ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಶುಭಾಶಯ

ನವದೆಹಲಿ, ನವೆಂಬರ್ 1: ಕನ್ನಡ ರಾಜ್ಯೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಾಶಯ ತಿಳಿಸಿದ್ದಾರೆ. ಕನ್ನಡಿಗರು ಕರ್ನಾಟಕದ ತುಂಬೆಲ್ಲಾ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿದ್ದಾರೆ.

ಮೋದಿ ಕನ್ನಡದಲ್ಲೇ ಟ್ವೀಟ್ ಮಾಡುವ ಮೂಲಕ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದಾರೆ. ಕರ್ನಾಟಕದಲ್ಲಿ ಕನ್ನಡ ರಾಜ್ಯೋತ್ಸವ ಬಂತೆಂದರೆ ಸಾಕು ಸಾಕಷ್ಟು ಕನ್ನಡ ಪರ ಚರ್ಚೆಗಳು, ಗಾಯನ, ಕಾರ್ಯಕ್ರಮಗಳು ನವೆಂಬರ್ ಪೂರ್ತಿಯಾಗಿ ನಡೆಯುತ್ತಲೇ ಇರುತ್ತದೆ.

ಕನ್ನಡಪರ ಹೋರಾಟಗಾರರು ಆಯೋಜಿಸುವ ಈ ಕಾರ್ಯಕ್ರಮದಲ್ಲಿ ಸಿಎಂ ಬಿ.ಎಸ್​​ ಯಡಿಯೂರಪ್ಪ ಭಾಗಿಯಾಗಲಿದ್ದಾರೆ. ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ. ಈ ವೇಳೆ ಮೆರವಣಿಗೆಯಲ್ಲಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್, ಶ್ರೀ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಸೇರಿದಂತೆ ಹಲವು ಕನ್ನಡಪರ ಹೋರಾಟಗಾರರು ಭಾಗಿಯಾಗಲಿದ್ದಾರೆ. 64ನೇ ಕನ್ನಡ ರಾಜ್ಯೋತ್ಸವ ಇದಾಗಿದೆ.

ಇತ್ತ ಕರ್ನಾಟಕ ಸರ್ಕಾರದಿಂದಲೂ ಕನ್ನಡ ರಾಜ್ಯೋತ್ಸವ ಆಚರಿಸಲಾಗುತ್ತದೆ. ವಿಧಾನಸೌಧ ಆವರಣದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವ ಸಮಾರಂಭಕ್ಕೆ ಹಲವು ಗಣ್ಯರು ಆಗಮಿಸಲಿದ್ದಾರೆ. ಕನ್ನಡ ಸಂಸ್ಕೃತಿ ಇಲಾಖೆಯಿಂದ ವಿವಿಧ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ.

ರಾಜ್ಯೋತ್ಸವದ ದಿನ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಸಾಧಕರಿಗೆ ಪ್ರಶಸ್ತಿ ನೀಡಲಾಗುತ್ತದೆ. ಸರ್ಕಾರದ ವತಿಯಿಂದ ರಾಜ್ಯೋತ್ಸವ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ.

ಕಳೆದ 55 ವರ್ಷಗಳಿಂದ ಕನ್ನಡ ಚಳವಳಿಯ ಹೋರಾಟಗಾರ ವಾಟಾಳ್ ನಾಗರಾಜ್ ರಾಜ್ಯೋತ್ಸವ ಆಚರಿಸುತ್ತಾ ಬಂದಿದ್ದಾರೆ. ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ವರ್ಷ 1963 ರಿಂದಲೂ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುತ್ತಿದ್ದಾರೆ.

ಕನ್ನಡದಲ್ಲೇ ಶುಭಾಶಯ ಕೋರಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿ ಮಾಡಿರುವ ಟ್ವೀಟ್‌ನಲ್ಲಿ ಏನಿದೆ: ರಾಷ್ಟ್ರದ ಬೆಳವಣಿಗೆಗೆ ಕರ್ನಾಟಕ ನೀಡಿದ ಅತ್ಯುನ್ನತ ಕೊಡುಗೆಯನ್ನು ಆಚರಣೆ ಮಾಡುವ ದಿವಸವೇ ಕರ್ನಾಟಕ ರಾಜ್ಯೋತ್ಸವ. ಕನ್ನಡಿಗರ ವಿಶಾಲ ಹೃದಯವಂತಿಕೆ ಹಾಗೂ ಕನ್ನಡ ನಾಡಿನ ಸೌಂದರ್ಯ ಹೆಸರುವಾಸಿಯಾದದ್ದು. ಬರುವ ದಿನಗಳಲ್ಲಿ ಕರ್ನಾಟಕದ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

 ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಬಿಎಸ್ ಯಡಿಯೂರಪ್ಪ

ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ ಬಿಎಸ್ ಯಡಿಯೂರಪ್ಪ

ಮುಖ್ಯಮಂತ್ರಿ ಬಿ.ಎಸ್, ಯಡಿಯೂರಪ್ಪ ಕನ್ನಡ ರಾಜ್ಯೋತ್ಸವಕ್ಕೆ ಶುಭಾಶಯ ಕೋರಿದ್ದಾರೆ. ಕೇವಲ ರಾಷ್ಟ್ರಧ್ವಜವನ್ನು ಮಾತ್ರ ಹಾರಿಸಿ ಎಂದಿರುವ ಅವರ ಕ್ರಮಕ್ಕೆ ಸಾಕಷ್ಟು ಮಂದಿ ಬೇಸರ ವ್ಯಕ್ತಪಡಿಸಿದ್ದಾರೆ.

 ಬಿಜೆಪಿ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಏನಿದೆ?

ಬಿಜೆಪಿ ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ಏನಿದೆ?

ರಾಜ್ಯ ಬಿಜೆಪಿ ಸರ್ಕಾರ ಹೊರಡಿಸಿರುವ ಸುತ್ತೋಲೆಯೊಂದು ಹೊಸ ವಿವಾದಕ್ಕೆ ಕಾರಣವಾಗಿದೆ. ಕನ್ನಡ ರಾಜ್ಯೋತ್ಸವದಂದು ರಾಜ್ಯದ ಯಾವ ಭಾಗದಲ್ಲಿಯೂ ಕನ್ನಡ ಧ್ವಜ ಹಾರಾಟ ಬೇಡ. ಕೇವಲ ರಾಷ್ಟ್ರಧ್ವಜವನ್ನಷ್ಟೇ ಹಾರಿಸಿ ಎಂದು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಕಡ್ಡಾಯ ಸೂಚನೆ ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ವೇಳೆ ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ನೆರವೇರಿಸಿ, ರಾಷ್ಟ್ರಧ್ವಜಾರೋಹಣ ಮಾಡಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

 ಸರ್ಕಾರದ ಸುತ್ತೋಲೆಗೆ ದಿನೇಶ್ ಗುಂಡೂರಾವ್ ಕಿಡಿ

ಸರ್ಕಾರದ ಸುತ್ತೋಲೆಗೆ ದಿನೇಶ್ ಗುಂಡೂರಾವ್ ಕಿಡಿ

ಕಾಂಗ್ರೆಸ್ ನಾಯಕ, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ಧ್ವಜ ಸಂಹಿತೆ ಹೆಸರಿನಲ್ಲಿ ಜನ ಮಾನಸದಲ್ಲಿ ದಶಕಗಳಿಂದ ನೆಲೆಯೂರಿದ ಕನ್ನಡದ ಅಸ್ಮಿತೆಯ ಪ್ರತಿಬಿಂಬವಾದ ನಾಡಧ್ವಜ ಹಾರಾಟಕ್ಕೆ ಅವಕಾಶ ನೀಡದೇ ಇರುವ ಮೂಲಕ ಬಿಜೆಪಿ ಸರ್ಕಾರ ಕನ್ನಡಿಗರ ಭಾವನೆಯೊಂದಿಗೆ ಚೆಲ್ಲಾಟವಾಡುತ್ತಿದೆ. ಕರ್ನಾಟಕದಲ್ಲಿ ನಾಡಧ್ವಜವಲ್ಲದೆ ಭಗವಾಧ್ವಜ ಹಾರಿಸಬೇಕೆ? ಎಂದು ಕಿಡಿ ಕಾರಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+