ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೋದಿ, ನಿರ್ಮಲಾ ಸೀತಾರಾಮನ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ

By Gururaj
|
Google Oneindia Kannada News

ನವದೆಹಲಿ, ಜುಲೈ 23 : ಪ್ರಧಾನಿ ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ರಾಹುಲ್ ಗಾಂಧಿ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಲು ಬಿಜೆಪಿ ನಿರ್ಧರಿಸಿದೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕೇಂದ್ರ ಸರ್ಕಾರದ ನಡುವೆ ರಫೆಲ್ ಯುದ್ಧ ವಿಮಾನ ಖರೀದಿ ವಿಚಾರದಲ್ಲಿ ಜಟಾಪಟಿ ನಡೆಯುತ್ತಿದೆ. ಅವಿಶ್ವಾಸ ನಿರ್ಣಯ ಮಂಡನೆ ಬಳಿಕ ಮಾತನಾಡಿದ್ದ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಹಲವು ಆರೋಪಗಳನ್ನು ಮಾಡಿದ್ದರು.

ರಫೇಲ್ ಒಪ್ಪಂದಕ್ಕೆ ಆಕ್ಷೇಪ, ಕಾಂಗ್ರೆಸ್ ಕಡೆಗೆ ಬಾಣ ತಿರುಗಿಸಿದ ಸಚಿವೆರಫೇಲ್ ಒಪ್ಪಂದಕ್ಕೆ ಆಕ್ಷೇಪ, ಕಾಂಗ್ರೆಸ್ ಕಡೆಗೆ ಬಾಣ ತಿರುಗಿಸಿದ ಸಚಿವೆ

'ರಫೆಲ್ ಯುದ್ಧ ವಿಮಾನ ಖರೀದಿ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಒತ್ತಡದ ಹಿನ್ನಲೆಯಲ್ಲಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸುಳ್ಳು ಹೇಳುತ್ತಿದ್ದಾರೆ. ಖರೀದಿ ಕುರಿತು ದಾಖಲೆ ಬಿಡುಗಡೆ ಮಾಡಬೇಕು. ಪ್ರಧಾನಿಯವರು ಈ ಕುರಿತು ಉತ್ತರ ನೀಡಬೇಕು' ಎಂದು ರಾಹುಲ್ ಗಾಂಧಿ ಲೋಕಸಭೆಯಲ್ಲಿ ಹೇಳಿದ್ದರು.

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ಹಕ್ಕುಚ್ಯುತಿ ಮಂಡನೆರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ಹಕ್ಕುಚ್ಯುತಿ ಮಂಡನೆ

Privilege motion against Narendra Modi and Nirmala Sitharaman

ಈಗ ಪ್ರಧಾನಿ ನರೇಂದ್ರ ಮೋದಿ ಮತ್ತು ನಿರ್ಮಲಾ ಸೀತಾರಾಮನ್ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡಲು ಕಾಂಗ್ರೆಸ್ ನಿರ್ಧರಿಸಿದೆ. ನರೇಂದ್ರ ಮೋದಿ ಮತ್ತು ರಕ್ಷಣಾ ಸಚಿವರು ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿ ಹಕ್ಕುಚ್ಯುತಿ ಮಂಡನೆ ಮಾಡಲಾಗುತ್ತಿದೆ.

ರಾಹುಲ್ ಗಾಂಧಿಗೆ ಹಿನ್ನಡೆ : ಶುಕ್ರವಾರ ರಾಹುಲ್ ಗಾಂಧಿ ಲೋಕಸಭೆಯಲ್ಲಿ ರಫೆಲ್ ಯುದ್ಧ ವಿಮಾನ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಆರೋಪ ಮಾಡಿದ್ದರು. ಸಂಜೆ ಫ್ರಾನ್ಸ್ ಸರ್ಕಾರ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಖರೀದಿ ಪ್ರಕ್ರಿಯೆ ಭದ್ರತಾ ಮತ್ತು ಮಿಲಿಟರಿ ಕ್ಷೇತ್ರಕ್ಕೆ ಒಳಪಡುತ್ತದೆ. ಈ ಕುರಿತು ದಾಖಲೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಫ್ರಾನ್ಸ್ ಸರ್ಕಾರದ ಪತ್ರಿಕಾ ಹೇಳಿಕೆ ಬಳಿಕ ರಾಹುಲ್ ಗಾಂಧಿ ಅವರಿಗೆ ಹಿನ್ನಡೆ ಉಂಟಾಗಿತ್ತು. ಬಿಜೆಪಿ ಸದನಕ್ಕೆ ರಾಹುಲ್ ಗಾಂಧಿ ತಪ್ಪು ಮಾಹಿತಿ ನೀಡಿದ್ದಾರೆ ಎಂದು ಅವರ ವಿರುದ್ಧ ಹಕ್ಕುಚ್ಯುತಿ ಮಂಡನೆ ಮಾಡುವುದಾಗಿ ಹೇಳಿತ್ತು.

English summary
Congress decided to move privilege motion against Prime Minister of India Narendra Modi and Defence Minister Nirmala Sitharaman in Lok Sabha on Rafale issue.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X