ಜೂನ್ 25ರಂದು ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ?
ನವದೆಹಲಿ ಜೂ.22: ರಾಷ್ಟ್ರಪತಿ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಜೂನ್ 25ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬಿಜೆಪಿ ನೇತೃತ್ವದ ಎನ್ಡಿಎ ಮಂಗಳವಾರ ದ್ರೌಪದಿ ಮುರ್ಮು ಹೆಸರನ್ನು ಘೋಷಣೆ ಮಾಡಿದೆ. ದೇಶದ ಸಾಂವಿಧಾನಿಕ ಉನ್ನತ ಹುದ್ದೆಯಾದ ಅಧ್ಯಕ್ಷೀಯ ಚುನಾವಣೆಗೆ ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ.
ಮಂಗಳವಾರ ಮಹತ್ವದ ಸಭೆ ನಡೆಸಿದ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ, ಅಮಿತ್ ಶಾ, ನಿತಿನ್ ಗಡ್ಕರಿ ಸೇರಿದಂತೆ ಇತರ ನಾಯಕರು ಅಭ್ಯರ್ಥಿ ಬಗ್ಗೆ ಅಂತಿಮ ತೀರ್ಮಾನ ಮಾಡಿದರು. ಬಳಿಕ ದ್ರೌಪದಿ ಮುರ್ಮು ಹೆಸರು ಘೋಷಣೆ ಮಾಡಿದರು.

ಜೂ.29ನಾಮಪತ್ರ ಸಲ್ಲಿಕೆಗೆ ಕೊನೆ ದಿನ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿದೆ. ಜೂ.25ರ ಶನಿವಾರ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ.

ಬುಡಕಟ್ಟು ಜನಾಂಗದ ಮಹಿಳೆಯೊಬ್ಬರನ್ನು ದೇಶದ ಉನ್ನತ ಸ್ಥಾನಕ್ಕೆ ಆಯ್ಕೆ ಮಾಡಿದ ಬಿಜೆಪಿ ನೇತೃತ್ವದ ಎನ್ಡಿಎ ಮೈತ್ರಿಕೂಟ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. "ಅಭ್ಯರ್ಥಿ ಘೋಷಣೆಯ ಸುದ್ದಿ ತಿಳಿದ ಕೂಡಲೇ ನಂಬಲು ಸಾಧ್ಯವಾಗಿರಲಿಲ್ಲ" ಎಂದು ಸುದ್ದಿಗಾರರ ಪ್ರಶ್ನೆಗೆ ದ್ರೌಪದಿ ಮುರ್ಮು ಪ್ರತಿಕ್ರಿಯಿಸಿದ್ದಾರೆ.
Recommended Video
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications