'ಒಂದು ರಾಷ್ಟ್ರ ಒಂದು ರಸಗೊಬ್ಬರ' ಯೋಜನೆಗೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ, ಅಕ್ಟೋಬರ್‌ 17: ಕೇಂದ್ರವು ಹೊಸ ಯೋಜನೆ ಒಂದು ರಾಷ್ಟ್ರ ಒಂದು ರಸಗೊಬ್ಬರ ಪ್ರಾರಂಭಿಸಿದ್ದು, ಪ್ರಧಾನ ಮಂತ್ರಿ ಭಾರತೀಯ ಜನ ಉರ್ವರಕ್ ಪರಿಯೋಜನಾ ಇದರ ಅಡಿಯಲ್ಲಿ ಕಂಪನಿಗಳು ಎಲ್ಲಾ ಸಬ್ಸಿಡಿ ರಸಗೊಬ್ಬರಗಳನ್ನು ಏಕ ಬ್ರಾಂಡ್ 'ಭಾರತ್' ಅಡಿಯಲ್ಲಿ ಮಾರಾಟ ಮಾಡುವುದು ಕಡ್ಡಾಯವಾಗಿದೆ.

ಎರಡು ದಿನಗಳ ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನ 2022 ರ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಈ ಯೋಜನೆಯಡಿ ಭಾರತ್ ಎಂಬ ಒಂದೇ ಬ್ರಾಂಡ್ ಅನ್ನು ಪ್ರಾರಂಭಿಸಿರುವುದಾಗಿ ಘೋಷಣೆ ಮಾಡಿದರು. ರಸಗೊಬ್ಬರಗಳ ಹೆಚ್ಚುವರಿ ಸರಕು ಸಬ್ಸಿಡಿಯನ್ನು ಕಡಿಮೆ ಮಾಡಲು ಇದನ್ನು ಮಾಡಲಾಗುತ್ತಿದೆ.

ಮಣ್ಣಿನ ಪೋಷಕಾಂಶಗಳಾದ ಯೂರಿಯಾ, ಡಿ- ಅಮೋನಿಯಂ ಫಾಸ್ಫೇಟ್ (ಡಿಎಪಿ), ಮ್ಯೂರಿಯೇಟ್ ಆಫ್ ಪೊಟ್ಯಾಶ್ (ಎಂಒಪಿ) ಮತ್ತು ಎನ್‌ಪಿಕೆಗಳನ್ನು ಒಂದೇ ಬ್ರಾಂಡ್ ಭಾರತ್‌ನ ಅಡಿಯಲ್ಲಿ ರಾಷ್ಟ್ರದಾದ್ಯಂತ ಮಾರಾಟ ಮಾಡಲಾಗುತ್ತದೆ. ಈ ವೇಳೆ ಪ್ರಧಾನಿ ಮೋದಿ ಅವರು 600 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳನ್ನು (ಪಿಎಂ-ಕೆಎಸ್‌ಕೆ) ಉದ್ಘಾಟಿಸಿದರು. ಇದು ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಉತ್ಪನ್ನಗಳನ್ನು ಖರೀದಿಸುವ ಮತ್ತು ಬಹು ಸೇವೆಗಳನ್ನು ಪಡೆದುಕೊಳ್ಳುವ ರೈತರಿಗೆ ಒಂದೆ ಕಡೆ ಸಿಗುವಂತೆ ಮಾಡುತ್ತದೆ.

Prime Minister Narendra Modi launches One Nation One Fertilizer scheme

ದೇಶದಲ್ಲಿ 3.3 ಲಕ್ಷಕ್ಕೂ ಹೆಚ್ಚು ರಸಗೊಬ್ಬರ ಚಿಲ್ಲರೆ ಅಂಗಡಿಗಳನ್ನು ಹಂತ ಹಂತವಾಗಿ ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳಾಗಿ ಪರಿವರ್ತಿಸಲು ಕೇಂದ್ರ ಸರ್ಕಾರ ಉದ್ದೇಶಿಸಿದೆ. ಪಿಎಂ ಕಿಸಾನ್ ಸಮೃದ್ಧಿ ಕೇಂದ್ರದಲ್ಲಿ ಬೀಜಗಳು, ರಸಗೊಬ್ಬರಗಳು ಮತ್ತು ಕೃಷಿ ಉಪಕರಣಗಳಂತಹ ಕೃಷಿ ವಸ್ತುಗಳನ್ನು ಪೂರೈಸುತ್ತದೆ. ಇದು ಮಣ್ಣು, ಬೀಜಗಳು ಮತ್ತು ರಸಗೊಬ್ಬರಗಳಿಗೆ ಪರೀಕ್ಷಾ ಸೌಲಭ್ಯಗಳನ್ನು ಒದಗಿಸುತ್ತದೆ. ಸರ್ಕಾರದ ಯೋಜನೆಗಳ ಬಗ್ಗೆಯೂ ಮಾಹಿತಿ ನೀಡಲಾಗುತ್ತದೆ ಎನ್ನಲಾಗಿದೆ.

ಸಮಾರಂಭದಲ್ಲಿ ಪ್ರಧಾನ ಮಂತ್ರಿಯವರು ಇಂಡಿಯನ್ ಎಡ್ಜ್ ಎಂಬ ರಸಗೊಬ್ಬರಗಳ ಇ- ಪತ್ರಿಕೆಯನ್ನು ಬಿಡುಗಡೆ ಮಾಡಿದರು. ಇದು ಇತ್ತೀಚಿನ ಬೆಳವಣಿಗೆಗಳು, ಬೆಲೆ ಪ್ರವೃತ್ತಿಗಳ ವಿಶ್ಲೇಷಣೆ, ಲಭ್ಯತೆ ಮತ್ತು ಬಳಕೆ ಸೇರಿದಂತೆ ದೇಶೀಯ ಮತ್ತು ಅಂತರರಾಷ್ಟ್ರೀಯ ರಸಗೊಬ್ಬರ ಸನ್ನಿವೇಶಗಳ ಮಾಹಿತಿಯನ್ನು ಒದಗಿಸುತ್ತದೆ. ಕಾರ್ಯಕ್ರಮದಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಮತ್ತು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+