ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ

|
Google Oneindia Kannada News

ನವದೆಹಲಿ, ಜೂನ್ 24: ಭಾರತದಲ್ಲಿ ತೀವ್ರ ಕುತೂಹಲ ಕೆರಳಿಸಿರುವ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಶುಕ್ರವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.

ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ತಮ್ಮ ನಾಮಪತ್ರ ಸಲ್ಲಿಸಲು ಸಂಸತ್ತಿಗೆ ಆಗಮಿಸಿದ್ದು, ಸಂಸತ್ತಿನಲ್ಲಿ ಮಹಾತ್ಮ ಗಾಂಧಿ, ಡಾ. ಬಿ. ಆರ್. ಅಂಬೇಡ್ಕರ್ ಮತ್ತು ಬಿರ್ಸಾ ಮುಂಡಾ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು.

ದ್ರೌಪದಿ ಮುರ್ಮು ಬಿಜೆಪಿಯ 'ಡಮ್ಮಿ' ರಾಷ್ಟ್ರಪತಿ ಅಭ್ಯರ್ಥಿ: ಪುದುಚೇರಿ ಕಾಂಗ್ರೆಸ್ ಟ್ವೀಟ್ ದ್ರೌಪದಿ ಮುರ್ಮು ಬಿಜೆಪಿಯ 'ಡಮ್ಮಿ' ರಾಷ್ಟ್ರಪತಿ ಅಭ್ಯರ್ಥಿ: ಪುದುಚೇರಿ ಕಾಂಗ್ರೆಸ್ ಟ್ವೀಟ್

ಎನ್‌ಡಿಎಯ ರಾಷ್ಟ್ರಪತಿ ಚುನಾವಣೆ ಅಭ್ಯರ್ಥಿ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಸುವ ಮುನ್ನವೇ ಪ್ರಧಾನಿ ನರೇಂದ್ರ ಮೋದಿ ಕೂಡ ಸಂಸತ್ತಿಗೆ ಆಗಮಿಸಿದರು. ಮುರ್ಮು ಅವರು ಅತ್ಯುನ್ನತ ಸಾಂವಿಧಾನಿಕ ಹುದ್ದೆಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವಾರು ಕೇಂದ್ರ ಸಚಿವರು ಮತ್ತು ಬಿಜೆಪಿ ಸಂಸದರು ಉಪಸ್ಥಿತರಿದ್ದರು.

Presidential Elections 2022: NDA Candidate Draupadi Murmu Files Her Nomination

ರಾಷ್ಟ್ರಪತಿ ಚುನಾವಣೆ ನಡೆಯುವುದು ಯಾವಾಗ?: ರಾಷ್ಟ್ರಪತಿ ಚುನಾವಣೆಗೆ ಸಾಮಾನ್ಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ವಿರೋಧ ಪಕ್ಷಗಳು ನಿರ್ಧರಿಸಿವೆ. 16ನೇ ರಾಷ್ಟ್ರಪತಿ ಚುನಾವಣೆ ಜುಲೈ 18ರಂದು ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ.

ನಾಮಪತ್ರಗಳ ಪರಿಶೀಲನೆಗೆ ಜೂನ್ 30 ಮತ್ತು ಉಮೇದುವಾರಿಕೆ ಹಿಂಪಡೆಯಲು ಜುಲೈ 2 ಕೊನೆಯ ದಿನಾಂಕವಾಗಿದೆ. ಭಾರತದ 14 ನೇ ರಾಷ್ಟ್ರಪತಿಯಾಗಿ ಸೇವೆ ಸಲ್ಲಿಸುತ್ತಿರುವ ರಾಮನಾಥ್ ಕೋವಿಂದ್ ಜುಲೈ 25, 2017 ರಂದು ಅಧಿಕಾರ ವಹಿಸಿಕೊಂಡಿದ್ದು, ಅವರ ಅವಧಿಯು ಜುಲೈ 24, 2022 ರಂದು ಕೊನೆಗೊಳ್ಳುತ್ತದೆ.

English summary
Presidential Elections 2022: NDA Candidate Draupadi Murmu Files Her Nomination At Parliament. PM Modi, Several Union Ministers and BJP MPs were also present to extend support to Murmu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X