ರಾಮ ಮಂದಿರ ಉದ್ಘಾಟನೆಗೂ ಮೊದಲು ಬೆಂಗಳೂರಿಗೆ ಭೇಟಿ ನೀಡಲಿರುವ ಪ್ರಧಾನಿ ಮೋದಿ
ಬೆಂಗಳೂರು ಜನವರಿ 17: ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೂ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಖೇಲೋ ಇಂಡಿಯಾ ಮತ್ತು ಏರೋಸ್ಪೇಸ್ ವಲಯಕ್ಕೆ ಸಂಬಂಧಿಸಿದ ಇನ್ನೂ ಎರಡು ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 19 ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ. ಹೀಗಾಗಿ ಜನವರಿ 19 ರಂದು ನಡೆಯಬೇಕಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿ ಸಮಿತಿ ಸಭೆಯನ್ನು ಪ್ರಧಾನಿ ಭೇಟಿಯಿಂದಾಗಿ ಮುಂದೂಡಲಾಗಿದೆ.

ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರದ ಮೆಗಾ ಉದ್ಘಾಟನಾ ಸಮಾರಂಭಕ್ಕೆ ಕೆಲವೇ ದಿನಗಳು ಬಾಕಿ ಇವೆ. ಅದಕ್ಕೂ ಮೊದಲು ಪ್ರಧಾನಿ ನಗರಕ್ಕೆ ಭೇಟಿ ನೀಡಲಿದ್ದಾರೆ. ಮೋದಿಯವರ ಭೇಟಿಯ ಸಮಯದಲ್ಲಿ ಅವರು ಖೇಲೋ ಇಂಡಿಯಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇದಲ್ಲದೆ ಅವರು ಏರೋಸ್ಪೇಸ್ ಎಂಜಿನಿಯರಿಂಗ್ ಸೌಲಭ್ಯ ಮತ್ತು ಭಾರತ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ.
ಪ್ರಧಾನಿ ಮೋದಿ ರೋಡ್ ಶೋ ನಡೆಸುವ ಸಾಧ್ಯತೆ
ವರದಿಗಳ ಪ್ರಕಾರ ಪ್ರಧಾನಿ ಮೋದಿ ಅವರ ಭೇಟಿಯ ಸಮಯದಲ್ಲಿ ನಗರದಲ್ಲಿ ಸಂಕ್ಷಿಪ್ತ ರೋಡ್‌ಶೋ ನಡೆಸಬಹುದು ಎನ್ನಲಾಗುತ್ತಿದೆ. ಆದರೆ ಬಿಜೆಪಿ ನಾಯಕರು ಈ ಬಗ್ಗೆ ವಿವರಗಳನ್ನು ಇನ್ನೂ ಬಹಿರಂಗಪಡಿಸಿಲ್ಲ.
ಪ್ರಧಾನಿ ಮೋದಿ ಬೆಂಗಳೂರಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಜನವರಿ 19ರಂದು ನಡೆಯಬೇಕಿದ್ದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಯನ್ನು ರದ್ದುಗೊಳಿಸಲಾಗಿದೆ. ಪ್ರಧಾನಿ ಭೇಟಿಯ ವೇಳೆ ಬಿಜೆಪಿಯ ಕೆಲವು ಹಿರಿಯ ನಾಯಕರು ಅವರೊಂದಿಗೆ ಸಭೆ ನಡೆಸುವ ಸಾಧ್ಯತೆ ಇದೆ.
ಈ ವರ್ಷದ ಮೇ ವೇಳೆಗೆ ಲೋಕಸಭೆಗೆ ಸಿದ್ಧತೆಗಳನ್ನು ಪ್ರಾರಂಭಿಸಲು ಈ ತಿಂಗಳ ಅಂತ್ಯದೊಳಗೆ ರಾಜ್ಯಕ್ಕೆ ಭೇಟಿ ನೀಡುವುದಾಗಿ ಗೃಹ ಸಚಿವ ಅಮಿತ್ ಶಾ ರಾಜ್ಯ ನಾಯಕರಿಗೆ ಭರವಸೆ ನೀಡಿದ್ದಾರೆ.
ರಾಜ್ಯ ಬಿಜೆಪಿ ನಾಯಕರ ಸಭೆ
ಪ್ರಧಾನಿ ಮೋದಿ ಅವರ ಭೇಟಿಗೆ ಸಿದ್ಧತೆಗಾಗಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರು ಸೋಮವಾರ ಪಕ್ಷದ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಸಭೆ ನಡೆಸಿದ್ದು, ರೋಡ್‌ಶೋ ಕುರಿತು ಪ್ರಧಾನಿ ಕಚೇರಿಯಿಂದ ಹೆಚ್ಚಿನ ವಿವರಗಳಿಗಾಗಿ ಕಾಯುತ್ತಿದ್ದಾರೆ.
ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ಕೊನೆಯ ಬಾರಿಗೆ ಆಗಸ್ಟ್‌ನಲ್ಲಿ ಬೆಂಗಳೂರಿಗೆ ಭೇಟಿ ನೀಡಿದ್ದರು. ರಾಜ್ಯ ನಾಯಕರು ರೋಡ್ ಶೋ ನಡೆಸಲು ಸಿದ್ಧತೆ ನಡೆಸಿದ್ದರೂ ಕೊನೆ ಗಳಿಗೆಯಲ್ಲಿ ರದ್ದಾಗಿ ರಾಜ್ಯ ನಾಯಕರಿಗೆ ಮುಜುಗರ ಉಂಟು ಮಾಡಿತ್ತು. ಈ ಬಾರಿ ರೋಡ್ ಶೋ ನಡೆಯುತ್ತಾ ಇಲ್ವಾ ಅನ್ನೋದು ಇನ್ನೂ ಖಚಿತವಾಗಬೇಕಿದೆ.
-
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು











Click it and Unblock the Notifications