ಲೋಕಸಭಾ ಚುನಾವಣೆಗೆ ಸ್ಪರ್ಧೆ : ಮೌನ ಮುರಿದ ಪ್ರಿಯಾಂಕಾ ಗಾಂಧಿ

ನವದೆಹಲಿ, ಮಾರ್ಚ್ 27 : ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿದ್ದಾರೆಯೇ?. ಉತ್ತರ ಪ್ರದೇಶದ ಪೂರ್ವ ವಲಯದ ಉಸ್ತುವಾರಿಯಾಗಿ ಅವರು ನೇಮಕವಾದ ದಿನದಿಂದ ಈ ಬಗ್ಗೆ ಚರ್ಚೆ ನಡೆಯುತ್ತಿದೆ.

ಲೋಕಸಭಾ ಚುನಾವಣೆ 2019 : ವಿಶೇಷ ಪುಟ | ಗ್ಯಾಲರಿ

ಬುಧವಾರ ಈ ಕುರಿತು ಪ್ರಿಯಾಂಕಾ ಗಾಂಧಿ ಅವರು ಈ ಕುರಿತು ಮಾತನಾಡಿದರು. 'ನಾನು ಈ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ಪಕ್ಷದೊಂದಿಗೆ ಕೆಲಸ ಮಾಡಬೇಕು ಎಂಬುದು ನನ್ನ ಆಸೆಯಾಗಿದೆ' ಎಂದು ಹೇಳಿದರು.

Priyanka Gandhi breaks silence on contest for Lok sabha election

'ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ಕುರಿತು ಇನ್ನೂ ತೀರ್ಮಾನ ಕೈಗೊಂಡಿಲ್ಲ. ಪಕ್ಷ ಸ್ಪರ್ಧೆ ಮಾಡುವಂತೆ ಸೂಚಿಸಿದರೆ ಖಂಡಿತ ಕಣಕ್ಕಿಳಿಯುತ್ತೇನೆ' ಎಂದು ಪ್ರಿಯಾಂಕಾ ಗಾಂಧಿ ಸ್ಪಷ್ಟಪಡಿಸಿದರು.

ಪ್ರಿಯಾಂಕಾ ಗಾಂಧಿ ಅವರು ಸಕ್ರಿಯ ರಾಜಕಾರಣಕ್ಕೆ ಬಂದಿದ್ದು ಉತ್ತರ ಪ್ರದೇಶದ ಪೂರ್ವ ವಲಯದ ಉಸ್ತುವಾರಿಯಾಗಿ ಅವರನ್ನು ನೇಮಕ ಮಾಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಪ್ರಚಾರ ಕಾರ್ಯದ ಉಸ್ತುವಾರಿಯನ್ನು ಅವರು ನೋಡಿಕೊಳ್ಳುತ್ತಿದ್ದಾರೆ.

ಉತ್ತರ ಪ್ರದೇಶದಲ್ಲಿ ಪ್ರಯಾಗಾ ರಾಜ್‌ನಿಂದ ವಾರಣಾಸಿಗೆ ಗಂಗಾ ಯಾತ್ರೆ ಮಾಡುವ ಮೂಲಕ ಅವರು ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಿದ್ದಾರೆ. ಲೋಕಸಭಾ ಚುನಾವಣೆಗೆ ಅವರು ಸ್ಪರ್ಧೆ ಮಾಡಲಿದ್ದಾರೆಯೇ? ಎಂಬ ಪ್ರಶ್ನೆ ಪದೇ-ಪದೇ ಕೇಳಿಬರುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+