'ಸಾವಿರಾರು ಕುಟುಂಬಗಳ ಸಂತೋಷವೇ ನನ್ನ ದೊಡ್ಡ ಸಂಪತ್ತು' ಹೀಗೆನ್ನುತ್ತಾ ಭಾವುಕರಾದ ಪ್ರಧಾನಿ ಮೋದಿ
ಸೊಲ್ಲಾಪುರ ಜನವರಿ 19: ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಅಡಿಯಲ್ಲಿ ನಿರ್ಮಿಸಲಾದ ಮನೆಗಳನ್ನು ಫಲಾನುಭವಿಗಳಿಗೆ ಶುಕ್ರವಾರ ಹಸ್ತಾಂತರಿಸಿದ ನಂತರ, ಸೋಲಾಪುರದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡುವಾಗ ಪ್ರಧಾನಿ ನರೇಂದ್ರ ಮೋದಿ ಭಾವುಕರಾದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಪ್ರಧಾನಿ ಭಾರತದ ಅತಿ ದೊಡ್ಡ ಹೌಸಿಂಗ್ ಸೊಸೈಟಿಯನ್ನು ಉದ್ಘಾಟಿಸಿದರು. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಮಹಾರಾಷ್ಟ್ರದ ಸೋಲಾಪುರದಲ್ಲಿ ಆರ್ಥಿಕವಾಗಿ ದುರ್ಬಲ ವರ್ಗದ ಸುಮಾರು 15,024 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಈ ಫಲಾನುಭವಿಗಳಲ್ಲಿ ಕೈಮಗ್ಗ ಕಾರ್ಮಿಕರು, ಮಾರಾಟಗಾರರು, ಪವರ್ ಲೂಮ್ ಕಾರ್ಮಿಕರು, ಚಿಂದಿ ಆಯುವವರು, ಬೀಡಿ ಕಾರ್ಮಿಕರು, ಚಾಲಕರು ಸೇರಿದಂತೆ ಇತರರು ಸೇರಿದ್ದಾರೆ.

ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಾವಿರಾರು ಕುಟುಂಬಗಳ ಸಂತೋಷವೇ ನನ್ನ ದೊಡ್ಡ ಸಂಪತ್ತು ಎಂದು ಭಾವುಕರಾದರು. 'ನಾನು ಈ ಸ್ಥಳಕ್ಕೆ ಭೇಟಿ ನೀಡಿದ್ದೇನೆ. ನನ್ನ ಬಾಲ್ಯದಲ್ಲಿ ನನಗೂ ಇಂತಹ ಮನೆಯಲ್ಲಿ ವಾಸಿಸುವ ಅವಕಾಶ ಸಿಕ್ಕಿದ್ದರೆ ಎಂದು ನಾನು ಅಂದುಕೊಳ್ಳುತ್ತಿದ್ದೆ' ಎನ್ನುವಾಗ ಮೋದಿ ಅವರ ಕಣ್ಣು ತುಂಬಿ ಬಂತು. ಜೊತೆಗೆ ಫಲಾನುಭವಿಗಳನ್ನುದ್ದೇಶಿಸಿ ಭಾವುಕರಾಗಿ ಈ ರೀತಿಯ ಅಭಿವೃದ್ಧಿ ಯೋಜನೆಗಳನ್ನು ನೋಡಿದಾಗ ತುಂಬಾ ಖುಷಿಯಾಗುತ್ತದೆ ಎಂದರು.
ಸೊಲ್ಲಾಪುರದ ಸಾವಿರಾರು ಬಡವರು, ಕೂಲಿಕಾರ್ಮಿಕರಿಗಾಗಿ ನಾವು ತೆಗೆದುಕೊಂಡಿದ್ದ ವಾಗ್ದಾನ ಇಂದು ನೆರವೇರುತ್ತಿರುವುದು ಸಂತಸ ತಂದಿದೆ. ಈ ಯೋಜನೆಗೆ ಶಂಕುಸ್ಥಾಪನೆ ಮಾಡಲು ನಾನು ಇಲ್ಲಿಗೆ ಬಂದ ದಿನವೇ ನಾನು ಶೀಘ್ರದಲ್ಲೇ ಬರುತ್ತೇನೆ ಎಂದು ಭರವಸೆ ನೀಡಿದ್ದೆ. ಇಂದು ನಿಮ್ಮ ಮನೆಗಳ ಕೀಲಿಗಳನ್ನು ನೀಡಿದ್ದೇನೆ. ''ಇಂದು ಮೋದಿ ಈ ಗ್ಯಾರಂಟಿಯನ್ನು ಈಡೇರಿಸಿದ್ದಾರೆ. ನೆನಪಿಡಿ, ಮೋದಿ ಗ್ಯಾರಂಟಿ ಎಂದರೆ 'ಗ್ಯಾರಂಟಿಯನ್ನು ಪೂರ್ಣಗೊಳಿಸುವ ಗ್ಯಾರಂಟಿ'!" ಎಂದು ಅವರು ಹೇಳಿದರು.
ವೀಡಿಯೊವನ್ನು ಇಲ್ಲಿ ವೀಕ್ಷಿಸಿ-
#WATCH | PM Modi gets emotional as he talks about houses completed under PMAY-Urban scheme in Maharashtra, to be handed over to beneficiaries like handloom workers, vendors, power loom workers, rag pickers, Bidi workers, drivers, among others.
— ANI (@ANI) January 19, 2024
PM is addressing an event in… pic.twitter.com/KlBnL50ms5
ಇದೇ ವೇಳೆ ಪಿಎಂ ಮೋದಿ ಅವರು ಜನವರಿ 22 ರಂದು ತಮ್ಮ ಮನೆಗಳನ್ನು ರಾಮ ಜ್ಯೋತಿಯಿಂದ ಬೆಳಗಿಸುವಂತೆ ಜನರನ್ನು ಒತ್ತಾಯಿಸಿದರು. "ಜನವರಿ 22 ರಂದು ಜನರು ಬೆಳಗಿಸುವ ರಾಮ ಜ್ಯೋತಿ ಅವರ ಜೀವನದಿಂದ ಬಡತನವನ್ನು ತೊಡೆದುಹಾಕಲು ಸ್ಫೂರ್ತಿಯಾಗಲಿದೆ" ಎಂದು ಅವರು ಹೇಳಿದರು.
ತಮ್ಮ ಭಾಷಣದಲ್ಲಿ ಪ್ರಧಾನಿ ಮೋದಿ ಬಡವರ ಕಲ್ಯಾಣ ಮತ್ತು ಸ್ವಾವಲಂಬನೆಯ ಪ್ರಾಮುಖ್ಯತೆಗೆ ಸರ್ಕಾರ ಬದ್ಧತೆಯನ್ನು ಪುನರುಚ್ಚರಿಸಿದರು. ಇದೇ ವೇಳೆ ಅವರು ಕಾರ್ಮಿಕರ ಘನತೆಗೆ ಒತ್ತು ನೀಡಿದರು. ಬಡವರು ಎದುರಿಸುತ್ತಿರುವ ತೊಂದರೆಗಳನ್ನು ನಿವಾರಿಸಲು ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸರ್ಕಾರದ ಪ್ರಯತ್ನಗಳು ನಡೆಯುತ್ತಲೇ ಇರುತ್ತವೆ ಎಂದರು.
''2014ರಲ್ಲಿ ಸರಕಾರ ರಚನೆಯಾದ ತಕ್ಷಣ ನನ್ನ ಸರಕಾರ ಬಡವರಿಗಾಗಿಯೇ ಮೀಸಲಾದ ಸರಕಾರ ಎಂದು ಹೇಳಿದ್ದೆ. ಆದ್ದರಿಂದ, ನಾವು ಅಂತಹ ಯೋಜನೆಗಳನ್ನು ಒಂದರ ನಂತರ ಒಂದರಂತೆ ಜಾರಿಗೆ ತಂದಿದ್ದೇವೆ, ಇದು ಬಡವರ ಕಷ್ಟಗಳನ್ನು ಕಡಿಮೆ ಮಾಡುತ್ತದೆ ಮತ್ತು ಅವರ ಜೀವನವನ್ನು ಸುಲಭಗೊಳಿಸುತ್ತದೆ, "ಎಂದು ಪ್ರಧಾನಿ ಮೋದಿ ಹೇಳಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications