ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖ್ಯಾತ ವಿಜ್ಞಾನಿ ಸಿಎನ್‌ಆರ್ ರಾವ್‌ಗೆ ಇಎನ್‌ಐ ಅಂತಾರಾಷ್ಟ್ರೀಯ ಪ್ರಶಸ್ತಿ

|
Google Oneindia Kannada News

ಬೆಂಗಳೂರು, ಮೇ 29: ಶಕ್ತಿ ಸಂಶೋಧನೆಯಲ್ಲಿ ನೊಬೆಲ್ ಪ್ರಶಸ್ತಿ ಎಂದೇ ಪರಿಗಣಿಸಲಾಗುವ ಪ್ರತಿಷ್ಠಿತ ಎನರ್ಜಿ ಫ್ರಾಂಟಿಯರ್ ಪ್ರಶಸ್ತಿಯನ್ನು ಖ್ಯಾತ ವಿಜ್ಞಾನಿ ಪ್ರಿ. ಸಿ.ಎನ್.ರಾವ್ ಮುಡಿಗೇರಿಸಿಕೊಂಡಿದ್ದಾರೆ.

ಪ್ರೊ. ರಾವ್ ಅವರು ಶಕ್ತಿಯ ಮೂಲವಾಗಿ ಹೈಡ್ರೋಜನ್ ಮೇಲೆ ಕೆಲಸ ಮಾಡುತ್ತಿದ್ದಾರೆ. ಹೈಡ್ರೋಜನ್ ಸಂಗ್ರಹಣೆ, ಹೈಡ್ರೋಜನ್ ನ ದ್ಯುತಿ ರಾಸಾಯನಿಕ ಮತ್ತು ಎಲೆಕ್ಟ್ರೋಕೆಮಿಕಲ್ ಉತ್ಪಾದನೆ, ಹೈಡ್ರೋಜನ್ ನ ಸೌರ ಉತ್ಪಾದನೆ ಮತ್ತು ಲೋಹವಲ್ಲದ ವೇಗವರ್ಧನೆ ಅವರ ಕೆಲಸದ ಪ್ರಮುಖ ಅಂಶಗಳಾಗಿರುವ ಬಗ್ಗೆ ಮೆಚ್ಚುಗೆ ವ್ಯಕ್ತವಾಗಿದೆ.

ನವೀಕರಿಸಬಹುದಾದ ಇಂಧನ ಮೂಲಗಳು ಮತ್ತು ಇಂಧನ ಸಂಗ್ರಹಣೆಯ ಸಂಶೋಧನೆಗಾಗಿ ಈ ಪ್ರಶಸ್ತಿ ಸಂದಿದೆ. ಇದನ್ನು ಎನರ್ಜಿ ಫ್ರಾಂಟಿಯರ್ ಪ್ರಶಸ್ತಿ ಎಂದು ಕರೆಯಲಾಗುತ್ತದೆ. ಶಕ್ತಿ ಸಂಶೋಧನೆಯಲ್ಲಿ ನೊಬೆಲ್ ಪ್ರಶಸ್ತಿ ಎಂದು ಗುರುತಿಸಲಾಗಿದೆ.

Prof CNR Rao Bags Eni International Award For Renewable Energy Research

ರೋಮ್ ನಲ್ಲಿ ಅಕ್ಟೋಬರ್ 14 ರಂದು ನಡೆಯಲಿರುವ ಸಮಾರಂಭದಲ್ಲಿ ಅಧಿಕೃತವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಮೂಲಗಳು ತಿಳಿಸಿವೆ.

ಪ್ರೊಫೆಸರ್ ರಾವ್ ಶಕ್ತಿಯ ಮೂಲವಾಗಿ ಹೈಡ್ರೋಜನ್ ಮೇಲೆ ಕೆಲಸ ಮಾಡುತ್ತಿದ್ದಾರೆ. ಹೈಡ್ರೋಜನ್ ಸಂಗ್ರಹಣೆ, ಹೈಡ್ರೋಜನ್ ನ ದ್ಯುತಿ ರಾಸಾಯನಿಕ ಮತ್ತು ಎಲೆಕ್ಟ್ರೋಕೆಮಿಕಲ್ ಉತ್ಪಾದನೆ, ಹೈಡ್ರೋಜನ್ ನ ಸೌರ ಉತ್ಪಾದನೆ ಮತ್ತು ಲೋಹವಲ್ಲದ ವೇಗವರ್ಧನೆ ಅವರ ಕೆಲಸದ ಪ್ರಮುಖ ಅಂಶಗಳಾಗಿವೆ.

English summary
Bharat Ratna Professor C.N.R. Rao has received International Eni Award 2020 for research into renewable energy sources and energy storage, also called the Energy Frontier award. This is considered to be the Nobel Prize in Energy Research.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X