• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking News: ಸಂಜೆ 5ಕ್ಕೆ ಪ್ರಧಾನಿ ಮೋದಿ ಭಾಷಣ ಕೇಳಲು ಸಜ್ಜಾಗಿ

|
Google Oneindia Kannada News

ನವದೆಹಲಿ, ಜೂನ್ 7: ದೇಶದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಣ, ಸರ್ಕಾರದ ಲಸಿಕಾ ಅಭಿಯಾನ ನೀತಿ ಬಗ್ಗೆ ಇಂದು ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡುವ ಸಾಧ್ಯತೆಯಿದೆ. ಜೂನ್ 7 ರ ಸಂಜೆ 5ಕ್ಕೆ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ ಎಂದಷ್ಟೇ ಪ್ರಧಾನಿ ಸಚಿವಾಲಯದ ಅಧಿಕೃತ ಟ್ವೀಟ್ ಮೂಲಕ ತಿಳಿದು ಬಂದಿದೆ.

Recommended Video

   lockdown ಬಗ್ಗೆ ಮೋದಿ ಭಾಷಣ! | Oneindia Kannada

   ಜೂನ್7 ರಿಂದ ಅನೇಕ ಕಡೆಗಳಲ್ಲಿ ಲಾಕ್ ಡೌನ್ ಹೋಗಿ ಅನ್ ಲಾಕ್ ಪ್ರಕ್ರಿಯೆ ಆರಂಭವಾಗಿದೆ ದೆಹಲಿಯಲ್ಲಿ ಸೋಂಕು ಹೆಚ್ಚಳದ ನಡುವೆ ಮೆಟ್ರೋ ಸೇವೆ ಆರಂಭಿಸಲು ಮುಂದಾಗಲಾಗಿದೆ. ಕರ್ನಾಟಕದಲ್ಲಿ ಹಂತ ಹಂತವಾಗಿ ಅನ್ ಲಾಕ್ ಪ್ರಕ್ರಿಯೆ ಜಾರಿಯಲ್ಲಿದೆ. ಮಿಕ್ಕಂತೆ ಕೊರೊನಾ ಸೋಂಕು, ಲಸಿಕೆ ಬಗ್ಗೆ ಪ್ರಧಾನಿ ಸಚಿವಾಲಯದ ಮಾಹಿತಿ ಈ ಕೆಳಗಿನಂತಿದೆ:

   ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 1,00,636 ಹೊಸ ಕೋವಿಡ್ ಸೋಂಕು ಪ್ರಕರಣಗಳು ವರದಿಯಾಗಿವೆ. ಕಳೆದ ಎರಡು ತಿಂಗಳಲ್ಲಿ ಇದು ಅತ್ಯಂತ ಕಡಿಮೆ ಸಂಖ್ಯೆಯಾಗಿದೆ. ಸತತ 11 ದಿನಗಳಿಂದ 2 ಲಕ್ಷಕ್ಕೂ ಕಡಿಮೆ ದೈನಂದಿನ ಹೊಸ ಪ್ರಕರಣಗಳು ದಾಖಲಾಗಿವೆ. ಇಡೀ ಸರ್ಕಾರದ ವಿಧಾನದಿಂದಾಗಿ ಈ ಫಲಿತಾಂಶ ಬಂದಿದ್ದು, ಕೇಂದ್ರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸಹಭಾಗಿತ್ವ ಮತ್ತು ನಿರಂತರ ಪ್ರಯತ್ನಗಳ ಫಲ ಇದಾಗಿದೆ.

   ಭಾರತದಲ್ಲಿ ನಿರಂತರವಾಗಿ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆಯಾಗುತ್ತಿದೆ. ಸತತ ಎರಡನೇ ದಿನ ಕೂಡ ಸಕ್ರಿಯ ಪ್ರಕರಣಗಳು 15 ಲಕ್ಷಕ್ಕಿಂತ ಕಡಿಮೆಯಾಗಿದ್ದು, ಇಂದು 14,01,609 ಪ್ರಕರಣಗಳು ದಾಖಲಾಗಿವೆ. ನಿರಂತರ ಏಳು ದಿನಗಳಿಂದ 20 ಲಕ್ಷಕ್ಕೂ ಕಡಿಮೆ ಪ್ರಕರಣಗಳು ದಾಖಲಾಗುತ್ತಿವೆ.

   24 ಗಂಟೆಗಳಲ್ಲಿ ಒಟ್ಟು 76,190 ಪ್ರಕರಣಗಳು ಕಡಿಮೆಯಾಗಿದ್ದು, ಒಟ್ಟಾರೆ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಕೇವಲ ಶೇ 4.85 ರಷ್ಟಿದೆ.

   ಹೆಚ್ಚು ಮಂದಿ ಕೋವಿಡ್ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದು 25 ದಿನಗಳಿಂದ ನಿರಂತರವಾಗಿ ಚೇತರಿಕೆಯಲ್ಲಿ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 1,74,399 ಮಂದಿ ಗುಣಮುಖರಾಗಿದ್ದಾರೆ. ದೈನಂದಿನ ಪ್ರಕರಣಗಳಿಗೆ ಹೋಲಿಸಿದರೆ 24 ಗಂಟೆಗಳಲ್ಲಿ 73,763 ಮಂದಿ ಗುಣಮುಖರಾಗಿದ್ದಾರೆ.

   ಲಸಿಕಾ ವಲಯದಲ್ಲಿ ಈತನ ದೇಶಾದ್ಯಂತ ನಡೆದ ರಾಷ್ಟ್ರೀಯ ಲಸಿಕಾ ಅಭಿಯಾನದಲ್ಲಿ 23.27 ಕೋಟಿ ಡೋಸ್ ಲಸಿಕೆ ಹಾಕಲಾಗಿದೆ. ಇಂದು ಬೆಳಿಗ್ಗೆ 7 ಗಂಟೆವರೆಗೆ ದೊರೆತ ತಾತ್ಕಾಲಿಕ ಮಾಹಿತಿಯಂತೆ 23,27,86,482 ಡೋಸ್ ಲಸಿಕೆಯನ್ನು 32,68,969 ಅವಧಿಯಲ್ಲಿ ಹಾಕಲಾಗಿದೆ.

   English summary
   Prime Minister Narendra Modi to address the nation at 5 PM today, 7th June.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X