ಆಸ್ಪತ್ರೆಗೆ ದಾಖಲಾಗಿರುವ ತಾಯಿ ಹೀರಾಬೆನ್ ಅವರನ್ನು ಭೇಟಿ ಮಾಡಿದ ಪ್ರಧಾನಿ ಮೋದಿ

ಗುಜರಾತ್‌ನ ಅಹಮದಾಬಾದ್‌ನ ಆಸ್ಪತ್ರೆಗೆ ಬುಧವಾರ ದಾಖಲಾಗಿದ್ದ ತಾಯಿ ಹೀರಾಬೆನ್ ಮೋದಿ ಅವರನ್ನು ಭೇಟಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಅಹಮದಾಬಾದ್ ಗೆ ಆಗಮಿಸಿದ್ದಾರೆ. ಹೀರಾಬೆನ್ ಅವರ ಸ್ಥಿತಿ ಸ್ಥಿರವಾಗಿದೆ ಎಂದು ಯುಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯ ಹಠಾತ್ ಹದಗೆಟ್ಟಿದ್ದರಿಂದ ಅವರನ್ನು ಅಹಮದಾಬಾದ್‌ನ ಯುಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಮತ್ತು ರಿಸರ್ಚ್ ಸೆಂಟರ್‌ಗೆ ದಾಖಲಿಸಲಾಗಿದೆ. ಅವರ ವಯಸ್ಸು ಸುಮಾರು 100 ವರ್ಷಗಳು. ಆಸ್ಪತ್ರೆ ಆಡಳಿತ ಮಂಡಳಿ ಪ್ರಕಾರ, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ.

ಮಂಗಳವಾರ ಆರೋಗ್ಯ ಹದಗೆಟ್ಟಾಗ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಅಹಮದಾಬಾದ್ ಮನೆಯಲ್ಲಿದ್ದರು. ಅವರಿಗೆ ಕಫದ ಸಮಸ್ಯೆ ಇದೆ ಎಂದು ಹೇಳಲಾಗುತ್ತಿದೆ. ಅವರನ್ನು ತಕ್ಷಣವೇ ಯುಎನ್ ಮೆಹ್ತಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಪ್ರಧಾನಿ ಮೋದಿ ಅವರ ಸಂಬಂಧಿಕರು ಅವರ ಜೊತೆಯಲ್ಲಿದ್ದಾರೆ. ಮತ್ತೊಂದೆಡೆ ಗುಜರಾತ್ ಆರೋಗ್ಯ ಸಚಿವ ಹೃಷಿಕೇಶ್ ಪಟೇಲ್ ಕೂಡ ಆಸ್ಪತ್ರೆಗೆ ಆಗಮಿಸಿದ್ದಾರೆ. ವೈದ್ಯರನ್ನು ಭೇಟಿಯಾಗಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದಿದ್ದಾರೆ.

ಹೀರಾಬೆನ್ ಆರೋಗ್ಯ ಸ್ಥಿರ

ಹೀರಾಬೆನ್ ಆರೋಗ್ಯ ಸ್ಥಿರ

ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಅವರ ಆರೋಗ್ಯದ ಬಗ್ಗೆ ತಿಳಿಯಲು ಕೆಲವೇ ಹೊತ್ತಿನಲ್ಲಿ ಆಸ್ಪತ್ರೆಗೆ ಆಗಮಿಸಲಿದ್ದಾರೆ. ಮಾ ಅವರನ್ನು ಭೇಟಿ ಮಾಡಲು ಪ್ರಧಾನಿ ಮೋದಿ ಅಹಮದಾಬಾದ್‌ಗೆ ಭೇಟಿ ನೀಡಿದ್ದಾರೆ ಎಂಬ ಸುದ್ದಿಯೂ ಇದೆ. ಇಂತಹ ಪರಿಸ್ಥಿತಿಯಲ್ಲಿ ಆಸ್ಪತ್ರೆಯ ಸುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ದೇಶಾದ್ಯಂತ ಕಳವಳ

ದೇಶಾದ್ಯಂತ ಕಳವಳ

18 ಜೂನ್ 2022 ರಂದು, ಹೀರಾಬೆನ್ 100ನೇ ವರ್ಷಕ್ಕೆ ಪ್ರವೇಶಿಸಿದರು. ಈ ವೇಳೆ ಪ್ರಧಾನಿ ಮೋದಿ ತಾಯಿಯನ್ನು ಭೇಟಿ ಮಾಡಲು ಅಹಮದಾಬಾದ್‌ಗೆ ತೆರಳಿದ್ದರು. ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿಯ ಪಾದಗಳನ್ನು ತೊಳೆದು ಶಾಲು ಹೊದಿಸಿದರು. ಈ ತಿಂಗಳ ಆರಂಭದಲ್ಲಿ ಪ್ರಧಾನಿ ತಮ್ಮ ತಾಯಿಯನ್ನು ಭೇಟಿಯಾಗಿದ್ದರು. ಆ ಸಮಯದಲ್ಲಿ ಅವರು ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಮತ ಚಲಾಯಿಸಲು ಹೀರಾಬೇನ್ ತೆರಳಿದ್ದರು. ಇಷ್ಟು ವಯಸ್ಸಾದ ಮೇಲೂ ಪ್ರಧಾನಿ ತಾಯಿ ಮತ ಹಾಕಿದ್ದರು.

ಮತ್ತೊಂದೆಡೆ ಹೀರಾಬೆನ್ ಅನಾರೋಗ್ಯದ ಸುದ್ದಿ ತಿಳಿದ ತಕ್ಷಣ ಆಸ್ಪತ್ರೆಯ ಹೊರಗೆ ಬಿಜೆಪಿ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಸದ್ಯ ಅಲ್ಲಿ ಭದ್ರತೆ ಹೆಚ್ಚಿಸಲಾಗಿದೆ. ಮತ್ತೊಂದೆಡೆ, ದೇಶಾದ್ಯಂತ ಜನರು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತಿದ್ದಾರೆ.

ಖಾಸಗಿ ಪ್ರವಾಸದ ವೇಳೆ ಅಪಘಾತ

ಖಾಸಗಿ ಪ್ರವಾಸದ ವೇಳೆ ಅಪಘಾತ

ಮೈಸೂರು ತಾಲೂಕಿನ ಕಡಕೊಳ ಬಳಿ ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಪ್ರಯಾಣಿಸುತ್ತಿದ್ದ ಕಾರು ಮಂಗಳವಾರ ಅಪಘಾತಕ್ಕೀಡಾಗಿತ್ತು. ಈ ಅಪಘಾತದಲ್ಲಿ ಪ್ರಹ್ಲಾದ್ ಮೋದಿ, ಅವರ ಪುತ್ರ ಹಾಗೂ ಸೊಸೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರಹ್ಲಾದ್ ಮೋದಿ ಅವರು ಇಂದು ಬೆಳಗ್ಗೆ ಬೆಂಗಳೂರಿನಿಂದ ಬಂಡೀಪುರಕ್ಕೆ ಮರ್ಸಿಡಿಸ್ ಬೆಂಜ್ ಕಾರಿನಲ್ಲಿ ಖಾಸಗಿ ಪ್ರವಾಸಕ್ಕೆ ತೆರಳುತ್ತಿದ್ದ ವೇಳೆ ಕಡಕೋಳ ಕೈಗಾರಿಕಾ ಪ್ರದೇಶದ ಬಳಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.

ಅಪಾಯದಿಂದ ಪಾರು

ಅಪಾಯದಿಂದ ಪಾರು

ಕಾರಿನಲ್ಲಿ ಪ್ರಹ್ಲಾದ್ ಮೋದಿ, ಅವರ ಮಗ, ಸೊಸೆ, ಮೊಮ್ಮಗ ಮತ್ತು ಚಾಲಕ ಇದ್ದರು. ಗಾಯಗೊಂಡಿರುವ ಅವರನ್ನು ಕೂಡಲೇ ಮೈಸೂರಿನ ಎಂಜಿ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಹ್ಲಾದ್ ಮೋದಿ ಅವರ ದವಡೆಗೆ ಗಾಯಗಳಾಗಿದ್ದು, ಅವರ ಸೊಸೆ ತಲೆಗೆ ಗಾಯವಾಗಿದೆ. ಇತರರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ. ವಿಷಯ ತಿಳಿಯುತ್ತಿದ್ದಂತೆ ಮೈಸೂರು ಎಸ್​ಪಿ ಸೀಮಾ ಲಾಟ್ಕರ್ ಅವರು ಸ್ಥಳಕ್ಕೆ ಭೇಟಿ ನೀಡಿದ್ದು, ಗಾಯಾಳುಗಳನ್ನು ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಯವರ ಕಾರ್ಯಾಲಯಕ್ಕೆ ಮಾಹಿತಿ ನೀಡಿದ್ದಾರೆ. ಸಹೋದರನ ಅಪಘಾತದ ಬೆನ್ನಲ್ಲೇ ಪ್ರಧಾನಿ ಮೋದಿ ಅವರ ತಾಯಿ ಹೀರಾಬೆನ್ ಆಸ್ಪತ್ರೆಗೆ ದಾಖಲಾಗಿರುವುದು ಆತಂಕವನ್ನು ಸೃಷ್ಟಿ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+