Priyanka Gandhi Vadra: ನನ್ನ ಅಣ್ಣ ಅಮಾಯಕ, ರಾಹುಲ್ ಆ ಕೆಲಸ ಮಾಡಲು ಸಾಧ್ಯವಿಲ್ಲ ಎಂದ ಪ್ರಿಯಾಂಕಾ ಗಾಂಧಿ!
ನನ್ನ ಅಣ್ಣ ತಪ್ಪು ಮಾಡಿಲ್ಲ ತಂಗಿಯಾಗಿ ಹೇಳ್ತೀನಿ ರಾಹುಲ್ ಗಾಂಧಿ ಅವರು ಆ ರೀತಿ ಮಾಡಲು ಸಾಧ್ಯವಿಲ್ಲ ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಅವರು ಹೇಳಿದ್ದಾರೆ. ಸಂಸತ್‌ನಲ್ಲಿ ಕಳೆದ ಎರಡು ಮೂರು ದಿನಗಳಿಂದ ಅಲ್ಲೋಲ ಕಲ್ಲೋಲವೇ ನಡೆದಿದೆ. ಡಾ. ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಕೊಟ್ಟಿರುವ ಹೇಳಿಕೆ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಈ ವಿಚಾರವಾಗಿ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಆದರೆ, ಪ್ರತಿಭಟನೆಯ ಸಂದರ್ಭದಲ್ಲಿ ಬಿಜೆಪಿ ಸಂಸದರಿಗೆ ಗಾಯವಾಗಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ವಿಚಾರವಾಗಿ ರಾಹುಲ್ ಗಾಂಧಿಯ ಮೇಲೆ ಎಫ್‌ಐಆರ್ ಸಹ ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಅವರು ಮಾತನಾಡಿದ್ದಾರೆ.
ರಾಹುಲ್ ಗಾಂಧಿ ಅವರ ಮೇಲೆ ದಾಖಲಾಗಿರುವ ಕೇಸ್‌ಗೆ ಸಂಬಂಧಿಸಿದಂತೆ ಪ್ರಿಯಾಂಕಾ ಗಾಂಧಿ ಅವರು ಮಾತನಾಡಿದ್ದಾರೆ. ರಾಹುಲ್ ಗಾಂಧಿ ಅವರ ಮೇಲೆ ಸುಳ್ಳು ಆರೋಪ ಮಾಡಲಾಗಿದೆ. ಅಲ್ಲದೆ ಸುಳ್ಳು ಎಫ್‌ಐಆರ್ ಸಹ ದಾಖಲಾಗಿದೆ. ತಂಗಿಯಾಗಿ ಹೇಳ್ತೀನಿ ಅವರು ಈ ರೀತಿ ಮಾಡಲು ಸಾಧ್ಯವಿಲ್ಲ. ನನ್ನ ಅಣ್ಣ ರಾಹುಲ್ ಗಾಂಧಿ ಎಂದಿಗೂ, ಯಾರನ್ನೂ ತಳ್ಳಲು ಸಾಧ್ಯವೇ ಇಲ್ಲ ಎಂದು ಪ್ರಿಯಾಂಕಾ ಅವರು ಹೇಳಿದ್ದಾರೆ. ನಾನು ಅವರ ತಂಗಿ ಅವರನ್ನು ಚಿಕ್ಕ ವಯಸ್ಸಿನಿಂದಲೂ ನೋಡ್ತಿದ್ದೇನೆ. ರಾಹುಲ್ ಯಾವುದೇ ಕಾರಣಕ್ಕೂ ಈ ಕೆಲಸ ಮಾಡಲ್ಲ. ರಾಹುಲ್ ಏನು ಅಂತ ನಮ್ಮ ದೇಶದ ಜನರಿಗೂ ಗೊತ್ತಿದೆ ಎಂದಿದ್ದಾರೆ.

ಬಿಜೆಪಿ ಯಾವ ರೀತಿ ನಡೆದುಕೊಳ್ಳುತ್ತಿದೆ ಎನ್ನುವುದನ್ನು ದೇಶದ ಜನ ನೋಡುತ್ತಿದ್ದಾರೆ. ಇದು ಬಿಜೆಪಿ ಹಾಗೂ ಕೇಂದ್ರ ಸರ್ಕಾರ ಎಷ್ಟು ಹತಾಶಾ ಮನೋಭವಾವನ್ನು ಹೊಂದಿದೆ ಎನ್ನುವುದನ್ನು ತೋರಿಸುತ್ತದೆ. ಕೇಂದ್ರ ಸರ್ಕಾರಕ್ಕೆ ಅದಾನಿ ವಿಷಯ ಚರ್ಚೆಯೇ ಆಗಬೇಕಿಲ್ಲ. ಅದಾನಿ ವಿಷಯ ಚರ್ಚೆಯಾಗಬಾರದು ಎನ್ನುವು ಕಾರಣಕ್ಕೆ ಈ ರೀತಿ ಮಾಡುತ್ತಿದ್ದಾರೆ. ಇದೇ ಕಾರಣಕ್ಕೆ ಶುದ್ಧ ಸುಳ್ಳು ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ. ಕೇಂದ್ರ ಸರ್ಕಾರವು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಮಾಡಿರುವ ಅವಮಾನವನ್ನು ದೇಶದ ಜನ ಎಂದಿಗೂ ಸಹಿಸಿಕೊಳ್ಳಲ್ಲ ಎನ್ನುವುದು ಅವರಿಗೂ ಗೊತ್ತಿದೆ. ಹೀಗಾಗಿ, ಈ ವಿಷಯವನ್ನು ವಿಷಯಾಂತರ ಮಾಡುವ ಉದ್ದೇಶದಿಂದ ಹಾಗೂ ಜನರ ಗಮನವನ್ನು ಬೇರೆ ಕಡೆ ಸೆಳೆಯುವ ಉದ್ದೇಶದಿಂದ ಈ ರೀತಿ ಮಾಡಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಅವರು ಹೇಳಿದ್ದಾರೆ.
ಏನಿದು ಹಿನ್ನೆಲೆ: ಸಂಸತ್‌ನಲ್ಲಿ ಈಚೆಗೆ ಡಾ. ಬಿ.ಆರ್ ಅಂಬೇಡ್ಕರ್ ಅವರ ಬಗ್ಗೆ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್.. ಅಂಬೇಡ್ಕರ್ ಅಂತ ಹೇಳುವುದು ಈಗ ಕೆಲವರಿಗೆ ಫ್ಯಾಷನ್ ಆಗೋಗಿದೆ. ಅಂಬೇಡ್ಕರ್ ಅಂತ ಹೇಳುವುದರ ಬದಲು ದೇವರ ನಾಮಸ್ಮರಣೆಯನ್ನಾದರೂ ಮಾಡಿದ್ದರೆ, ಸ್ವರ್ಗ ಪ್ರಾಪ್ತಿಯಾಗುತ್ತಿತ್ತು ಎಂದಿದ್ದರು. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿತ್ತು. ಇದನ್ನು ವಿರೋಧಿಸಿದ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದವು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಬಿಜೆಪಿ ಸಂಸದರನ್ನು ತಳ್ಳಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿಯ ನಡುವೆ ವಾಕ್ಸಮರ ಮುಂದುವರಿದಿದೆ.
ಈ ಘಟನೆಯಲ್ಲಿ ಸಂಸದ ಪ್ರತಾಪ್ ಸಾರಂಗಿ ಎನ್ನುವವರಿಗೆ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ನಡೆದ ಮೇಲೆ ರಾಹುಲ್ ವಿರುದ್ಧ ಮಾಜಿ ಸಚಿವ ಅನುರಾಗ್ ಠಾಕೂರ್ ಹಾಗೂ ಬಿಜೆಪಿ ಸಂಸದರು ದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಈ ಸಂಬಂಧ ರಾಹುಲ್ ಗಾಂಧಿ ಅವರ ಮೇಲೆ ಎಫ್‌ಐಆರ್ ಸಹ ದಾಖಲಾಗಿದೆ.












Click it and Unblock the Notifications