• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Vande Bharat Express Train: ಡಿ.11 ರಂದು 6ನೇ ವಂದೇ ಭಾರತ್ ರೈಲು ಮೋದಿಯಿಂದ ಉದ್ಘಾಟನೆ

|
Google Oneindia Kannada News

ನವದೆಹಲಿ ಡಿಸೆಂಬರ್ 5: ಡಿಸೆಂಬರ್ 11 ರಂದು 6ನೇ ವಂದೇ ಭಾರತ್ ರೈಲನ್ನು ಪ್ರಧಾನಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಛತ್ತೀಸ್‌ಗಢ ಬಿಲಾಸ್‌ಪುರದಿಂದ ನಾಗ್ಪುರ (ಮಹಾರಾಷ್ಟ್ರ)ವನ್ನು ತಲುಪಲಿರುವ ದೇಶದ ಆರನೇ ಸೆಮಿ ಹೈಸ್ಪೀಡ್ ವಂದೇ ಭಾರತ್ ರೈಲನ್ನು ಡಿಸೆಂಬರ್ 11 ರಂದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. ಈ ಬಗ್ಗೆ ಭಾರತೀಯ ರೈಲ್ವೇ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಅಧಿಕಾರಿಯ ಪ್ರಕಾರ, ರೈಲು ವಾರದಲ್ಲಿ ಆರು ದಿನಗಳು ಚಲಿಸುತ್ತದೆ ಮತ್ತು ಸುಮಾರು ಐದೂವರೆ ಗಂಟೆಗಳಲ್ಲಿ ಪ್ರಯಾಣದ ಒಂದು ಮಾರ್ಗವನ್ನು ಪೂರ್ಣಗೊಳಿಸುತ್ತದೆ.

"ಬಿಲಾಸ್ಪುರ್-ನಾಗ್ಪುರ ವಂದೇ ಭಾರತ್ ರೈಲನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಡಿಸೆಂಬರ್ 11) ನಾಗ್ಪುರದಲ್ಲಿ ಉದ್ಘಾಟಿಸಲಿದ್ದಾರೆ" ಎಂದು ಅಧಿಕಾರಿ ತಿಳಿಸಿದ್ದಾರೆ.

ಹೊಸ ವರ್ಷದಲ್ಲಿ 75 ವಂದೇ ಭಾರತ್ ರೈಲು ಸಂಚಾರ ಸಾಧ್ಯವೇ? ಹೊಸ ವರ್ಷದಲ್ಲಿ 75 ವಂದೇ ಭಾರತ್ ರೈಲು ಸಂಚಾರ ಸಾಧ್ಯವೇ?

ಈ ರೈಲು ಬೆಳಗ್ಗೆ 6.45ಕ್ಕೆ ಬಿಲಾಸ್‌ಪುರದಿಂದ ಹೊರಟು ಮಧ್ಯಾಹ್ನ 12.15ಕ್ಕೆ ನಾಗ್ಪುರ ತಲುಪಲಿದೆ ಎಂದು ರೈಲ್ವೆ ಅಧಿಕಾರಿ ತಿಳಿಸಿದ್ದಾರೆ. ಅದೇ ರೀತಿ ನಾಗ್ಪುರದಿಂದ ಮಧ್ಯಾಹ್ನ 2 ಗಂಟೆಗೆ ಹೊರಟು ರಾತ್ರಿ 7.35ಕ್ಕೆ ಬಿಲಾಸ್ಪುರ ತಲುಪಲಿದೆ. ಪ್ರಸ್ತುತ ಸೂಪರ್‌ಫಾಸ್ಟ್ ರೈಲುಗಳು ನಾಗಪುರವನ್ನು ತಲುಪಲು ಸುಮಾರು ಏಳು ಗಂಟೆಗಳನ್ನು ತೆಗೆದುಕೊಳ್ಳುತ್ತದೆ. ಆದರೆ ವಂದೇ ಭಾರತ್ ರೈಲು ಸುಮಾರು ಐದೂವರೆ ಗಂಟೆಗಳಲ್ಲಿ ತಲುಪಲಿದೆ.

ಜೊತೆಗೆ 2023 ರಲ್ಲಿ ಸಿಕಂದರಾಬಾದ್ ಮತ್ತು ವಿಜಯವಾಡ ನಡುವೆ ಮತ್ತೊಂದು ವಂದೇ ಭಾರತ್ ರೈಲು ಪ್ರಾರಂಭಿಸುವ ಸಾಧ್ಯತೆಯಿದೆ ಎಂದು ಅಧಿಕಾರಿ ಹೇಳಿದರು.

ವಂದೇ ಭಾರತ್ ರೈಲು ಈ ವರ್ಷದ ಅಕ್ಟೋಬರ್‌ನಲ್ಲಿ ಮುಂಬೈ-ಅಹಮದಾಬಾದ್ ಮಾರ್ಗದಲ್ಲಿ ಮೊದಲ ಬಾರಿಗೆ ಉದ್ಘಾಟನೆಗೊಂಡಿತು. ಮುಂದಿನ ವರ್ಷ ಆಗಸ್ಟ್ ವೇಳೆಗೆ 75 ವಂದೇ ಭಾರತ್ ರೈಲುಗಳನ್ನು ಉದ್ಘಾಟಿಸುವ ಗುರಿಯನ್ನು ರೈಲ್ವೇ ಹೊಂದಿದೆ.

ಸೆಮಿ-ಹೈ-ಸ್ಪೀಡ್ ವಂದೇ ಭಾರತ್ ರೈಲಿನ ಎಲ್ಲಾ ಕೋಚ್‌ಗಳು ಸ್ವಯಂಚಾಲಿತ ಬಾಗಿಲುಗಳು, ಜಿಪಿಎಸ್-ಆಧಾರಿತ ಆಡಿಯೊ-ವಿಶುವಲ್ ಪ್ಯಾಸೆಂಜರ್ ಮಾಹಿತಿ ವ್ಯವಸ್ಥೆ, ಮನರಂಜನಾ ಉದ್ದೇಶಗಳಿಗಾಗಿ ಆನ್‌ಬೋರ್ಡ್ ಹಾಟ್‌ಸ್ಪಾಟ್ ವೈ-ಫೈ ಮತ್ತು ಆರಾಮದಾಯಕ ಆಸನಗಳನ್ನು ಹೊಂದಿವೆ. ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ಫೆಬ್ರವರಿ 15, 2019 ರಂದು ನವದೆಹಲಿ-ಕಾನ್ಪುರ-ಅಲಹಾಬಾದ್-ವಾರಣಾಸಿ ಮಾರ್ಗದಲ್ಲಿ ಚಾಲನೆ ನೀಡಲಾಯಿತು.

English summary
Prime Minister Narendra Modi will inaugurate the country's sixth semi-high-speed Vande Bharat train on the Chhattisgarh Bilaspur to Nagpur (Maharashtra) route on December 11.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X