ಉದ್ಘಾಟನೆಯಾದ ವಿಮಾನ ನಿಲ್ದಾಣ, ಬೆಂಗಳೂರು-ಶಿರಡಿ ಇನ್ನೂ ಹತ್ತಿರ
ಶಿರಡಿ, ಅಕ್ಟೋಬರ್ 1 : ಶಿರಡಿ ಸಾಯಿಬಾಬಾ ದರ್ಶನಕ್ಕೆ ಹೋಗುವ ಭಕ್ತರು ಇನ್ನು ಮುಂದೆ ವಿಮಾನದಲ್ಲೇ ಹೋಗಿ ಬರಬಹುದು. ನೂತನ ಶಿರಡಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಇಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಉದ್ಘಾಟಿಸಿದ್ದು, ಶಿರಡಿಗೆ ವಿಮಾನಯಾನ ಸೇವೆ ಆರಂಭವಾಗಿದೆ.
ಇಂದು ವಿಮಾನ ನಿಲ್ದಾಣ ಉದ್ಘಾಟಿಸಿದ ರಾಷ್ಟ್ರಪತಿಗಳು ಮುಂಬೈ-ಶಿರಡಿ ನಡುವೆ ಸಂಚರಿಸುವ 'ಅಲೆಯನ್ಸ್ ಏರ್' ವಿಮಾನ ಸೇವೆಗೆ ಚಾಲನೆ ನೀಡಿದ್ದಾರೆ. ದೆಹಲಿ, ಹೈದರಾಬಾದ್ ಹಾಗೂ ಮುಂಬೈ ನಡುವೆ ವಿಮಾನಯಾನ ಸೇವೆ ಆರಂಭವಾಗಲಿದ್ದು, ಸದ್ಯದಲ್ಲೇ ಬೆಂಗಳೂರಿಗೂ ವಿಮಾನಯಾನ ಸೇವೆ ಆರಂಭವಾಗಲಿದೆ.

ಸದ್ಯಕ್ಕೆ ಹಗಲು ಹೊತ್ತು ಮಾತ್ರ ವಿಮಾನ ನಿಲ್ದಾಣ ಕಾರ್ಯನಿರ್ವಹಿಸುತ್ತದೆ. ಆದರೆ ಇನ್ನು ಕೆಲವೇ ತಿಂಗಳಲ್ಲಿ ವಿಮಾನ ನಿಲ್ದಾಣ ರಾತ್ರಿ ಹೊತ್ತೂ ಕಾರ್ಯಾಚರಿಸಲಿದೆ. ಸದ್ಯಕ್ಕೆ ಪ್ರತಿದಿನ 500 ಪ್ರಯಾಣಿಕರ ಆಗಮನ, ನಿರ್ಗಮನಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿಮಾನ ನಿಲ್ದಾಣದ ವಿಸ್ತರಣೆ ಕಾರ್ಯವೂ ಇದೇ ವೇಳೆ ನಡೆಯುತ್ತಿದೆ.
ಶಿರಡಿ ಸಾಯಿಬಾಬಾ ದೇವಾಲಯದಿಂದ ವಿಮಾನ ನಿಲ್ದಾಣ 14 ಕಿ.ಮೀ.ದೂರದಲ್ಲಿದೆ. ಪ್ರಯಾಣಿಕರು ವಿಮಾನ ನಿಲ್ದಾಣದಿಂದ ದೇವಾಲಯಕ್ಕೆ ತೆರಳಲು ಬಸ್ ವ್ಯವಸ್ಥೆ ಮಾಡಲು ಮಹಾರಾಷ್ಟ್ರ ಸರ್ಕಾರ ಸಿದ್ಧತೆ ನಡೆಸಿದೆ. ಟ್ಯಾಕ್ಸಿ ಸೇವೆಯೂ ಶಿರಡಿಗೆ ಆಗಮಿಸುವ ಭಕ್ತಾದಿಗಳಿಗೆ ಲಭ್ಯವಾಗಲಿದೆ.
#PresidentKovind inaugurates Shirdi International Airport & flags off inaugural flight from Shirdi to Mumbai pic.twitter.com/H6yjivYPCj
— President of India (@rashtrapatibhvn) October 1, 2017
ಸದ್ಯಕ್ಕೆ ಅಲೆಯನ್ಸ್ ಏರ್, ಟ್ರೂ ಜೆಟ್, ಇಂಡಿಗೋ ಸಂಸ್ಥೆಗಳು ಶಿರಡಿಗೆ ದೇಶದ ಬೇರೆ ಬೇರೆ ಭಾಗಗಳಿಂದ ವಿಮಾನ ಸಂಪರ್ಕ ಕಲ್ಪಿಸಲಿವೆ. ವಿಮಾನ ನಿಲ್ದಾಣ ಕಾರ್ಯಾರಂಭ ಮಾಡಿದ ಬಳಿಕ ಬೇರೆ ಕಂಪನಿಗಳು ವಿಮಾನ ಹಾರಾಟ ನಡೆಸಲು ಆಸಕ್ತಿ ವಹಿಸುವ ಸಾಧ್ಯತೆ ಇದೆ.
ಉದ್ಘಾಟನಾ ಸಮಾರಂಭದಲ್ಲಿ ಮಹಾರಾಷ್ಟ್ರ ರಾಜ್ಯಪಾಲ ಸಿ.ವಿ. ರಾವ್, ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಸೇರಿದಂತೆ ಗಣ್ಯರು ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications