Lok Sabha elections 2024: ಪ್ರಧಾನಿ ನರೇಂದ್ರ ಮೋದಿ ಸ್ಪರ್ಧೆ ಅಧಿಕೃತ: ಯಾವ ಕ್ಷೇತ್ರ?
ನವದೆಹಲಿ, ಮಾರ್ಚ್ 02: ಲೋಕಸಭಾ ಚುನಾವಣೆಗೆ ಸಂಬಂಧ ಭಾರತೀಯ ಜನತಾ ಪಕ್ಷವು ಶನಿವಾರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಸಹ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬುದು ಫೈನಲ್ ಆಗಿದೆ. ಯಾವ ಕ್ಷೇತ್ರ, ಎಷ್ಟು ಟಿಕೆಟ್ ಫೈನಲ್ ಎಂಬ ಎಲ್ಲ ಮಾಹಿತಿ ಇಲ್ಲಿದೆ.
ಲೋಕಸಭಾ ಚುನಾವಣೆ 2024 ಯಲ್ಲಿ ಬಹುಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ಮೊದಲ ಹಂತದಲ್ಲಿ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಟಿಕೆಟ್ ಫೈನಲ್ ಮಾಡಿದೆ. ಇದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು (PM Narendra Modi) ವಾರಣಾಸಿಯಿಂದ (Varanasi LS constituency) ಸ್ಪರ್ಧೆ ಮಾಡುವುದು ಅಧಿಕೃತಗೊಂಡಿದೆ ಎಂದು ಪ್ರಕಟಗೊಂಡಿರುವ ಬಿಜೆಪಿ ಮೊದಲ ಪಟ್ಟಿಯಿಂದ ಮಾಹಿತಿ ಹೊರ ಬಿದ್ದಿದೆ.

ಇನ್ನೇನು ಕೆಲವೇ ದಿನಗಳಲ್ಲಿ 2024ನೇ ಸಾಲಿನ ಲೋಕಸಭಾ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣೆ ಆಯೋಗ ಪ್ರಕಟಿಸಲಿದೆ. ಈ ಮಧ್ಯ ಬಿಜೆಪಿಯು ಒಟ್ಟು 543 ಕ್ಷೇತ್ರಗಳಲ್ಲಿ ಪೈಕಿ 195 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಇದರಲ್ಲಿ ಉತ್ತರ ಪ್ರದೇಶದಲ್ಲಿ ಒಟ್ಟು 51 ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಆಗಿದೆ. ಟಿಕೆಟ್ ಹಂಚಿಕೆಯ ಮೊದಲ ಪಟ್ಟಿಯಲ್ಲಿ ಉತ್ತರ ಪ್ರದೇಶ ಹೆಚ್ಚು ಸ್ಥಾನ ಪಡೆದುಕೊಂಡಿದೆ.
ವಾರಣಾಸಿ: 2019ರ ಗೆಲುವು-ಸೋಲಿನ ವಿವರ
ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಲೋಕಸಭಾ ಕ್ಷೇತ್ರವಾದ ವಾರಣಾಸಿಯಲ್ಲಿ 2019 ರಲ್ಲಿ ಎದುರಾಳಿಗಳನ್ನೆಲ್ಲ ಸೋಲಿಸಿ ವಿಜಯ ಸಾಧಿಸಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ 4,79,505 ಮತಗಳ ಅಂತರದಿಂದ ಪ್ರಚಂಡ ಗೆಲುವು ಸಾಧಿಸಿದ್ದರು.
ಪ್ರಧಾನಿ ನರೇಂದ್ರ ಮೋದಿ 6,74,664 ಮತಗಳನ್ನು ಪಡೆದರೆ, ಅವರ ಸಮೀಪದ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಶಾಲಿನಿ ಯಾದವ್ 1,95,159 ಮತಗಳನ್ನು ಪಡೆದು ಸೋಲು ಕಂಡರು. ವಾರಣಾಸಿ ಲೋಕಸಭಾ ಚುನಾವಣೆಯ ಕೊನೆಯ ಹಂತದಲ್ಲಿ 2029 ಮೇ 19 ರಂದು ಮತದಾನ ನಡೆದಿತ್ತು. ಈ ಬಾರಿಯ ಸಹ ಪ್ರಧಾನಿ ಮೋದಿಯವರು ಅಂತದ್ದೆ ಮಹತ್ತರ ಗೆಲುವಿನ ನಿರೀಕ್ಷೆಯಲ್ಲಿದ್ದಾರೆ. ಇದಕ್ಕೆ ರಾಜಕೀಯ ತಂತ್ರಗಾರಿಕೆ ಹೆಣೆಯಲಾಗಿದೆ.












Click it and Unblock the Notifications