Muda scam row: ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷವನ್ನು ಜಾಡಿಸಿದ ಮೋದಿ ಏನಂದ್ರು
ಕರ್ನಾಟಕದ ಮುಡಾ ಹಗರಣದ ವಿಷಯ ಇದೀಗ ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದೆ. ನಿರೀಕ್ಷೆಯಂತೆ ಬಿಜೆಪಿ ಇದನ್ನು ಚುನಾವಣಾ ಅಸ್ತ್ರವನ್ನಾಗಿ ಬಳಸಿಕೊಂಡಿದೆ. ದೇಶದಲ್ಲಿ ಈಗ ಸಾಲು ಸಾಲು ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದೀಗ ಮೋದಿ ಹರಿಯಾಣದ ಚುನಾವಣಾ ಕಣದಲ್ಲಿ ನಿಂತು ಕಾಂಗ್ರೆಸ್ ಪಕ್ಷವನ್ನು ಜಾಡಿಸಿದ್ದಾರೆ. ಇವರು ಈ ಜನ್ಮದಲ್ಲಿ ಉದ್ಧಾರ ಆಗಲ್ಲ, ಸುಧಾರಿಸಲ್ಲ. ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳುವುದಿಲ್ಲ. ಹೀಗಾಗಿ, ಇವರಿಗೆ ಇನ್ನೊಂದು ಅವಕಾಶ ನೀಡಬೇಡಿ ಎಂದು ಹೇಳಿದ್ದಾರೆ.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಡಾ (ಮೈಸೂರು ಅಭಿವೃದ್ಧಿ ಪ್ರಾಧಿಕಾರ)ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು ಸರಿಯಾಗಿಯೇ ಇದೆ ಎಂದು ಹೈಕೋರ್ಟ್ ಮಂಗಳವಾರ ತೀರ್ಪು ನೀಡಿದೆ. ಇದೇ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಹರಿಯಾಣ ವಿಧಾನಸಭಾ ಚುನಾವಣಾ ಪ್ರಚಾರದಲ್ಲಿ ಪ್ರಸ್ತಾಪಿಸಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಪಕ್ಷವನ್ನು ತೀಕ್ಷವಾಗಿ ಟೀಕೆ ಮಾಡಿದ್ದಾರೆ.

ಸಿದ್ದರಾಮಯ್ಯ ಅವರಿಗೆ ಮುಡಾ ಹಗರಣದ ವಿಷಯದಲ್ಲಿ ಪ್ರಾರಂಭಿಕ ಹಿನ್ನಡೆಯಾಗಿರುವುದನ್ನು ದೇಶದ ವಿವಿಧ ವಿಧಾನಸಭೆ ಚುನಾವಣೆಗಳಲ್ಲಿ ಬಿಜೆಪಿ ಅಸ್ತ್ರವಾಗಿ ಬಳಸಿಕೊಳ್ಳಲಾಗಿದೆ ಎಂದು ಅಂದಾಜಿಸಲಾಗಿತ್ತು. ಇದೇ ಕಾರಣಕ್ಕಾಗಿ ಕಾಂಗ್ರೆಸ್ ಹೈಕಮಾಂಡ್ ಸಹ ಈ ನಿಟ್ಟಿನಲ್ಲಿ ಎಚ್ಚರಿಕೆಯ ಹೆಜ್ಜೆಯನ್ನು ಇರಿಸಿತ್ತು. ಇದೀಗ ಹರಿಯಾಣ ಚುನಾವಣೆ ಸಮೀಪಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಎರಡನೇ ಹಂತದ ಚುನಾವಣೆ ನಡೆಯುತ್ತಿದೆ. ಜಾರ್ಖಂಡ್ ಹಾಗೂ ಮಹಾರಾಷ್ಟ್ರದಲ್ಲಿ ಚುನಾವಣೆ ಘೋಷಣೆಯಾಗಬೇಕಿದೆ. ಈ ನಾಲ್ಕು ರಾಜ್ಯಗಳ ಚುನಾವಣೆಯ ನಂತರ ದೆಹಲಿಯಲ್ಲೂ ಚುನಾವಣೆ ನಡೆಯಲಿದೆ. ಮಂಗಳವಾರ ತೀರ್ಪು ಪ್ರಕಟವಾಗಿದ್ದು, ಬುಧವಾರದಿಂದಲೇ ಕರ್ನಾಟಕ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ತೀವ್ರ ವಾಗ್ದಾಳಿ ನಡೆಸಿದೆ.
ಕಾಂಗ್ರೆಸ್ ಈ ಜನ್ಮದಲ್ಲಿ ಸುಧಾರಿಸುವುದಿಲ್ಲ ಬಿಡಿ
ಕಾಂಗ್ರೆಸ್ ಪಕ್ಷವು ಈ ಜನ್ಮದಲ್ಲಿ ಸುಧಾರಿಸಲ್ಲ ಬಿಡಿ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರ ಜಾಯಮಾನವೇ ಭ್ರಷ್ಟಾಚಾರ ಮಾಡುವುದು. ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮೇಲೆ ಜಮೀನು ಕಬಳಿಸಿದ ಆರೋಪ ಇದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಕರ್ನಾಟಕದ ಮುಖ್ಯಮಂತ್ರಿ ಹೈಕೋರ್ಟ್ ಮೊರೆ ಹೋಗಿದ್ದರು. ಹೈಕೋರ್ಟ್ ಸಹ ಚಾಟಿ ಬೀಸಿದೆ. ಈ ಸಂಬಂಧ ತನಿಖೆ ನಡೆಯಬೇಕು ಎಂದು ಹೇಳಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಕೇವಲ ಎರಡು ವರ್ಷ ಮಾತ್ರ ಆಗಿದೆ. ಈ ಎರಡು ವರ್ಷ ಹೇಗೋ ನಡೆದೋಯಿತು. ಆದರೆ, ಕಾಂಗ್ರೆಸ್ ನವರು ಚಾಳಿ ಬಿಡುವುದಿಲ್ಲ.
ಹರಿಯಾಣದಲ್ಲೂ ಇದೇ ಪಾಪವನ್ನು ಮಾಡುವುದಕ್ಕೆ ನೀವು ಬಿಡಬೇಡಿ. ಹರಿಯಾಣದಲ್ಲೂ ಪಾಪ ಮಾಡಲು ಅವಕಾಶ ನೀಡುತ್ತೀರ ಎಂದು ಜನರನ್ನು ಉದ್ದೇಶಿಸಿ ಕೇಳಿದ್ದಾರೆ. ಇದಕ್ಕೆ ಸಭೆಯಲ್ಲಿ ಇದ್ದ ಜನ ಇಲ್ಲ ಎಂದು ಉತ್ತರಿಸಿದ್ದಾರೆ. ಈ ಕಾಂಗ್ರೆಸ್‌ನವರು ಎಂದಿಗೂ ಸುಧಾರಿಸುವುದಿಲ್ಲ ನಿಮ್ಮ ರಾಜ್ಯದ ಒಳಗೆ ನುಗ್ಗಲು ಬಿಡಬೇಡಿ. ಹರಿಯಾಣದಲ್ಲಿ ನುಗ್ಗುವುದಕ್ಕೆ ಬಿಡಬೇಡಿ. ಹತ್ತು ವರ್ಷ ಅಧಿಕಾರದಿಂದ ದೂರ ಇದ್ದಾರೆ (ಹರಿಯಾಣದಲ್ಲಿ) ಬಹುಶಃ ಸುಧಾರಿಸಿರಬಹುದು ಎಂದು ನೀವು ತಿಳಿದುಕೊಳ್ಳಬೇಡಿ. ಇವರು ಎಂದಿಗೂ ಸುಧಾರಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವ್ಯಂಗ್ಯವಾಡಿದ್ದಾರೆ.
ಕಾಂಗ್ರೆಸ್‌ನವರು ಇನ್ನೂ ಸುಧಾರಿಸಿಲ್ಲ. ಸುಧಾರಿಸುವುದು ಸಹ ಇಲ್ಲ. ಈ ತಪ್ಪನ್ನು ನೀವು ಮಾಡಬೇಡಿ ಈ ಕಾಂಗ್ರೆಸ್ ಈ ಜನ್ಮದಲ್ಲಿ ಸುಧಾರಿಸುವುದಿಲ್ಲ. ಕರ್ನಾಟಕದಲ್ಲಿ ಜಮೀನು ಮಾತ್ರವಲ್ಲ ದಲಿತ ಸಹೋದರ, ಕಾಂಗ್ರೆಸ್‌ನ ಅಧ್ಯಕ್ಷಕರು (ಮಲ್ಲಿಕಾರ್ಜುನ ಖರ್ಗೆ) ಅದೇ ಸಮುದಾಯಕ್ಕೆ ಸೇರಿದವರು. ಆದರೆ, ಕರ್ನಾಟಕದಲ್ಲಿ ದಲಿತರ ಫಂಡ್ ಸಹ ಲೂಟಿ ಮಾಡಲಾಗಿದೆ. ಅಲ್ಲಿನ ಸರ್ಕಾರ, ಖುದ್ದು ಸಿ.ಎಂ ಸಿದ್ದರಾಮಯ್ಯ ಅವರೇ ವಿಧಾನಸಭೆಯಲ್ಲಿ ಈ ವಿಷಯವನ್ನು ಪ್ರಾಸ್ತಾಪಿಸಿದ್ದಾರೆ ಎಂದು ಮೋದಿ ಹೇಳಿದ್ದಾರೆ.
ನಂಬಿಕೆ ದ್ರೋಹದ ಪಕ್ಷ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತ ನಡೆಸುತ್ತಿದೆ. ಅವರು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದು ಎರಡೇ ವರ್ಷದೊಳಗೆ ಕರ್ನಾಟಕ ರಾಜ್ಯವನ್ನು ಕುಲಗೆಡಿಸಿದ್ದಾರೆ. ಕರ್ನಾಟಕ ಮುಖ್ಯಮಂತ್ರಿಯ ವಿರುದ್ಧ ಭೂ ಹಗರಣದ ಆರೋಪವಿದೆ. ಕರ್ನಾಟಕ ಹೈಕೋರ್ಟ್ ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆ ನಡೆಸಲು ಆದೇಶ ನೀಡಿದೆ. ಇನ್ನು ದಲಿತರಿಗೆ ಮೀಸಲಾಗಿದ್ದ ಅನುದಾನವನ್ನೂ ಕಾಂಗ್ರೆಸ್‌ನವರು ದುರ್ಬಳಕೆ ಮಾಡಿಕೊಂಡಿದ್ದಾರೆ. ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷದಷ್ಟು ನಂಬಿಕೆದ್ರೋಹದ ಪಕ್ಷ ಇನ್ನೊಂದಿಲ್ಲ ಎಂದು ಮೋದಿ ಕಿಡಿಕಾರಿದ್ದಾರೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications