ಐತಿಹಾಸಿಕ ಅಟಲ್ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಶಿಮ್ಲಾ, ಅಕ್ಟೋಬರ್ 03: ವಿಶ್ವದ ಅತೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಉದ್ಘಾಟಿಸಿದರು. ಮನಾಲಿಯ ದಕ್ಷಿಣ ತುದಿಯಲ್ಲಿ ಅಟಲ್ ಸುರಂಗದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದ ಪ್ರಧಾನಿ 9.2 ಕಿ.ಮೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಲೋಕಾರ್ಪಣೆಗೊಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ , ಕೇಂದ್ರ ರಾಜ್ಯ ಹಣಕಾಸು ಸಚಿವ ಅನುರಾಗ್ ಠಾಕೂರ್ ಸೇರಿದಂತೆ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಂಕುದ್ ನರ್ವಾನೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

''ಇಂದು ಐತಿಹಾಸಿಕ ದಿನವಾಗಿದ್ದು ಕೇವಲ ಅಟಲ್ ಜೀಯವರ ಕನಸು ಈಡೇರಿಲ್ಲ, ಇಡೀ ಹಿಮಾಚಲ ಪ್ರದೇಶದ ಜನರ ಬಹುದಿನದ ಕನಸು ನನಸಾಗಿದೆ'' ಎಂದು ಪ್ರಧಾನಿ ಮೋದಿ ಉದ್ಘಾಟನೆಯ ಬಳಿಕ ಹೇಳಿದ್ದಾರೆ.

ವಿಶ್ವದಲ್ಲಿಯೇ ಅತಿ ಉದ್ದ ಹೆದ್ದಾರಿ ಸುರಂಗ ಮಾರ್ಗ

ವಿಶ್ವದಲ್ಲಿಯೇ ಅತಿ ಉದ್ದ ಹೆದ್ದಾರಿ ಸುರಂಗ ಮಾರ್ಗ

ಹಿಮಾಚಲ ಪ್ರದೇಶದ ರೋಹ್ಟಾಂಗ್‌ನಲ್ಲಿರುವ 9.2 ಕಿ.ಮೀ ಉದ್ದದ ಅಟಲ್ ಸುರಂಗ ಮಾರ್ಗವೂ ವಿಶ್ವದಲ್ಲಿಯೇ ಅತೀ ಉದ್ದದ ಹೆದ್ದಾರಿ ಮಾರ್ಗವಾಗಿದೆ. ಮನಾಲಿ ಮತ್ತು ಲೇಹ್ ನಡುವಿನ ರಸ್ತೆ ದೂರವನ್ನು 46 ಕಿಲೋಮೀಟರ್ ಕಡಿಮೆ ಮಾಡುತ್ತದೆ. ಜೊತೆಗೆ ನಾಲ್ಕು ಗಂಟೆಗಳ ಪ್ರಯಾಣದ ಅವಧಿ ಸಹ ಉಳಿತಾಯವಾಗಲಿದೆ.

10 ವರ್ಷಗಳಿಂದ ನಿರ್ಮಾಣ ಕಾರ್ಯ

10 ವರ್ಷಗಳಿಂದ ನಿರ್ಮಾಣ ಕಾರ್ಯ

ಅಟಲ್ ಐತಿಹಾಸಿಕ ಸುರಂಗ ಮಾರ್ಗವನ್ನು ಪೂರ್ಣಗೊಳಿಸಲು ಅಂದಾಜು ಅವಧಿ ಆರು ವರ್ಷಗಳಿತ್ತು. ಆದರೆ ಸುರಂಗ ಮಾರ್ಗ ನಿರ್ಮಿಸಲು ಅನೇಕ ಸವಾಲುಗಳು ಎದುರಾದ ಪರಿಣಾಮ ಇದನ್ನು ಪೂರ್ಣಗಳಿಸಲು 10 ವರ್ಷಗಳು ಬೇಕಾಯಿತು.

10,000 ಅಡಿ ಎತ್ತರದಲ್ಲಿದೆ ಸುರಂಗ ಮಾರ್ಗ

10,000 ಅಡಿ ಎತ್ತರದಲ್ಲಿದೆ ಸುರಂಗ ಮಾರ್ಗ

ಹೌದು ಈ ಸುರಂಗವು ಹಿಮಾಲಯದ ಪಿರ್ ಪಂಜಾಲ್ ಶ್ರೇಣಿಯಲ್ಲಿ ಸರಾಸರಿ ಸಮುದ್ರ ಮಟ್ಟದಿಂದ (ಎಂಎಸ್ಎಲ್) 3,000 ಮೀಟರ್ (10,000 ಅಡಿ) ಎತ್ತರದಲ್ಲಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ಈ ಸುರಂಗವನ್ನು ನಿರ್ಮಿಸಲಾಗಿದೆ.

ಮನಾಲಿಯಲ್ಲಿ ಆರು ತಿಂಗಳು ಮಾತ್ರ ಸಂಚಾರ ಸಾಧ್ಯವಾಗಿತ್ತು

ಮನಾಲಿಯಲ್ಲಿ ಆರು ತಿಂಗಳು ಮಾತ್ರ ಸಂಚಾರ ಸಾಧ್ಯವಾಗಿತ್ತು

ಮನಾಲಿಯಲ್ಲಿ ಭಾರೀ ಹಿಮಪಾತವಾಗುವ ಕಾರಣ ಅಲ್ಲಿ ಆರು ತಿಂಗಳು ಮಾತ್ರ ಸಂಚಾರವಿರುತ್ತಿತ್ತು. ಆದರೆ ಈ ಸುರಂಗ ಮಾರ್ಗದಿಂದ ಮನಾಲಿಯಿಂದ ಲಹೌಲ್ ಸ್ಪಿತಿ ಕಣಿವೆಯನ್ನು ವರ್ಷವಿಡಿ ಸಂಪರ್ಕಿಸಲಿದೆ. ಪ್ರತಿ 60 ಮೀಟರ್‌ನಲ್ಲಿ ಸಿಸಿಟಿವಿ ಕ್ಯಾಮೆರಾಗಳಿದ್ದು, ಮತ್ತು ಸುರಂಗದ ಒಳಗೆ ಪ್ರತಿ 500 ಮೀಟರ್‌ನಲ್ಲಿ ತುರ್ತು ನಿರ್ಗಮನ ಸುರಂಗಗಳನ್ನು ನಿರ್ಮಾಣ ಮಾಡಲಾಗಿದೆ.

ರೋಹ್ಟಾಂಗ್ ಮಾರ್ಗವನ್ನು ಅಟಲ್ ಸುರಂಗ ಎಂದು ಮರುನಾಮಕರಣ

ರೋಹ್ಟಾಂಗ್ ಮಾರ್ಗವನ್ನು ಅಟಲ್ ಸುರಂಗ ಎಂದು ಮರುನಾಮಕರಣ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 95ನೇ ಜನ್ಮದಿನಾಚರಣೆ ನೆನಪಿಗಾಗಿ 2019 ಡಿಸೆಂಬರ್‌ನಲ್ಲಿ ಪ್ರಧಾನಿ ಮೋದಿ ಅವರು ರೋಹ್ಟಾಂಗ್ ಮಾರ್ಗವನ್ನು ಅಟಲ್ ಸುರಂಗ ಎಂದು ಮರುನಾಮಕರಣ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+