Covid-19 : ಮತ್ತೆ ಕೊರೊನಾ ಹೆಚ್ಚಳ ಹಿನ್ನೆಲೆ ಪ್ರಧಾನಿ ಮೋದಿ ಮಹತ್ವದ ಸಭೆ, ಬೆಂಗಳೂರಿನ ಕೋವಿಡ್ ಪರಿಸ್ಥಿತಿ ಹೇಗಿದೆ.
ದೇಶದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣದ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ ಅವರು ಉನ್ನತ ಮಟ್ಟದ ಸಭೆ ನಡೆಸಿದರು.
ನವದೆಹಲಿ, ಮಾರ್ಚ್22: ವಿಶ್ವದಾದ್ಯಂತ ಕಾಡಿದ್ದ ಕೊರೊನಾ ಹಾವಳಿ ದಿನದಿಂದ ದಿನಕ್ಕೆ ಕಡಿಮೆಯಾಗಿ ಜನರು ಚೇತರಿಸಿಕೊಳ್ಳುವಷ್ಟರಲ್ಲಿ, ಮತ್ತೆ ಕೊರೊನಾ ಹೆಚ್ಚಳ ಹಿನ್ನಲೆ ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದೆ.
ಕೋವಿಡ್ ಸಂಬಂಧಿತ ಪರಿಸ್ಥಿತಿ ಮತ್ತು ಸಾರ್ವಜನಿಕ ಆರೋಗ್ಯ ಸನ್ನದ್ಧತೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ. ಇನ್ನೂ ದೇಶದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಸದ್ಯದ ಕೊರೊನಾ ಪರಿಸ್ಥಿತಿ, ಅದಕ್ಕೆ ತೆಗೆದುಕೊಳ್ಳಬೇಕಾದ ಕ್ರಮಗಳು ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಿದ್ದಾರೆ.

ಭಾರತದಲ್ಲಿ ಬುಧವಾರ 1,134 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಅಂಕಿ ಅಂಶಗಳಿಂದ ತಿಳಿದುಬಂದಿದೆ. ಮಂಗಳವಾರ 699 ಪ್ರಕರಣಗಳಿಗೆ ಹೋಲಿಸಿದರೆ ಇಂದು ಮತ್ತಷ್ಟು ಪ್ರಕರಣಗಳು ಏರಿಕೆಯಾಗಿದೆ.
ಇದೇ ಸಮಯದಲ್ಲಿ, ಛತ್ತೀಸ್‌ಗಢ, ದೆಹಲಿ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ತಲಾ ಐದು ಕೋವಿಡ್ ಸಾವುಗಳು ವರದಿಯಾಗಿವೆ. ದೇಶದಲ್ಲಿ ಇದುವರೆಗೆ ಒಟ್ಟು 5,30,813 ಕೋವಿಡ್ ಸಾವುಗಳು ಸಂಭವಿಸಿವೆ. ಅಂಕಿಅಂಶಗಳ ಪ್ರಕಾರ, ಒಂದೇ ದಿನದಲ್ಲಿ 662 ರೋಗಿಗಳು ಚೇತರಿಸಿಕೊಂಡಿದ್ದು, ಒಟ್ಟು 4,41,60,279 ಕ್ಕೆ ತಲುಪಿದೆ. ಪರಿಣಾಮವಾಗಿ, ಚೇತರಿಕೆಯ ಪ್ರಮಾಣವು 98.79 ಪ್ರತಿಶತದಷ್ಟಿದೆ. ದೈನಂದಿನ ಪಾಸಿಟೀವ್ ದರವು ಶೇಕಡಾ 1.09 ಎಂದು ವರದಿಯಾಗಿದೆ.

ಇನ್ನೂ ಕರ್ನಾಟಕ, ಮಹಾರಾಷ್ಟ್ರ, ಗುಜರಾತ್, ತೆಲಂಗಾಣ, ತಮಿಳುನಾಡು ಮತ್ತು ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಚ್ಚರಿಕೆಯಿಂದ ಇರುವಂತೆ ಕೇಂದ್ರ ಸರ್ಕಾರ ಕೊರೊನಾ ಹೆಚ್ಚಾಗಿರುವ ರಾಜ್ಯಗಳಿಗೆ ಸೂಚನೆ ನೀಡಿದೆ.
ಬೆಂಗಳೂರಿನ ಕೋವಿಡ್ ಟಿಪಿಆರ್ (ಟೆಸ್ಟ್ ಪಾಸಿಟಿವ್ ರೇಶಿಯೋ) ಹೆಚ್ಚಳ
ಇನ್ನೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊವೀಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಬೇಸಿಗೆ ಶುರುವಾಗುತ್ತಿದ್ದಂತೆ ಜನರಲ್ಲೂ ಸಾಕಷ್ಟು ಆರೋಗ್ಯ ಸಮಸ್ಯೆಗಳು ಕಂಡು ಬರುತ್ತಿದೆ. ಅಲ್ಲದೆ ಫೆಬ್ರವರಿಯಿಂದ ಬೆಂಗಳೂರಿನ ಕೋವಿಡ್ ಟೆಸ್ಟ್ ಪಾಸಿಟಿವಿಟಿ ರೇಟ್ (ಟಿಪಿಆರ್) ಸ್ಥಿರವಾಗಿ ಹೆಚ್ಚುತ್ತಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಹಿರಂಗಪಡಿಸಿದೆ.

2023 ರ ಮೊದಲ ನಾಲ್ಕು ವಾರಗಳಲ್ಲಿ TPR ಶೇಕಡಾ 1 ಕ್ಕಿಂತ ಕಡಿಮೆಯಿತ್ತು, ಆದರೆ ಐದು ವಾರದ ವೇಳೆಗೆ ಅದು 1% ರಷ್ಟು ಹೆಚ್ಚಾಗಿದೆ. ಇನ್ನೂ ಎಂಟನೆಯ ವಾರದ ವೇಳೆಗೆ, ಇದು 4.33 ಪ್ರತಿಶತವನ್ನು ಹೆಚ್ಚಳವಾಗಿದ್ದು, 10 ನೇ ವಾರದಲ್ಲಿ ಅದು 9.58 ಶೇಕಡಾಕ್ಕೆ ತಲುಪಿದೆ.
ಈ ಆತಂಕಕಾರಿ ಅಂಕಿಅಂಶಗಳ ಹೊರತಾಗಿಯೂ, ಬೆಂಗಳೂರಿನಲ್ಲಿ ಸಂಪೂರ್ಣ ದೈನಂದಿನ ಪ್ರಕರಣಗಳ ಸಂಖ್ಯೆ ತುಲನಾತ್ಮಕವಾಗಿ ಕಡಿಮೆಯಾಗಿದೆ. ಮಾರ್ಚ್ 19 ರಲ್ಲಿ ಬೆಂಗಳೂರು ನಗರದಲ್ಲಿ ಒಟ್ಟು 394 ಸಕ್ರಿಯ ಪ್ರಕರಣಗಳಿವೆ.
ತಾಂತ್ರಿಕ ಸಲಹಾ ಸಮಿತಿ (ಟಿಎಸಿ) ಅಧ್ಯಕ್ಷ ಡಾ ಎಂ ಕೆ ಸುದರ್ಶನ್ ಅವರು ಆಸ್ಪತ್ರೆಗೆ ದಾಖಲಾದ ಪ್ರಕರಣಗಳ ಹೆಚ್ಚಳದಿಂದ ಕಳವಳ ವ್ಯಕ್ತಪಡಿಸಿದ್ದಾರೆ. 68 ಜನರು ಪ್ರಸ್ತುತ ಆಸ್ಪತ್ರೆಗೆ ದಾಖಲಾಗಿದ್ದರೆ, 50 ಜನರು ಸಾಮಾನ್ಯ ಹಾಸಿಗೆಯಲ್ಲಿದ್ದಾರೆ, 13 ಮಂದಿ ಐಸಿಯುನಲ್ಲಿ ಮತ್ತು ಐವರು ಎಚ್‌ಡಿಯುನಲ್ಲಿದ್ದಾರೆ. ಅವರಲ್ಲಿ ಯಾರೂ ವೆಂಟಿಲೇಟರ್‌ನಲ್ಲಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಬೆಳ್ಳಂದೂರ್ ಮತ್ತು ಎಚ್ಎಸ್ಆರ್ ಲೇಔಟ್ ಅತ್ಯಧಿಕ ಕೋವಿಡ್ -19 ಪ್ರಕರಣಗಳಿರುವ ಪ್ರದೇಶಗಳಾಗಿವೆ, ಕಳೆದ 10 ದಿನಗಳಲ್ಲಿ ಸರಾಸರಿ ದಿನಕ್ಕೆ ಮೂರು ಪ್ರಕರಣಗಳು ದಾಖಲಾಗಿವೆ. ಆದಾಗ್ಯೂ, 198 ರ ಬಿಬಿಎಂಪಿ ವಾರ್ಡ್ ಗಳಲ್ಲಿ, 174 ವಾರ್ಡ್'ಗಳು ದಿನಕ್ಕೆ ಐದು ಪ್ರಕರಣಗಳಿಗಿಂತ ಕಡಿಮೆ ದಾಖಲಾಗಿವೆ.
ಕೋವಿಡ್-19 ಗಿಂತ ಇನ್ಫ್ಲುಯೆನ್ಸ ಸೋಂಕುಗಳಿಗೆ ಹೆಚ್ಚಿನ ದಾಖಲಾತಿಗಳು ಆಗುತ್ತಿವೆ ಎಂದು ವೈದ್ಯರು ವರದಿ ನೀಡಿದ್ದಾರೆ, ಆದರೆ ಇನ್ಫ್ಲುಯೆನ್ಸ ರೋಗಿಗಳಲ್ಲಿ ಸಣ್ಣ ಪ್ರಮಾಣದಲ್ಲಿ ಮಾತ್ರ ಆಸ್ಪತ್ರೆಗೆ ದಾಖಲಾಗುತ್ತಾರೆ ಎಂದು ತಿಳಿಸಿದ್ದಾರೆ.
ವೈರಲ್ ರಿಸರ್ಚ್ ಮತ್ತು ಡಯಾಗ್ನೋಸ್ಟಿಕ್ ಲ್ಯಾಬೋರೇಟರಿಯು ಜನವರಿಯಿಂದ ಬೆಂಗಳೂರಿನಲ್ಲಿ 23 H3N2 ಪ್ರಕರಣಗಳಾಗಿವೆ ಎಂದು ವರದಿ ಮಾಡಿದೆ. ರಾಜ್ಯದಲ್ಲಿ ಇಲ್ಲಿಯವರೆಗೆ ಎರಡು H3N2 ಸಾವುಗಳು ವರದಿಯಾಗಿವೆ. H3N2 ನಿಂದ 87 ವರ್ಷದ ಹಾಸನದ ವ್ಯಕ್ತಿ ಮತ್ತು 80 ವರ್ಷದ ಬಳ್ಳಾರಿಯ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications