ಭಾಸ್ಕರ್ ರಾವ್ ಗೆ ಹಿನ್ನಡೆ, ತನಿಖೆ ಮುಂದುವರೆಯಲಿ : ಸುಪ್ರೀಂ
ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಕೊಂಡಿರುವ ನ್ಯಾ. ವೈ ಭಾಸ್ಕರ್ ರಾವ್ ಅವರಿಗೆ ಭಾರಿ ಹಿನ್ನಡೆಯಾಗಿದೆ. ತಮ್ಮ ಮೇಲಿನ ಚಾರ್ಜ್ ಶೀಟ್ ರದ್ದುಗೊಳಿಸುವಂತೆ ಕೋರಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ
ನವದೆಹಲಿ, ಮಾರ್ಚ್ 06: ಭ್ರಷ್ಟಾಚಾರ ಪ್ರಕರಣದಲ್ಲಿ ಜಾಮೀನು ಪಡೆದು ಕೊಂಡಿರುವ ನ್ಯಾ. ವೈ ಭಾಸ್ಕರ್ ರಾವ್ ಅವರಿಗೆ ಭಾರಿ ಹಿನ್ನಡೆಯಾಗಿದೆ. ತಮ್ಮ ಮೇಲಿನ ಚಾರ್ಜ್ ಶೀಟ್ ರದ್ದುಗೊಳಿಸುವಂತೆ ಕೋರಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ(ಮಾರ್ಚ್ 06) ವಜಾಗೊಳಿಸಿದೆ.
ಲೋಕಾಯುಕ್ತದಲ್ಲಿ ಅಧಿಕಾರ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮನ್ಸ್ ಪಡೆದುಕೊಂಡಿದ್ದ ನ್ಯಾ. ವೈ ಭಾಸ್ಕರ್ ರಾವ್ ಅವರಿಗೆ ವಿಶೇಷ ನ್ಯಾಯಾಲಯದಿಂದ ಈಗಾಗಲೇ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರಾಗಿದೆ.

ತಮ್ಮ ಮೇಲಿನ ಚಾರ್ಜ್ ಶೀಟ್ ರದ್ದುಗೊಳಿಸುವಂತೆ ಕೋರಿ ಹೈಕೋಟಿಗೆ ನ್ಯಾ. ಭಾಸ್ಕರ್ ರಾವ್ ಅವರು ಅರ್ಜಿ ಸಲ್ಲಿಸಿದ್ದರು. ಆದರೆ, ಹೈಕೋರ್ಟಿನಲ್ಲಿ ನವೆಂಬರ್ 22, 2016ರಂದು ಅರ್ಜಿ ವಜಾಗೊಂಡಿತ್ತು. ಹೀಗಾಗಿ, ಈ ಪ್ರಕರಣದಲ್ಲಿ ಇಲ್ಲಿ ತನಕ 11 ಜನ ಆರೋಪಿಗಳಿಗೆ ಜಾಮೀನು ಸಿಕ್ಕಿದೆ. ನ್ಯಾ.ವೈ ಭಾಸ್ಕರ್ ರಾವ್ ಅವರು 7ನೇ ಆರೋಪಿಯಾಗಿದ್ದಾರೆ












Click it and Unblock the Notifications