ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ಅಂಕಿತ

By Sachhidananda Acharya
|
Google Oneindia Kannada News

ನವದೆಹಲಿ, ಏಪ್ರಿಲ್ 22: 12 ವರ್ಷದೊಳಗಿನ ಅಪ್ರಾಪ್ತರ ಮೇಲೆ ಅತ್ಯಾಚಾರ ನಡೆಸುವ ಕಾಮಕರಿಗೆ ಗಲ್ಲು ಶಿಕ್ಷೆ ವಿಧಿಸುವ ಸುಗ್ರೀವಾಜ್ಞೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ ಹಾಕಿದ್ದಾರೆ.

ಇತ್ತೀಚೆಗೆ ಅಪ್ರಾಪ್ತ ವಯಸ್ಸಿನ ಮಕ್ಕಳ ಮೇಲೆ ನಡೆಯುತ್ತಿರುವ ಅತ್ಯಾಚಾರ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಪೋಕ್ಸೋ (Protection of Children from Sexual Offences) ಕಾಯ್ದೆಯಲ್ಲಿ ತಿದ್ದುಪಡಿ ತರಲು ಕೇಂದ್ರ ಸರ್ಕಾರ ನಿರ್ಧರಿಸಿತ್ತು. ಈ ಸಂಬಂಧ ಸುಗ್ರೀವಾಜ್ಞೆಗೆ ಶನಿವಾರ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿತ್ತು.

ನಿರ್ಧಾರ ಸ್ವಾಗತಾರ್ಹ, ಆದರೂ... ಎಲ್ಲಾ ಅತ್ಯಾಚಾರಿಗಳೂ ಗಲ್ಲಿಗೇರಲಿ! ನಿರ್ಧಾರ ಸ್ವಾಗತಾರ್ಹ, ಆದರೂ... ಎಲ್ಲಾ ಅತ್ಯಾಚಾರಿಗಳೂ ಗಲ್ಲಿಗೇರಲಿ!

ಇದೀಗ ಇದಕ್ಕೆ ರಾಷ್ಟ್ರಪತಿಗಳು ಸಹಿ ಹಾಕಿದ್ದು ತಿದ್ದುಪಡಿ ಕಾಯ್ದೆ ಜಾರಿಗೆ ಬರಲಿದೆ. ಸುಗ್ರೀವಾಜ್ಞೆಯಿಂದ 12 ವರ್ಷದೊಳಗಿನ ಮಕ್ಕಳ ಮೇಲೆ ಅತ್ಯಾಚಾರ ನಡೆಸುವವರಿಗೆ ಗಲ್ಲು ಶಿಕ್ಷೆ ವಿಧಿಸಲಾಗುತ್ತದೆ. ಇದಲ್ಲದೆ 16 ವರ್ಷದೊಳಗಿನ ಯುವತಿಯ ಮೇಲೆ ಅತ್ಯಾಚಾರ ನಡೆಸುವವರಿಗೆ ಕಠಿಣ ಶಿಕ್ಷೆ ನೀಡಲಾಗುತ್ತದೆ.

President Kovind promulgates ordinance to strengthen POCSO Act

ಇನ್ನು ಮಹಿಳೆಯರ ಮೇಲೆ ಅತ್ಯಾಚಾರ ನಡೆಸಿದವರಿಗೆ ನೀಡಲಾಗುವ ಕನಿಷ್ಠ ಶಿಕ್ಷೆಯನ್ನು ಈ ಹಿಂದಿನ 7 ರಿಂದ 10 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಈ ಅಪರಾಧಗಳಿಗೆ ಗರಿಷ್ಠ ಜೀವಾವಧಿ ಶಿಕ್ಷೆಯನ್ನು ನೀಡಬಹುದಾಗಿದೆ.

16 ವರ್ಷದ ಒಳಗಿನ ಯುವತಿಯರ ಮೇಲೆ ಅತ್ಯಾಚಾರ ಎಸಗಿದರೆ ನೀಡಲಾಗುತ್ತಿದ್ದ ಕನಿಷ್ಠ ಶಿಕ್ಷೆಯನ್ನು 10 ರಿಂದ 20 ವರ್ಷಕ್ಕೆ ಏರಿಕೆ ಮಾಡಲಾಗಿದೆ. ಇವರಿಗೆ ಗರಿಷ್ಠ ಜೀವಾವಧಿ ಶಿಕ್ಷೆ ನೀಡಬಹುದಾಗಿದೆ.

12 ವರ್ಷದೊಳಗಿನ ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ12 ವರ್ಷದೊಳಗಿನ ಮಕ್ಕಳ ಮೇಲಿನ ಅತ್ಯಾಚಾರಕ್ಕೆ ಗಲ್ಲುಶಿಕ್ಷೆ

16 ವರ್ಷದೊಳಗಿನ ಯುವತಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದರೆ ಜೀವಾವಧಿ ಶಿಕ್ಷೆ ಹಾಗೂ 12 ವರ್ಷದೊಳಗಿನವರ ಮೇಲೆ ನಡೆಸುವ ಸಾಮೂಹಿಕ ಅತ್ಯಾಚಾರಗಳಿಗೆ 20 ವರ್ಷ ಜೈಲು ಶಿಕ್ಷೆ ಅಥವಾ ಜೀವಾವಧಿ ಅಥವಾ ಗಲ್ಲು ಶಿಕ್ಷೆ ವಿಧಿಸುವಂತೆ ಕಾಯ್ದೆಯಲ್ಲಿ ತಿದ್ದುಪಡಿ ತರಲಾಗಿದೆ.

ಇದೇ ವೇಳೆ ಹಲವು ತಿದ್ದುಪಡಿಗಳನ್ನು ಕಾಯ್ದೆಗೆ ತರಲಾಗಿದೆ. ಅವುಗಳಲ್ಲಿ 16 ವರ್ಷದ ಒಳಗಿನ ಯುವತಿಯರ ಮೇಲೆ ಅತ್ಯಾಚಾರ ನಡೆಸಿದವರಿಗೆ ಯಾವುದೇ ಕಾರಣಕ್ಕೂ ನಿರೀಕ್ಷಣಾ ಜಾಮೀನು ನೀಡುವಂತಿಲ್ಲ ಎಂದು ತಿದ್ದುಪಡಿ ತರಲಾಗಿದೆ.

English summary
President Ramnath Kovind on Sunday promulgated the ordinance to strengthen the Protection of Children from Sexual Offences (POCSO) Act. In the wake of an increase in incidents of rape of minors, the Union Cabinet on Saturday approved a number of measures to amend the POCSO Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X