ಜಮ್ಮು-ಕಾಶ್ಮೀರದಲ್ಲಿ ರಾಜ್ಯಪಾಲರ ಆಳ್ವಿಕೆಗೆ ರಾಷ್ಟ್ರಪತಿಗಳ ಒಪ್ಪಿಗೆ

ನವದೆಹಲಿ, ಜೂನ್ 20: ಜಮ್ಮು ಕಾಶ್ಮೀರದಲ್ಲಿ ತಕ್ಷಣವೇ ಜಾರಿಗೆ ಬರುವಂತೆ ರಾಜ್ಯಪಾಲರ ಆಳ್ವಿಕೆಯನ್ನು ಹೇರಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಒಪ್ಪಿಗೆ ಸೂಚಿಸಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಸಂವಿಧಾನ ಕಾಯ್ದೆ ಸೆಕ್ಷನ್ 92ರ ಅಡಿಯಲ್ಲಿ ರಾಜ್ಯಪಾಲರ ಆಡಳಿತಕ್ಕೆ ನಿನ್ನ ರಾಜ್ಯಪಾಲ ನರಿಂದರ್ ನಾಥ್ ವೋಹ್ರಾ ಶಿಫಾರಸ್ಸು ಮಾಡಿದ್ದರು.

ಜಮ್ಮು ಕಾಶ್ಮಿರದಲ್ಲಿ ಪಿಡಿಪಿ(ಪೀಪಲ್ಸ್ ಡೆಮಾಕ್ರೆಟಿಕ್ ಪಕ್ಷ)ಗೆ ಬಿಜೆಪಿ ತಾನು ನೀಡಿದ್ದ ಬೆಂಬಲವನ್ನು ವಾಪಸ್ ಪಡೆಯುತ್ತಿದ್ದಂತೆಯೇ ಸರ್ಕಾರ ಅಲ್ಪಮತಕ್ಕೆ ಕುಸಿದಿತ್ತು. ಇದರಿಂದಾಗಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ಸಲ್ಲಿಸಿದ್ದರು.

President Ram Nath Kovind approves imposition of Governor’s rule in Jammu and Kashmir

ಈ ಬೆಳವಣಿಗೆಯ ನಂತರ ರಾಜ್ಯಪಾಲ ವೋಹ್ರಾ ಅವರನ್ನು ಭೇಟಿಯಾಗಿದ್ದ ವಿಪಕ್ಷ ನ್ಯಾಶ್ನಲ್ ಕಾನ್ಫರೆನ್ಸ್ ನಾಯಕ ಓಮರ್ ಅಬ್ದುಲ್ಲಾ, ನಾವು ಸಹ ಸರ್ಕಾರ ರಚಿಸುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದರು. ಕಾಂಗ್ರೆಸ್ ಕೂಡ ಮೈತ್ರಿ ಸರ್ಕಾರ ರಚನೆಯಿಂದ ಹಿಂದೆ ಸರಿದಿತ್ತು. ಇದರಿಂದಾಗಿ ರಾಜ್ಯಪಾಲರ ಆಳ್ವಿಕೆಯನ್ನು ಹೇರುವುದು ಅನಿವಾರ್ಯವಾದ ಹಿನ್ನೆಲೆಯಲ್ಲಿ ರಾಷ್ಟ್ರಪತಿಗಳು ಈ ನಿರ್ಧಾರ ಕೈಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+