Get Updates
Get notified of breaking news, exclusive insights, and must-see stories!

Priyanka Gandhi: ಸಂಸತ್‌ನಲ್ಲಿ ಬಿಜೆಪಿಗೆ ಶಾಕ್‌ ಕೊಟ್ಟ ಪ್ರಿಯಾಂಕಾ ಗಾಂಧಿ ವಾದ್ರಾ: ಏನಿದು "ಬಾಂಗ್ಲಾ ಬ್ಯಾಗ್‌"

Bangladesh bag: ಸೋಮವಾರ ಸಂಸತ್ತಿಗೆ ಪ್ಯಾಲೆಸ್ತೀನ್‌ ಎಂದು ಬರೆಯಲಾಗಿರುವ ಬ್ಯಾಗ್‌ ಹಾಕಿಕೊಂಡು ಬಂದು ವಿವಾದಕ್ಕೆ ಕಾರಣವಾಗಿದ್ದ ಕಾಂಗ್ರೆಸ್‌ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಮಂಗಳವಾರ ಇನ್ನೊಂದು ಕಾರಣಕ್ಕೆ ಸುದ್ದಿಯಾಗಿದ್ದಾರೆ. ಮಂಗಳವಾರ ಅವರು ಸಂಸತ್ತಿಗೆ ಪ್ರವೇಶ ಮಾಡುವಾಗ ಮತ್ತೊಂದು ವಿಚಾರಕ್ಕೆ ಚರ್ಚೆಗೆ ಕಾರಣರಾಗಿದ್ದಾರೆ. ಮಂಗವಾರ ಅವರು ಬಾಂಗ್ಲಾದೇಶದ ಅಲ್ಪಸಂಖ್ಯಾತರಿಗೆ ಬೆಂಬಲ ಸೂಚಿಸಿದ್ದಾರೆ. ಮಂಗಳವಾರ ಸಂಸತ್‌ ಪ್ರವೇಶ ಮಾಡಿರುವ ಅವರು ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ಬರೆದಿರುವ ಬ್ಯಾಗ್‌ವೊಂದನ್ನು ತೆಗೆದುಕೊಂಡು ಬಂದಿದ್ದಾರೆ. ಸೋಮವಾರವಷ್ಟೇ ಅವರು ಪ್ಯಾಲೆಸ್ತೀನ್‌ನ ಎಂದು ಬರೆಯಲಾಗಿದ್ದ ಬ್ಯಾಂಗ್ ತೆಗೆದುಕೊಂಡು ಬಂದಿದ್ದರು. ಇದು ಸಾಕಷ್ಟು ವಿವಾದಕ್ಕೆ ಕಾರಣವಾಗಿತ್ತು.

ಈ ವಿವಾದದ ಬೆನ್ನಲ್ಲೇ ಮಂಗಳವಾರ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಬಾಂಗ್ಲಾದೇಶದಲ್ಲಿನ ಅಲ್ಪಸಂಖ್ಯಾತರಿಗೆ ಬೆಂಬಲ ಸೂಚಿಸಿದ್ದಾರೆ. ಪ್ರಿಯಾಂಕಾ ಅವರು ಇದೇ ಮೊದಲ ಬಾರಿ ರಾಜಕೀಯವಾಗಿ ಅಧಿಕೃತ ಪ್ರವೇಶ ಮಾಡಿದ್ದು, ಮೊಟ್ಟ ಮೊದಲ ಬಾರಿ ಸಂಸತ್‌ ಪ್ರವೇಶ ಮಾಡಿದ್ದಾರೆ. ಮೊದಲ ಸಂಸತ್‌ ಅಧಿವೇಶನದಲ್ಲೇ ಪ್ರಿಯಾಂಕಾ ಅವರು ಹಲವು ಕಾರಣಕ್ಕೆ ಚರ್ಚೆಯಲ್ಲಿದ್ದಾರೆ. ಮಂಗಳವಾರವೂ ಪ್ರಿಯಾಂಕಾ ಅವರು ಸಂಸತ್ತಿಗೆ ತೆಗೆದುಕೊಂಡು ಬಂದಿರುವ ಚಿತ್ರವು ಭಾರೀ ಚರ್ಚೆಯನ್ನು ಹುಟ್ಟುಹಾಕಿದೆ.

Priyanka Gandhi Vadra shocked BJP in Parliament with new Bangladesh bag

ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಯುತ್ತಿದೆ ಎಂದು ವರದಿಯಾಗುತ್ತಿದ್ದು, ಈ ವಿಚಾರವಾಗಿ ವಿಶ್ವದಾದ್ಯಂತ ಸುದ್ದಿಯಾಗುತ್ತಿದೆ. ಇದೀಗ ಈ ವಿಚಾರವನ್ನು ಪ್ರಸ್ತಾಪಿಸಿ ಈ ಬಗ್ಗೆ ಮಾತನಾಡಿ ಎಂದು ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಾಗೂ ಕಾಂಗ್ರೆಸ್‌ ಸೇರಿದಂತೆ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿವೆ.

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯಗಳನ್ನು ವಿರೋಧಿಸಿ ಸಂಸತ್‌ ಆವರಣದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಪ್ರಿಯಾಂಕಾ ಗಾಂಧಿ ಅವರೊಂದಿಗೆ ವಿರೋಧ ಪಕ್ಷದ ನಾಯಕರು ಭಿತ್ತಿಪತ್ರಗಳನ್ನು ಹಾಗೂ ಬ್ಯಾಗ್‌ಗಳನ್ನು ತೆಗೆದುಕೊಂಡಿ ಬಂದಿರುವುದು ಕಂಡುಬಂತು.

ಅದಾನಿ ವಿಷಯ ಚರ್ಚೆ: ಇನ್ನು ಸಂಸತ್‌ನಲ್ಲಿ ಬಹುಕೋಟಿ ಉದ್ಯಮಿ ಗೌತಮ್ ಅದಾನಿ ಅವರ ವಿಚಾರವಾಗಿ ಚರ್ಚೆ ಮಾಡಬೇಕು ಎಂದು ಕಾಂಗ್ರೆಸ್‌ ಹಾಗೂ ವಿರೋಧ ಪಕ್ಷಗಳು ಆಗ್ರಹಿಸಿವೆ. ಗೌತಮ್ ಅದಾನಿ ವಿಚಾರವಾಗಿ ಅಮೆರಿಕದ ಕೋರ್ಟ್‌ನಿಂದ ದೋಷಾರೋಪ ಪಟ್ಟಿ ಸಲ್ಲಿಕೆಯಾಗಿದೆ. ಇದಕ್ಕೆ ಸಂಬಂಧಿಸಿದಂತೆ ಗೌತಮ್‌ ಅದಾನಿಯನ್ನು ಯಾವುದೇ ಕ್ಷಣದಲ್ಲಾದರೂ ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿತ್ತು. ಈ ವಿಚಾರವಾಗಿ ಹೆಚ್ಚು ಚರ್ಚೆಯಾಗಿಲ್ಲ. ಆಡಳಿತ ಪಕ್ಷ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರು ಈ ವಿಚಾರವಾಗಿ ಮಾತನಾಡಬೇಕು ಎಂದು ಕಾಂಗ್ರೆಸ್‌ ನೇತೃತ್ವದ ವಿರೋಧ ಪಕ್ಷಗಳು ಆಗ್ರಹಿಸಿವೆ.

ಈ ಸಂಬಂಧ ಮಂಗಳವಾರ ಸಂಸತ್ತಿನ ಹೊರಗಡೆಯೂ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದ ಸಂಸದರು ಮೋದಿ-ಅದಾನಿ ಏಕ ಹೈ (ಮೋದಿ ಹಾಗೂ ಅದಾನಿ ಒಂದು) ಎನ್ನುವ ಸಂದೇಶವನ್ನು ಹೊಂದಿರುವ ಭಿತ್ತಿಪತ್ರಗಳಿರುವ ಬೋರ್ಡ್‌ ಹಿಡಿದುಕೊಂಡು ಪ್ರತಿಭಟನೆ ನಡೆಸಿದ್ದಾರೆ.

ನೂತನ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹೊಸ ವಿವಾದಕ್ಕೆ ನಾಂದಿ ಹಾಡಿದ್ದರು. ಈ ವಿಚಾರವು ಅಂತರರಾಷ್ಟ್ರೀಯ ಮಟ್ಟದಲ್ಲಿ ಚರ್ಚೆಗೆ ಕಾರಣವಾಗಿದೆ. ಸೋಮವಾರ ಸಂಸತ್‌ ಅಧಿವೇಶನಕ್ಕೆ ಬರುವ ಸಂದರ್ಭದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಪ್ಯಾಲೆಸ್ತೀನ್‌ಗೆ ಬೆಂಬಲ ಸೂಚಿಸುವ ಬ್ಯಾಗ್‌ ತಂದಿದ್ದರು. ಪ್ರಿಯಾಂಕಾ ಅವರು ತಂದಿರುವ ಬ್ಯಾಗ್‌ನ ಮೇಲೆ ಪ್ಯಾಲೆಸ್ತೀನ್ ಎಂದು ಬರೆಯಲಾಗಿತ್ತು. ಈ ವಿಚಾರದ ಬಗ್ಗೆ ಪರ - ವಿರೋಧ ಚರ್ಚೆಗಳು ಪ್ರಾರಂಭವಾಗಿತ್ತು. ಪ್ರಿಯಾಂಕಾ ಅವರ ನಡೆಗೆ ಪಾಕಿಸ್ತಾನದಿಂದಲೂ ಬೆಂಬಲ ವ್ಯಕ್ತವಾಗಿತ್ತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+