ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಷ್ಟ್ರಪತಿ ಚುನಾವಣೆ: ಗೋಪಾಲ ಗಾಂಧಿ ವಿಪಕ್ಷಗಳ ಅಂತಿಮ ಆಯ್ಕೆ?

ಈ ಬಾರಿಯ ರಾಷ್ಟ್ರಪತಿ ಚುನಾವಣೆಗೆ ಬಿಜೆಪಿ ಹಾಗೂ ಮಿತ್ರ ಪಕ್ಷಗಳು ದ್ರೌಪದಿ ಮರ್ಮು ಅವರನ್ನು ರಾಷ್ಟ್ರಪತಿಯ ಅಭ್ಯರ್ಥಿಯನ್ನಾಗಿ ಘೋಷಿಸಲು ಸಿದ್ಧತೆ ನಡೆಸಿದ್ದರೆ, ವಿರೋಧ ಪಕ್ಷಗಳು ಗಾಂಧಿ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿಯವರನ್ನು ಕಣಕ್ಕಿಳಿಸಲು ನಿರ

|
Google Oneindia Kannada News

ನವದೆಹಲಿ, ಮೇ 19: ರಾಷ್ಟ್ರಪತಿ ಚುನಾವಣೆಗಾಗಿ ವಿವಿಧ ತಂತ್ರಗಾರಿಕೆಯಲ್ಲಿ ತೊಡಗಿರುವ ಬಿಜೆಪಿ ಹಾಗೂ ಕಾಂಗ್ರೆಸ್ ತಮ್ಮ ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಲೆಕ್ಕಾಚಾರ ಹಾಕತೊಡಗಿವೆ. ಬಿಜೆಪಿ ಪಾಳಯದಿಂದ ಒರಿಸ್ಸಾದ ರಾಜಕಾರಣಿ ದ್ರೌಪದಿ ಮರ್ಮು ಹೆಸರು ಅಂತಿಮಗೊಂಡಿದ್ದರೆ, ಕಾಂಗ್ರೆಸ್ ಹಾಗೂ ಇತರ ವಿಪಕ್ಷಗಳಿಂದ ಮಹಾತ್ಮಾ ಗಾಂಧೀಜಿ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿ ಅವರನ್ನು ಅಭ್ಯರ್ಥಿಯನ್ನಾಗಿಸುವುದು ಬಹುತೇಕ ನಿಶ್ಚಿತವಾಗಿದೆ ಎನ್ನಲಾಗಿದೆ.

ಇತ್ತ, ಕಾಂಗ್ರೆಸ್ ಹಾಗೂ ಎಡಪಕ್ಷಗಳು ಮಹಾತ್ಮಾ ಗಾಂಧೀಜಿಯವರ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿಯವರನ್ನು ಕಣಕ್ಕಿಳಿಸಲು ನಿರ್ಧರಿಸಿವೆ.[ಇವರನ್ನು ರಾಷ್ಟ್ರಪತಿ ಹುದ್ದೆಗೆ ಮೋದಿ ಏಕೆ ಆರಿಸಲಿಕ್ಕಿಲ್ಲ?]

Presidential election: Opposition opts Gopala Krishna Gandhi as their candidate

ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಪಿಐ (ಎಂ) ಪಕ್ಷದ ಸೀತಾರಾಂ ಯೆಚೂರಿ, ಕಾಂಗ್ರೆಸ್ ಹಾಗೂ ಮಿತ್ರಪಕ್ಷಗಳ ವತಿಯಿಂದ ಗೋಪಾಲ ಕೃಷ್ಣ ಗಾಂಧಿಯವರನ್ನು ಕಣಕ್ಕಿಳಿಸುವುದು ಬಹುತೇಕ ನಿಶ್ಚಿತವಾಗಿದೆ ಎಂದು ತಿಳಿಸಿದ್ದಾರೆ. ಆದರೆ, ಬಿಜೆಪಿ ಹಾಗೂ ಮಿತ್ರ ಪಕ್ಷಗಳು ಒಟ್ಟಾಗಿ ತಮ್ಮ ಅಭ್ಯರ್ಥಿಯನ್ನು ಘೋಷಿಸುವವರೆಗೂ ತಾವು ತಮ್ಮ ಅಭ್ಯರ್ಥಿಯನ್ನು ಘೋಷಿಸದೇ ಇರಲು ಕಾಂಗ್ರೆಸ್ ಹಾಗೂ ಎಡಪಕ್ಷಗಳು ನಿರ್ಧರಿಸಿವೆ ಎಂದು ಅವರು ತಿಳಿಸಿದ್ದಾರೆ.[ಭಾರತದ ರಾಷ್ಟ್ರಪತಿ ಅಯ್ಕೆ ಮಾಡುವ ಎಲೆಕ್ಟ್ರೋಲ್ ಕಾಲೇಜ್ ಹೇಗಿದೆ?]

ಆದರೆ, ಎಡಪಕ್ಷಗಳಲ್ಲಿ ತಮ್ಮ ಒಕ್ಕೊರಲಿನ ಅಭ್ಯರ್ಥಿಯ ಬಗ್ಗೆ ಗೊಂದಲವಿದೆ. ಈ ಗುಂಪಿನ ಕೆಲವು ನಾಯಕರು ಮಹಾರಾಷ್ಟ್ರದ ಎನ್ ಸಿಪಿ ಪಕ್ಷದ ಮುಖ್ಯಸ್ಥ ಶರದ್ ಪವಾರ್ ಅವರನ್ನು ಕಣಕ್ಕಿಳಿಸುವ ಬಗ್ಗೆ ಆಲೋಚಿಸಿದ್ದರೆ, ಮತ್ತೂ ಕೆಲವರು ಜೆಡಿಯು ನ ರಾಷ್ಟ್ರೀಯ ನಾಯಕ ಶರದ್ ಯಾದವ್ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ್ದಾರೆ.

ಆದರೂ, ಗೋಪಾಲ ಕೃಷ್ಣ ಗಾಂಧಿಯವರ ಬಗ್ಗೆ ಬಹುತೇಕರ ಒಲವಿದ್ದು, ಅವರೇ ಎಡಪಕ್ಷಗಳು ಹಾಗೂ ಕಾಂಗ್ರೆಸ್ ನ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಬಹುತೇಕ ನಿಶ್ಚಿತವಾಗಿದೆ. ಈ ಬಗ್ಗೆ ಅಧಿಕೃತ ಹೇಳಿಕೆಯಷ್ಟೇ ಹೊರಬೀಳಬೇಕಿದೆ.

{promotion-urls}

English summary
It is almost official. Gopal Krishna Gandhi will be the opposition's candidate as the next president of India. CPI(M) general Secretary Sitaram Yechury suggested that Gopal Krishna Gandhi may be among the possible choices but said that the ruling party should declare their candidate first in order to build consensus.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X