ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ಸಂಬಂಧಿತ 3 ಮಸೂದೆಗೆ ರಾಷ್ಟ್ರಪತಿ ಅಂಕಿತ

|
Google Oneindia Kannada News

ನವದೆಹಲಿ, ಸಪ್ಟೆಂಬರ್.27: ಭಾರತ್ ಬಂದ್ ಮತ್ತು ರೈತರ ತೀವ್ರ ವಿರೋಧದ ನಡುವೆಯೂ ಕೃಷಿ ಸಂಬಂಧಿತ ಮೂರು ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮೋದನೆ ನೀಡಿದ್ದಾರೆ. ಕೇಂದ್ರ ಸರ್ಕಾರ ಕಳುಹಿಸಿದ್ದ ಮೂರು ಮಸೂದೆಗಳಿಗೆ ಅಂಕಿತ ಹಾಕಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಅಂಗೀಕಾರಗೊಂಡಿದ್ದ ಕೃಷಿ ಸಂಬಂಧಿತ ಮೂರು ಮಸೂದೆಗಳನ್ನು ರಾಷ್ಟ್ರಪತಿಗಳ ಅಂಕಿತಕ್ಕಾಗಿ ಕಳುಹಿಸಲಾಗಿತ್ತು. ಶುಕ್ರವಾರವಷ್ಟೇ ಕೃಷಿ ಸಂಬಂಧಿತ ಮಸೂದೆ ಜಾರಿ ವಿರೋಧಿಸಿ ವಿವಿಧ ರೈತಪರ ಸಂಘಟನೆಗಳು ಭಾರತ್ ಬಂದ್ ನಡೆಸಿದ್ದವು.

ರೈತರಿಗೆ ಕೃಷಿ ಸಂಬಂಧಿತ ಮಸೂದೆ ಮರಣಶಾಸನ: ರಾಹುಲ್ ಗಾಂಧಿರೈತರಿಗೆ ಕೃಷಿ ಸಂಬಂಧಿತ ಮಸೂದೆ ಮರಣಶಾಸನ: ರಾಹುಲ್ ಗಾಂಧಿ

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಕೃಷಿ ಸಂಬಂಧಿತ ಮಸೂದೆಗಳಿಗೆ ಅಂಕಿತ ಹಾಕಿದ ಕೆಲವೇ ಕ್ಷಣಗಳಲ್ಲಿ ಹಲವು ವರ್ಷಗಳಿಂದ ಬಿಜೆಪಿ ಜೊತೆಗೆ ಗುರುತಿಸಿಕೊಂಡಿದ್ದ ಶಿರೋಮಣಿ ಅಕಾಲಿ ದಳವು ಎನ್ ಡಿಎ ಮೈತ್ರಿಕೂಟದಿಂದ ಹೊರ ಬಂದಿದೆ.

President Ram Nath Kovind Gives Assent To Three Farm Bills Passed By The Parliament.

ಕೇಂದ್ರ ಸರ್ಕಾರದ ಕೃಷಿ ಮಸೂದೆಗೆ ವಿಪಕ್ಷಗಳ ವಿರೋಧ:

ಅಖಿಲ ಭಾರತ ಕಿಸಾನ್ ಸಂಘರ್ಷ ಸಹಕಾರಿ ಸಮಿತಿ, ಅಖಿಲ ಭಾರತ ಕಿಸಾನ್ ಮಹಾಸಂಘ, ಭಾರತೀಯ ಕಿಸಾನ್ ಒಕ್ಕೂಟ ಸಂಘಟನೆಗಳು ಭಾರತ್ ಬಂದ್ ಗೆ ಕರೆ ನೀಡಿವೆ. ಅಖಿಲ ಭಾರತ ಕಾಂಗ್ರೆಸ್ ಕಮಿಟಿ, ಸಮಾಜವಾದಿ ಪಕ್ಷ, ಬಹುಜನ ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್, ಡಿಎಂಕೆ ಮತ್ತು ಟಿಆರ್ಎಸ್ ಸೇರಿದಂತೆ 18 ವಿರೋಧ ಪಕ್ಷಗಳು ಭಾರತ್ ಬಂದ್ ಗೆ ಬೆಂಬಲ ಸೂಚಿಸಿವೆ.

English summary
President Ram Nath Kovind Gives Assent To Three Farm Bills Passed By The Parliament.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X