• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪ್ರಧಾನಿ ಮೋದಿ ಬಾಂಗ್ಲಾದೇಶ ಭೇಟಿ: ಕೋವಿಡ್ 19 ಬಳಿಕ ಮೊದಲ ವಿದೇಶ ಪ್ರಯಾಣ

|

ನವದೆಹಲಿ, ಮಾರ್ಚ್ 26: ಕೋವಿಡ್ 19 ಬಳಿಕ ಪ್ರಧಾನಿ ನರೇಂದ್ರ ಮೋದಿ ಮೊದಲ ವಿದೇಶ ಪ್ರಯಾಣ ಮಾಡುತ್ತಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿ ಎರಡು ದಿನಗಳ ಬಾಂಗ್ಲಾದೇಶ ಪ್ರವಾಸವನ್ನು ಶುಕ್ರವಾರ ಆರಂಭಿಸಿದ್ದಾರೆ. ಇಂದು ಬೆಳಗ್ಗೆ ದೆಹಲಿಯಲ್ಲಿ ವಿಮಾನ ಪ್ರಯಾಣ ಆರಂಭದಲ್ಲಿ ಢಾಕಾಕ್ಕೆ ಪ್ರಯಾಣಿಸುತ್ತಿದ್ದು, ನನ್ನ ಭೇಟಿ ಭಾರತ-ಬಾಂಗ್ಲಾದೇಶ ನಡುವೆ ಸ್ನೇಹ-ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸಲಿದೆ ಎಂದು ತಿಳಿಸಿದ್ದಾರೆ.

Fact Check: ಇಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮೋದಿ ಭಾಷಣ?

ಇಂದು ಅಲ್ಲಿ ಪ್ರಧಾನಿ ಮೋದಿ ಬಾಂಗ್ಲಾದೇಶದ ರಾಷ್ಟ್ರೀಯ ಹುತಾತ್ಮ ಸ್ಮಾರಕ ಬಳಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಬಾಂಗ್ಲಾದೇಶದ ವಿದೇಶಾಂಗ ಸಚಿವ ಎಕೆ ಅಬ್ದುಲ್ ಮೊಮೆನ್ ಅವರನ್ನು ಅಪರಾಹ್ನ ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.

ಕಳೆದ ವರ್ಷ ಕೋವಿಡ್-19 ಸೋಂಕು ಭಾರತಕ್ಕೆ ಕಾಲಿಟ್ಟು ವ್ಯಾಪಕವಾಗಿ ಹಬ್ಬಿದ ನಂತರ ಪ್ರಧಾನಿಯವರ ಮೊದಲ ವಿದೇಶ ಪ್ರಯಾಣ ಇದಾಗಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ಬಾಂಗ್ಲಾದೇಶ ತಲುಪಲಿದ್ದಾರೆ.

ನಂತರ ಪ್ರಧಾನ ಮಂತ್ರಿ ರಾಷ್ಟ್ರೀಯ ದಿನದ ಕಾರ್ಯಕ್ರಮದಲ್ಲಿ ಅಪರಾಹ್ನ ಭಾಗವಹಿಸಲಿದ್ದಾರೆ. ನಂತರ ಪ್ರಧಾನಿ ಇಂದು ಸಾಯಂಕಾಲ ಬಾಪು ಬಂಗಬಂದು ಡಿಜಿಟಲ್ ವಿಡಿಯೊ ಪ್ರದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಾರ್ಚ್ 17 ರಿಂದ 27ರವರೆಗೆ ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯಲಿವೆ. 1971ರ ವಿಮೋಚನಾ ಯುದ್ಧದ ಬಳಿಕ ಪಾಕಿಸ್ತಾನದಿಂದ ಬಾಂಗ್ಲಾದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂಭ್ರಮದ ಜತೆಗೆ ರಾಷ್ಟ್ರಪಿತ ಶೇಖ್ ಮುಜಿಬುರ್ ರೆಹಮಾನ್ ಅವರ ಜನ್ಮ ಶತಮಾನೋತ್ಸವವೂ ನಡೆಯಲಿದೆ.

English summary
Prime Minister Narendra Modi embarks on a two-day visit to Bangladesh, his first visit to a foreign country since the COVID19 outbreak.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X