current Chief Justice Dipak Misra.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X