ಧೈರ್ಯವಿದ್ದರೆ ಎಎಪಿ ಮುಖಂಡರೆಲ್ಲರನ್ನೂ ಜೈಲಿಗೆ ಹಾಕಿ: ಪ್ರಧಾನಿ ಮೋದಿಗೆ ಪೃಥ್ವಿ ರೆಡ್ಡಿ ಸವಾಲು
ದೆಹಲಿ, ಮೇ 19: ವಿರೋಧ ಪಕ್ಷದ ಒಬ್ಬೊಬ್ಬ ನಾಯಕನನ್ನು ಒಂದೊಂದು ನೆಪದಲ್ಲಿ ಜೈಲಿಗೆ ಕಳುಹಿಸುವ ಕಷ್ಟವನ್ನು ಪ್ರಧಾನಿ ನರೇಂದ್ರ ಮೋದಿ ತೆಗೆದುಕೊಂಡಿದ್ದಾರೆ. ಅವರಿಗೆ ಸುಲಭವಾಗಲಿ ಎಂಬ ನಿಟ್ಟಿನಲ್ಲಿ ಪಕ್ಷದ ಎಲ್ಲ ಮುಖಂಡರು ಒಟ್ಟಾಗಿ ಬಂದಿದ್ದೇವೆ. ಧೈರ್ಯವಿದ್ದರೆ ನಮ್ಮೆಲ್ಲರನ್ನು ಒಟ್ಟಿಗೆ ಜೈಲಿಗೆ ಹಾಕಿ ಎಂದು ಆಮ್ ಆದ್ಮಿ ಪಾರ್ಟಿ ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ ಅವರು ಸವಾಲು ಹಾಕಿದರು.
ಎಎಪಿ ಮುಗಿಸಲು ಯತ್ನಿಸುತ್ತಿರುವ ಪ್ರಧಾನಿ ಮೋದಿ ನಿರಂಕುಶಪ್ರಭುತ್ವವನ್ನು ವಿರೋಧಿಸಿ ದೆಹಲಿ ಬಿಜೆಪಿ ಪ್ರಧಾನ ಕಚೇರಿಗೆ ಮುತ್ತಿಗೆ ಹಾಕುವ ಪ್ರತಿಭಟನೆಯಲ್ಲಿ ರಾಜ್ಯ ಘಟಕದ ಮುಖಂಡರು ಹಾಗೂ ಕಾರ್ಯಕರ್ತರ ನೇತೃತ್ವ ವಹಿಸಿದ್ದ ಪೃಥ್ವಿ ರೆಡ್ಡಿ, ಎಎಪಿ ರಾಜಕೀಯ ಪಕ್ಷ ಮಾತ್ರವಲ್ಲ ಒಂದು ಪ್ರಬುದ್ಧ ವಿಚಾರ.

ಆ ವಿಚಾರವನ್ನು ಎಂದಿಗೂ ಮುಗಿಸಲು ಸಾಧ್ಯವಿಲ್ಲ. ನಮ್ಮನ್ನು ಜೈಲಿನಲ್ಲಿಡಬಹುದು, ನಮ್ಮ ಬ್ಯಾಂಕ್ ಖಾತೆಗಳನ್ನು ತಡೆಹಿಡಿಯಬಹುದು, ಕಚೇರಿಯಿಂದ ಹೊರ ಹಾಕಬಹುದು. ಆದರೆ ಅರವಿಂದ ಕೇಜ್ರಿವಾಲ್ ಅವರು ಹುಟ್ಟುಹಾಕಿರುವ ವಿಚಾರವನ್ನು ಕೊನೆಗಾಣಿಸಲು ಸಾಧ್ಯವಿಲ್ಲ. ಕಾರಣ ಈಗಾಗಲೇ ಭಾರತೀಯ ಮನಸ್ಸಿನಲ್ಲಿ ಕೇಜ್ರಿವಾಲ್ ವಿಚಾರಗಳು ನಾಟಿವೆ ಎಂದರು.
ದೇಶದ ಮತದಾರರು ನಮ್ಮ ಸರ್ಕಾರದ ಅಭಿವೃದ್ಧಿ ಪರ ಕೆಲಸಗಳ ಬಗ್ಗೆ ಮಾತನಾಡುತ್ತಿದ್ದಾರೆ. ಇದನ್ನು ಸಹಿಸದ ಪ್ರಧಾನಿ ನರೇಂದ್ರ ಮೋದಿ ನಮ್ಮ ಪಕ್ಷವನ್ನು ಮುಗಿಸಲು ಕಳೆದ ಕೆಲವು ತಿಂಗಳಿಂದ ಹರಸಾಹಸ ಪಡುತ್ತಿದ್ದಾರೆ. ಕೆಲಸದ ವಿಚಾರದಲ್ಲಿ ನಮ್ಮ ಜೊತೆ ಸ್ಪರ್ಧಿಸಲು ಧೈರ್ಯವಿಲ್ಲದ ಮೋದಿ ವಾಮಮಾರ್ಗ ಹಿಡಿದಿದ್ದಾರೆ. ಮೂರು ರೀತಿಯಲ್ಲಿ ನಮ್ಮ ಪಕ್ಷವನ್ನು ಮುಗಿಸಲು ಪ್ರಯತ್ನಿಸುತ್ತಿದ್ದಾರೆ. ಮೊದಲನೆಯದಾಗಿ ನಮ್ಮ ಎಲ್ಲ ಪ್ರಮುಖ ನಾಯಕರನ್ನು ಜೈಲಿಗೆ ಕಳುಹಿಸುತ್ತಿದ್ದಾರೆ.
ಎರಡನೇ ತಂತ್ರವಾಗಿ ನಮ್ಮ ಪಕ್ಷದ ಬ್ಯಾಂಕ್ ಅಕೌಂಟ್ ಫ್ರೀಜ್ ಮಾಡುವ ಪ್ರಯತ್ನ ನಡೆಸಿದ್ದಾರೆ. ಮೂರನೆಯದಾಗಿ ದೆಹಲಿಯ ಪ್ರಧಾನ ಕಚೇರಿಯಿಂದ ನಮ್ಮನ್ನು ಹೊರಹಾಕುವ ಸಂಚು ಹೂಡಿದ್ದಾರೆ. ಆದರೆ ಈ ಯಾವ ಪ್ರಯತ್ನಗಳು ಕೈಗೂಡುವುದಿಲ್ಲ ಎಂದು ಪೃಥ್ವಿ ರೆಡ್ಡಿ ಹೇಳಿದರು.
ಈ ಸಂದರ್ಭ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ, ರಾಜ್ಯ ಕಾರ್ಯದರ್ಶಿ ಉಷಾ ಮೋಹನ್, ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ಅಶೋಕ್ ಮೃತ್ಯುಂಜಯ, ಸಂಚಿತ್ ಸೆಹವಾನಿ ಸೇರಿದಂತೆ ಅನೇಕ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.
-
Narendra Modi: ಕರ್ನಾಟಕದ ಅಭಿವೃದ್ಧಿಗೆ ಪೂರಕವಾದ 18 ಅಂಶ: ನರೇಂದ್ರ ಮೋದಿಗೆ ಸಿದ್ದರಾಮಯ್ಯ ಪತ್ರ -
ಆದಿಚುಂಚನಗಿರಿ ಮಠಕ್ಕೆ ಇಂದು ಪ್ರಧಾನಿ ಮೋದಿ ಭೇಟಿ: ಗುರು ಭೈರವೈಕ್ಯ ಮಂದಿರ ಲೋಕಾರ್ಪಣೆಗೆ ಸಕಲ ಸಿದ್ಧತೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್












Click it and Unblock the Notifications