• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

NMC ಕಾಯ್ದೆ ವಿರುದ್ಧ ಪ್ರತಿಭಟನೆಗೆ ಕರ್ನಾಟಕದಲ್ಲೂ ಬೆಂಬಲ

|

ಬೆಂಗಳೂರು, ಜುಲೈ 31: ಕೇಂದ್ರ ಸರ್ಕಾರ ಹೊರತರಲು ಮುಂದಾಗಿರುವ ನ್ಯಾಷನಲ್ ಮೆಡಿಕಲ್ ಕಮಿಷನ್ ಕಾಯ್ದೆ ವಿರುದ್ಧ ದೇಶದೆಲ್ಲೆಡೆ ಬುಧವಾರ(ಜುಲೈ 31)ದಂದು ಖಾಸಗಿ ಆಸ್ಪತ್ರೆಗಳು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗುತ್ತಿದೆ.

ಬುಧವಾರ ಬೆಳಗ್ಗೆ 6 ರಿಂದ ಸಂಜೆ 6ರ ತನಕ ಪ್ರತಿಭಟನೆ ನಡೆಯಲಿದ್ದು, ಕರ್ನಾಟಕ ಖಾಸಗಿ ವೈದ್ಯರಿಂದಲೂ ಬೆಂಬಲ ವ್ಯಕ್ತವಾಗಿದೆ. ಈ ಪ್ರತಿಭಟನೆ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ಖಾಸಗಿ ಆಸ್ಪತ್ರೆ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳುಳ್ಳ ಭಾರತೀಯ ವೈದ್ಯಕೀಯ ಸಂಘ(ಐಎಂಎ) ಮುಂದಾಗಿದ್ದಾರೆ.

ಜುಲೈ 31ರಂದು ದೇಶಾದ್ಯಂತ ವೈದ್ಯರ ಮುಷ್ಕರಜುಲೈ 31ರಂದು ದೇಶಾದ್ಯಂತ ವೈದ್ಯರ ಮುಷ್ಕರ

ಈ ಪ್ರತಿಭಟನೆ, ಬಂದ್ ನಿಂದಾಗಿ ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ. ಹೀಗಾಗಿ, ವೈದ್ಯರು ಪ್ರತಿಭಟನೆ ನಡೆಸುವುದರಿಂದ ಸರ್ಕಾರಿ ಆಸ್ಪತ್ರೆಗಳ ವೈದ್ಯರಿಗೆ ನೀಡಲಾಗಿದ್ದ ರಜೆಯನ್ನು ರದ್ದು ಮಾಡಲಾಗಿದೆ. ಜಿಲ್ಲಾ ಆರೋಗ್ಯಾಧಿಕಾರಿ ಸರ್ಕಾರಿ ವೈದ್ಯರ ರಜೆ ಕಡಿತಗೊಳಿಸಿ ಸೇವೆಗೆ ಹಾಜರಾಗಲು ಸೂಚನೆ ನೀಡಿದ್ದಾರೆ.

ಪ್ರತಿಭಟನೆ ಏಕೆ: ಹಾಲಿ ಮೆಡಿಕಲ್ ಕೌನ್ಸಿಲ್ ಆಫ್ ಇಂಡಿಯಾ ಬದಲಾಯಿಸಿ ಅದರ ಜಾಗದಲ್ಲಿ ನ್ಯಾಷನಲ್ ಮೆಡಿಕಲ್ ಕಮಿಷನ್ ತರಲು ಕಾಯ್ದೆಯಲ್ಲಿ ತಿದ್ದುಪಡಿ ಮಾಡಲಾಗಿದೆ. NEET ಪರೀಕ್ಷೆ ಜೊತೆಗೆ ಹೊಸದಾಗಿ NEXT ಪರೀಕ್ಷೆಯನ್ನು ಏಮ್ಸ್ ನಂಥ ಸಂಸ್ಥೆಗೆ ತರಲಾಗುತ್ತಿದೆ, ಇದಲ್ಲದೆ ಮೆಡಿಕಲ್ ಶುಲ್ಕ, ಸೀಟು ಹಂಚಿಕೆಯಲ್ಲೂ ಬದಲಾವಣೆಯಾಗಲಿದ್ದು, ವಿದ್ಯಾರ್ಥಿಗಳಿಂದ ಇದಕ್ಕೆ ಪ್ರತಿರೋಧ ವ್ಯಕ್ತವಾಗಿದೆ.

English summary
Medical students and healthcare professionals from across the country protest against the National Medical Commission (NMC) Bill 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X