ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಏಮ್ಸ್‌ನಲ್ಲಿ 2ನೇ ಡೋಸ್ ಕೊರೊನಾ ಲಸಿಕೆ ಪಡೆದ ಪ್ರಧಾನಿ ಮೋದಿ

|
Google Oneindia Kannada News

ನವದೆಹಲಿ, ಏಪ್ರಿಲ್ 8: ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಕೊರೊನಾ ಲಸಿಕೆಯ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಅವರು, ದೆಹಲಿಯ ಏಮ್ಸ್‌ ಆಸ್ಪತ್ರೆಯಲ್ಲಿ ಎರಡನೇ ಡೋಸ್ ಲಸಿಕೆ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ.

ಕೊರೊನಾ ಸೋಂಕನ್ನು ಸೋಲಿಸಲು ಇರುವ ಕೆಲವು ಮಾರ್ಗಗಳಲ್ಲಿ ಲಸಿಕೆ ತೆಗೆದುಕೊಳ್ಳುವುದು ಒಂದಾಗಿದೆ ಎಂದು ಹೇಳಿದ್ದಾರೆ.

Prime Minister Narendra Modi Receives 2nd Dose Of Corona Vaccine

ಮಾರ್ಚ್ 1ರಂದು ಮೋದಿ ಮೊದಲ ಕೊರೊನಾ ಲಸಿಕೆ ಪಡೆದುಕೊಂಡಿದ್ದರು. ಲಸಿಕಾ ಅಭಿಯಾನದ ಎರಡನೇ ಹಂತದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಮಾರ್ಚ್ 1ರಿಂದ ಲಸಿಕೆ ನೀಡಲು ಆರಂಭಿಸಿದ್ದು, ಅಂದೇ ಮೋದಿ ಲಸಿಕೆ ಪಡೆದುಕೊಂಡಿದ್ದರು. ಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್ ಲಸಿಕೆ ತೆಗೆದುಕೊಂಡಿದ್ದರು. ಭಾರತವನ್ನು ಕೊವಿಡ್ 19 ಮುಕ್ತಗೊಳಿಸೋಣ, ಅರ್ಹರಾದ ಎಲ್ಲರೂ ಕೊರೊನಾ ಲಸಿಕೆ ಪಡೆದುಕೊಳ್ಳಿ ಎಂದು ಸಂದೇಶ ನೀಡಿದ್ದರು.

ಜನವರಿ 16ರಿಂದ ದೇಶದಲ್ಲಿ ಕೊರೊನಾ ಲಸಿಕೆ ಅಭಿಯಾನ ಆರಂಭಗೊಂಡಿದೆ. ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಹಾಗೂ ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿತ್ತು. ಎರಡನೇ ಹಂತದ ಲಸಿಕಾ ಅಭಿಯಾನ ಮಾರ್ಚ್ 1ರಿಂದ ಆರಂಭಗೊಂಡಿದ್ದು, 60 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಿಂದ ಇದುವರೆಗೂ 8,70,77,474 ಮಂದಿಗೆ ಲಸಿಕೆ ನೀಡಲಾಗಿದೆ.

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಲಸಿಕಾ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗಿದೆ.

English summary
Prime minister Narendra Modi receives 2nd dose of corona vaccine in AIIMS on thursday
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X