ಪತಿ ರಾಬರ್ಟ್ ವಾದ್ರಾಗೆ ಕೋವಿಡ್ ಪಾಸಿಟಿವ್: ಐಸೋಲೇಷನ್‌ನಲ್ಲಿ ಪ್ರಿಯಾಂಕಾ ಗಾಂಧಿ
ನವದೆಹಲಿ, ಏಪ್ರಿಲ್ 2: ಸತತ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಕೊರೊನಾ ವೈರಸ್ ಭೀತಿ ಎದುರಾಗಿದೆ. ಅವರ ಪತಿ ರಾಬರ್ಟ್ ವಾದ್ರಾ ಅವರು ಕೋವಿಡ್ -19 ಪಾಸಿಟಿವ್‌ಗೆ ಒಳಗಾಗಿದ್ದಾರೆ. ಅದೃಷ್ಟವಶಾತ್ ಪ್ರಿಯಾಂಕಾ ಅವರ ವರದಿಯಲ್ಲಿ ನೆಗೆಟಿವ್ ಬಂದಿದೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಅವರು ಇನ್ನು ಚುನಾವಣಾ ಪ್ರಚಾರದಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ, ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ವ್ಯಾಪಕವಾಗಿ ಪಾಲ್ಗೊಂಡಿದ್ದರು. ಇದೀಗ ರಾಬರ್ಟ್ ವಾದ್ರಾ ಅವರ ಕೋವಿಡ್ ವರದಿಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಪ್ರಿಯಾಂಕಾ ವಾದ್ರಾ ಕೂಡ ಐಸೋಲೇಷನ್‌ಗೆ ಒಳಗಾಗಿದ್ದಾರೆ.
'ಇತ್ತೀಚೆಗೆ ಕೊರೊನಾ ಸೋಂಕಿಗೆ ತೆರೆದುಕೊಂಡ ಕಾರಣದಿಂದ ನನ್ನ ಅಸ್ಸಾಂ ಪ್ರವಾಸವನ್ನು ರದ್ದುಗೊಳಿಸಬೇಕಾಗಿದೆ. ನಿನ್ನೆ ಬಂದ ವರದಿಯಲ್ಲಿ ನೆಗೆಟಿವ್ ಎಂದು ತಿಳಿದುಬಂದಿದೆ. ಆದರೆ ವೈದ್ಯರ ಸಲಹೆಯಂತೆ ನಾನು ಇನ್ನು ಕೆಲವು ದಿನಗಳವರೆಗೆ ಐಸೋಲೇಷನ್‌ನಲ್ಲಿ ಇರಲಿದ್ದೇನೆ. ಈ ಅಡಚಣೆಗಾಗಿ ಎಲ್ಲರಿಗೂ ಕ್ಷಮೆ ಕೋರುತ್ತೇನೆ. ಕಾಂಗ್ರೆಸ್‌ನ ಗೆಲುವಿಗಾಗಿ ನಾನು ಪ್ರಾರ್ಥಿಸುತ್ತೇನೆ' ಎಂದು ಪ್ರಿಯಾಂಕಾ ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿದ್ದಾರೆ.
हाल में कोरोना संक्रमण के संपर्क में आने के चलते मुझे अपना असम दौरा रद्द करना पड़ रहा है। मेरी कल की रिपोर्ट नेगेटिव आई है मगर डॉक्टरों की सलाह पर मैं अगले कुछ दिनों तक आइसोलेशन में रहूँगी। इस असुविधा के लिए मैं आप सभी से क्षमाप्रार्थी हूँ। मैं कांग्रेस विजय की प्रार्थना करती हूँ pic.twitter.com/B1PlDyR8rc
— Priyanka Gandhi Vadra (@priyankagandhi) April 2, 2021
ತಮ್ಮ ನಿಗದಿಯಾದ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಅಸ್ಸಾಂನ ಕಾಂಗ್ರೆಸ್ ಘಟಕಕ್ಕೆ ಪ್ರಿಯಾಂಕಾ ಗಾಂಧಿ ಈಗಾಗಲೇ ಸೂಚಿಸಿದ್ದಾರೆ. ಅವರು ಗೋಲ್ಪರ, ಗೋಲಗಂಜ್ ಮತ್ತು ಕಯಾಕುಚಿಗಳಲ್ಲಿ ಶುಕ್ರವಾರ ಪ್ರಚಾರ ಸಭೆಗಳನ್ನು ನಡೆಸಬೇಕಿತ್ತು.

ತಾವು ಕೋವಿಡ್ 19 ಪಾಸಿಟಿವ್ ಇರುವ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದು ತಮಗೂ ಪಾಸಿಟಿವ್ ಬಂದಿದೆ. ಇದುವರೆಗೂ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಅದೃಷ್ಟವಶಾತ್ ಈ ದಿನಗಳಲ್ಲಿ ಮಕ್ಕಳು ನಮ್ಮ ಜತೆ ಇರಲಿಲ್ಲ. ಅಲ್ಲದೆ, ಮನೆಯಲ್ಲಿನ ಇತರೆ ಎಲ್ಲರಲ್ಲಿಯೂ ಕೋವಿಡ್ ನೆಗೆಟಿವ್ ಬಂದಿದೆ ಎಂದು ರಾಬರ್ಟ್ ವಾದ್ರಾ ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications