• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪತಿ ರಾಬರ್ಟ್ ವಾದ್ರಾಗೆ ಕೋವಿಡ್ ಪಾಸಿಟಿವ್: ಐಸೋಲೇಷನ್‌ನಲ್ಲಿ ಪ್ರಿಯಾಂಕಾ ಗಾಂಧಿ

|

ನವದೆಹಲಿ, ಏಪ್ರಿಲ್ 2: ಸತತ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ಕೊರೊನಾ ವೈರಸ್ ಭೀತಿ ಎದುರಾಗಿದೆ. ಅವರ ಪತಿ ರಾಬರ್ಟ್ ವಾದ್ರಾ ಅವರು ಕೋವಿಡ್ -19 ಪಾಸಿಟಿವ್‌ಗೆ ಒಳಗಾಗಿದ್ದಾರೆ. ಅದೃಷ್ಟವಶಾತ್ ಪ್ರಿಯಾಂಕಾ ಅವರ ವರದಿಯಲ್ಲಿ ನೆಗೆಟಿವ್ ಬಂದಿದೆ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಅವರು ಇನ್ನು ಚುನಾವಣಾ ಪ್ರಚಾರದಿಂದ ದೂರ ಉಳಿಯಲು ತೀರ್ಮಾನಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ, ಅಸ್ಸಾಂ ವಿಧಾನಸಭೆ ಚುನಾವಣೆಯಲ್ಲಿ ವ್ಯಾಪಕವಾಗಿ ಪಾಲ್ಗೊಂಡಿದ್ದರು. ಇದೀಗ ರಾಬರ್ಟ್ ವಾದ್ರಾ ಅವರ ಕೋವಿಡ್ ವರದಿಯಲ್ಲಿ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಪ್ರಿಯಾಂಕಾ ವಾದ್ರಾ ಕೂಡ ಐಸೋಲೇಷನ್‌ಗೆ ಒಳಗಾಗಿದ್ದಾರೆ.

Breaking: ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್‌ ಆಸ್ಪತ್ರೆಗೆ ದಾಖಲುBreaking: ಮಾಜಿ ಕ್ರಿಕೆಟ್ ಆಟಗಾರ ಸಚಿನ್ ತೆಂಡೂಲ್ಕರ್‌ ಆಸ್ಪತ್ರೆಗೆ ದಾಖಲು

'ಇತ್ತೀಚೆಗೆ ಕೊರೊನಾ ಸೋಂಕಿಗೆ ತೆರೆದುಕೊಂಡ ಕಾರಣದಿಂದ ನನ್ನ ಅಸ್ಸಾಂ ಪ್ರವಾಸವನ್ನು ರದ್ದುಗೊಳಿಸಬೇಕಾಗಿದೆ. ನಿನ್ನೆ ಬಂದ ವರದಿಯಲ್ಲಿ ನೆಗೆಟಿವ್ ಎಂದು ತಿಳಿದುಬಂದಿದೆ. ಆದರೆ ವೈದ್ಯರ ಸಲಹೆಯಂತೆ ನಾನು ಇನ್ನು ಕೆಲವು ದಿನಗಳವರೆಗೆ ಐಸೋಲೇಷನ್‌ನಲ್ಲಿ ಇರಲಿದ್ದೇನೆ. ಈ ಅಡಚಣೆಗಾಗಿ ಎಲ್ಲರಿಗೂ ಕ್ಷಮೆ ಕೋರುತ್ತೇನೆ. ಕಾಂಗ್ರೆಸ್‌ನ ಗೆಲುವಿಗಾಗಿ ನಾನು ಪ್ರಾರ್ಥಿಸುತ್ತೇನೆ' ಎಂದು ಪ್ರಿಯಾಂಕಾ ವಿಡಿಯೋ ಸಂದೇಶದಲ್ಲಿ ಮಾಹಿತಿ ನೀಡಿದ್ದಾರೆ.

ತಮ್ಮ ನಿಗದಿಯಾದ ಕಾರ್ಯಕ್ರಮಗಳನ್ನು ರದ್ದುಗೊಳಿಸುವಂತೆ ಅಸ್ಸಾಂನ ಕಾಂಗ್ರೆಸ್ ಘಟಕಕ್ಕೆ ಪ್ರಿಯಾಂಕಾ ಗಾಂಧಿ ಈಗಾಗಲೇ ಸೂಚಿಸಿದ್ದಾರೆ. ಅವರು ಗೋಲ್ಪರ, ಗೋಲಗಂಜ್ ಮತ್ತು ಕಯಾಕುಚಿಗಳಲ್ಲಿ ಶುಕ್ರವಾರ ಪ್ರಚಾರ ಸಭೆಗಳನ್ನು ನಡೆಸಬೇಕಿತ್ತು.

ತಾವು ಕೋವಿಡ್ 19 ಪಾಸಿಟಿವ್ ಇರುವ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದು ತಮಗೂ ಪಾಸಿಟಿವ್ ಬಂದಿದೆ. ಇದುವರೆಗೂ ಯಾವುದೇ ಲಕ್ಷಣಗಳು ಕಂಡುಬಂದಿಲ್ಲ. ಅದೃಷ್ಟವಶಾತ್ ಈ ದಿನಗಳಲ್ಲಿ ಮಕ್ಕಳು ನಮ್ಮ ಜತೆ ಇರಲಿಲ್ಲ. ಅಲ್ಲದೆ, ಮನೆಯಲ್ಲಿನ ಇತರೆ ಎಲ್ಲರಲ್ಲಿಯೂ ಕೋವಿಡ್ ನೆಗೆಟಿವ್ ಬಂದಿದೆ ಎಂದು ರಾಬರ್ಟ್ ವಾದ್ರಾ ತಿಳಿಸಿದ್ದಾರೆ.

English summary
Congress leader Priyanka Gandhi is under self isolation after her husband Robert Vadra tested positive for Covid-19. She has cancelled all her meetings.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X