ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೂನ್‌ 25ರಂದು ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ?

|
Google Oneindia Kannada News

ನವದೆಹಲಿ ಜೂ.22: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಜೂನ್ 25ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಬಿಜೆಪಿ ನೇತೃತ್ವದ ಎನ್‌ಡಿಎ ಮಂಗಳವಾರ ದ್ರೌಪದಿ ಮುರ್ಮು ಹೆಸರನ್ನು ಘೋಷಣೆ ಮಾಡಿದೆ. ದೇಶದ ಸಾಂವಿಧಾನಿಕ ಉನ್ನತ ಹುದ್ದೆಯಾದ ಅಧ್ಯಕ್ಷೀಯ ಚುನಾವಣೆಗೆ ವಿರೋಧ ಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ.

ಮಂಗಳವಾರ ಮಹತ್ವದ ಸಭೆ ನಡೆಸಿದ ಬಿಜೆಪಿ ಅಧ್ಯಕ್ಷ ಜೆ. ಪಿ. ನಡ್ಡಾ, ಅಮಿತ್ ಶಾ, ನಿತಿನ್ ಗಡ್ಕರಿ ಸೇರಿದಂತೆ ಇತರ ನಾಯಕರು ಅಭ್ಯರ್ಥಿ ಬಗ್ಗೆ ಅಂತಿಮ ತೀರ್ಮಾನ ಮಾಡಿದರು. ಬಳಿಕ ದ್ರೌಪದಿ ಮುರ್ಮು ಹೆಸರು ಘೋಷಣೆ ಮಾಡಿದರು.

 Presidential Polls: Draupadi Murmu May File Nominations on June 25TH

ಜೂ.29ನಾಮಪತ್ರ ಸಲ್ಲಿಕೆಗೆ ಕೊನೆ ದಿನ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 29 ಕೊನೆಯ ದಿನವಾಗಿದೆ. ಜೂ.25ರ ಶನಿವಾರ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಸುವ ನಿರೀಕ್ಷೆ ಇದೆ.

 Presidential Polls: Draupadi Murmu May File Nominations on June 25TH

ಬುಡಕಟ್ಟು ಜನಾಂಗದ ಮಹಿಳೆಯೊಬ್ಬರನ್ನು ದೇಶದ ಉನ್ನತ ಸ್ಥಾನಕ್ಕೆ ಆಯ್ಕೆ ಮಾಡಿದ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ನಾಯಕರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. "ಅಭ್ಯರ್ಥಿ ಘೋಷಣೆಯ ಸುದ್ದಿ ತಿಳಿದ ಕೂಡಲೇ ನಂಬಲು ಸಾಧ್ಯವಾಗಿರಲಿಲ್ಲ" ಎಂದು ಸುದ್ದಿಗಾರರ ಪ್ರಶ್ನೆಗೆ ದ್ರೌಪದಿ ಮುರ್ಮು ಪ್ರತಿಕ್ರಿಯಿಸಿದ್ದಾರೆ.

Recommended Video

T20 WorldCupಗೆ DKಮತ್ತುPantನಡುವೆ ಪೈಪೋಟಿ!Rahul Dravidಯಾರಿಗೆ ಚಾನ್ಸ್ ಕೊಡ್ತಾರೆ? *Cricket|OneIndia Kannada

English summary
Draupadi Murmu may file nominations on june 25th for presidential elections. June 29th last day for file nominations.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X